LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

JPC ಅಧ್ಯಕ್ಷರಿಂದ ವಕ್ಫ್ ಕಾಯ್ದೆಗೆ ತಿದ್ದುಪಡಿ ಭರವಸೆ: ಯತ್ನಾಳ್ ಧರಣಿ ಅಂತ್ಯ

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ 'ವಕ್ಫ್ ಹಠಾವೋ, ದೇಶ ಬಚಾವೋ' ಎಂಬ ಘೋಷಣೆಯೊಂದಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಗುರುವಾರ ಅಂತ್ಯವಾಗಿದೆ.

ಇಂದು ಧರಣಿ ಸ್ಥಳಕ್ಕೆ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹಾಗೂ ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ ಅವರು ಭೇಟಿ ನೀಡಿ, ವಕ್ಪ್ ಬೋರ್ಡ್ ಸಮಸ್ಯೆ ಆಲಿಸಿ ಅಹವಾಲು ಸ್ವೀಕರಿಸಿದರು. ಅಲ್ಲದೆ ಎಲ್ಲಾ ಸಮಸ್ಯೆಗಳಿಗೆ ಹೊಸ ವಕ್ಪ್ ತಿದ್ದುಪಡಿ ಕಾಯ್ದೆ ಮೂಲಕ ಪರಿಹಾರ ನೀಡುವ ಭರವಸೆ ನೀಡಿದ ನಂತರ ಧರಣಿ ಹಿಂಪಡೆಯಲಾಯಿತು.

ಈ ವೇಳೆ ಮಾತನಾಡ ಪಾಲ್ ಅವರು, ಜೆಪಿಸಿ ಮೂಲಕ ವಕ್ಪ್ ಕಾಯ್ದೆಗೆ ಪಾರದರ್ಶಕ ತಿದ್ದುಪಡಿ ತರಲಾಗುವುದು. ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುವುದು. ಭವಿಷ್ಯದಲ್ಲಿ ವಕ್ಪ್ ನಿಂದ ರೈತರಿಗೆ, ಮಠ, ಮಂದಿರ, ಐತಿಹಾಸಿಕ ಸ್ಮಾರಕ ಸೇರಿದಂತೆ ಯಾರಿಗೂ ತೊಂದರೆಯಾಗದಂತೆ ಅಗತ್ಯ ತಿದ್ದುಪಡಿ ತರಲು ಜೆಪಿಸಿ ಪೂರಕ ಸಲಹೆ ನೀಡಲಿದೆ ಎಂದು ಹೇಳಿದರು.

ಅಗತ್ಯಬಿದ್ದರೆ ರೈತರಿಗೆ ನೋಟಿಸ್ ನೀಡಿರುವ ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವಕ್ಫ್ ಬೋರ್ಡ್ ಅಧಿಕಾರಿಗಳನ್ನು ದೆಹಲಿಗೆ ಕರೆಯಿಸಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪಾಲ್ ಎಚ್ಚರಿಕೆ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು