LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಾದಾಡಿ ಲಿರಿಕಲ್ ಹಾಡು ಬಿಡುಗಡೆ

ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ಈಗ ಆದಿತ್ಯ ಶಶಿಕುಮಾರ್ ಅಂತ ಹೆಸರು ಬದಲಾಯಿಸಿಕೊಂಡಿದ್ದು, 'ಕಾದಾಡಿ' ಎನ್ನುವ ಚಿತ್ರದಲ್ಲಿ ನಟಿಸಿದ್ದಾರೆ. ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಂಡಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಪ್ರಚಾರದ ಸಲುವಾಗಿ ಮೊನ್ನೆಯಷ್ಟೇ ನಾಯಕನ ಪರಿಚಯದ ಎರಡನೇ ಲಿರಿಕಲ್ ವಿಡಿಯೋ ಹಾಡನ್ನು ಬಿಡುಗಡೆ ಮಾಡಲಾಗಿದೆ.

ಎನ್.ಮಾರುತಿ ಸಾಹಿತ್ಯದ 'ಕಲೆಯು ಇರಬೇಕು, ಮನೆಯು ಇರಬೇಕು, ಗುಡಿಯು ಇರಬೇಕು, ಕುಲವುನೂ ಇರಬೇಕು. ಸಹನೆಯು ಇರಬೇಕು, ಸಾಧನೆಯು ಇರಬೇಕು, ಗೆಲುವು ಇರಬೇಕು, ಸೋತರೂ ಗೆಲ್ಲುವ ಛಲವು ಇರಬೇಕು' ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದಾರೆ.ತ್ಯಾಗಮಯವಾಗುತ್ತಿರುವ ಜನರ ಜೀವನವು ದಿನದ ಅಂತ್ಯದಲ್ಲಿ ಪ್ರತಿಯೊಬ್ಬರು ತ್ಯಾಗಮಯಿರಾಗುತ್ತಾರೆ. ನಾವೆಲ್ಲರೂ ಕಾದಾಡುತ್ತಾ ಒಂದು ದಿನ ಸಾಯುತ್ತೇವೆ.

ಆದರೆ ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು.ಮಕ್ಕಳಿಗೆ ಏನಾದರೂ ಆಗಬೇಕು. ನಾವು ದಿನದಿಂದ ದಿನಕ್ಕೆ ಹೋರಾಟ ನಡೆಸುತ್ತಿದ್ದೆವೆ. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನಮಾಡಲಾಗಿದೆ.ಲಾವಣ್ಯಸಾಹುಕಾರ, ಚಾಂದಿನಿತಮಿಳರಸನ್ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‍ಮನೋಹರ್, ಶ್ರವಣ್‍ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ.

ಛಾಯಾಗ್ರಹಣ ಡಿ.ಯೋಗಿಪ್ರಸಾದ್, ಕಲೆ ಅರ್ಜುನ್‍ಸೂರಿಸೆಟ್ಟಿ, ಸಂಕಲನ ಪ್ರಕಾಶ್‍ತೋಟ, ನೃತ್ಯ ರಾಜ್‍ಪಿಡಿ-ರಾಜ್‍ಕೃಷ್ಣ, ಸಾಹಸ ಬಿ.ಎಲ್.ಸತೀಶ್-ವಿನ್‍ಚೇನ್‍ಆಂಜಿ-ಬಿಂಬಸಾರ-ರಾಮಕೃಷ್ಣ-ರಾಮಸುಂಕರ ಅವರದಾಗಿದೆ. ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಅಂದಹಾಗೆ ಸಿನಿಮಾವು ಜೂನ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು