LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಪತ್ರಕರ್ತೆ ಸುನಯನ ಈಗ ನಿರ್ದೇಶಕಿ

ಪತ್ರಕರ್ತೆ ಸುನಯನಾ ಸುರೇಶ್ ನಿರ್ದೇಶನದತ್ತ ಧುಮುಕಿದ್ದಾರೆ.ಸಿನಿಮಾ ನಿರ್ಮಾಣಕ್ಕೆ ಹೊಸಬರಲ್ಲದ ಸುನಯನಾ, ಈ ಹಿಂದೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕಿಯಾಗಿದ್ದರು.ಕೆಲವು ಚಿತ್ರಗಳಿಗೆ ಸ್ಕ್ರಿಪ್ಟ್ ಕೆಲಸದಲ್ಲಿ, ಮೀಡಿಯಾ ಸ್ಟ್ರಾಟೆಜಿಸ್ಟ್ ಮತ್ತು ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಕೆಲಸ ಮಾಡಿದ್ದಾರೆ. ಈಗ ಸುನಯನಾ, ಮೌನ ರಾಗ ಎಂಬ ಕಿರುಚಿತ್ರಕ್ಕೆ ಬರಹಗಾರರಾಗಿ, ನಿರ್ಮಾಪಕಿ ಮತ್ತು ನಿರ್ದೇಶಕರಾಗುತ್ತಿದ್ದಾರೆ.

ಈ ಹೊಸ ಹೆಜ್ಜೆಯ ಬಗ್ಗೆ ಮಾತನಾಡುವ ಅವರು, "2000ರ ದಶಕದ ಆರಂಭದಲ್ಲಿ ಇಂಡೀ ಫಿಲ್ಮ್ ಮೇಕಿಂಗ್ ಅಲೆಯು ಸಿನಿಮಾ ಮತ್ತು ಸಿನಿಮಾ ನಿರ್ಮಾಣದ ಮೇಲಿನ ನನ್ನ ಪ್ರೀತಿಯನ್ನು ಮತ್ತಷ್ಟು ಹೆಚ್ಚಿಸಿತು. ನಾಗೇಶ್ ಕುಕುನೂರ್ ಅವರಂತಹ ಹೆಸರುಗಳಿಂದ ಸಿನಿಮಾ ನನ್ನನ್ನು ಸೆಳೆಯಿತು. ಮಾಧ್ಯಮ ಪ್ರತಿನಿಧಿಯಾಗಿ ಮತ್ತು ಸಿನಿಮಾ ವಿಮರ್ಶಕಿಯಾಗಿ ಎರಡು ದಶಕಗಳ ಕಾಲ ಸಿನಿಮಾ ಮತ್ತು ಸಿನಿಮಾ ನಿರ್ಮಾಣವನ್ನು ಸೂಕ್ಷ್ಮವಾಗಿ ಗಮನಿಸಿದೆ" ಎಂದಿದ್ದಾರೆ ಸುನಯನಾ.

ಮುಂದುವರಿದು ಮಾತನಾಡುವ ಅವರು, "ಕಳೆದೆರಡು ವರ್ಷಗಳಿಂದ ಸಿನಿಮಾ ನಿರ್ಮಾಣ, ಕಾಸ್ಟಿಂಗ್, ಸ್ಕ್ರಿಪ್ಟ್ ಡಾಕ್ಟರಿಂಗ್ ಮತ್ತು ಪಬ್ಲಿಸಿಟಿಯ ವಿವಿಧ ಆಯಾಮಗಳನ್ನು ಅವಲೋಕಿಸಿದೆ. ಅದರಂತೆ ಈಗ ಮೌನ ರಾಗದ ಮೂಲಕ ಚಿತ್ರನಿರ್ಮಾಪಕಿಯಾಗಿದ್ದೇನೆ, ಇದು ನಾನು ಪ್ರೀತಿಯಿಂದ ಬರೆದು ನಿರ್ದೇಶಿಸಿದ ಕಿರುಚಿತ್ರ? ಎಂದು ಸುನಯನಾ ಹೇಳಿದ್ದಾರೆ.

ಮೌನ ರಾಗ ಕಿರುಚಿತ್ರಕ್ಕೆ ಪ್ರೀತಾ ಜಯರಾಮನ್ ಛಾಯಾಗ್ರಾಹಕರಾಗಿದ್ದಾರೆ. ಶ್ರುತಿ ಹರಿಹರನ್ ನಾಯಕಿ. ಇವರಲ್ಲದೆ ಬಾದಲ್ ನಂಜುಂಡಸ್ವಾಮಿ ಅವರ ಕಲಾ ನಿರ್ದೇಶನ ಮತ್ತು ಆಲ್ ಓಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಚಿತ್ರದಲ್ಲಿ ಅಗ್ನಿವ್ ಪ್ರಮುಖ ಪಾತ್ರದಲ್ಲಿದ್ದಾರೆ. ಈ ಚಿತ್ರದಲ್ಲಿ ನಟಿಯರಾದ ಸಂಯುಕ್ತಾ ಹೊರ್ನಾಡ್, ಸೂರಜ್ ಗೌಡ, ರಾಜಶ್ರೀ ಪೊನ್ನಪ್ಪ, ಅನಿರುದ್ಧ್ ಆಚಾರ್ಯ, ಹರ್ಷಿಲ್ ಕೌಶಿಕ್ ಮತ್ತು ಆಲ್ ಒಕೆ ನಟಿಸಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು