LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಗ್ಗಂಟಾದ ಕೋಲಾರ ಕೈ ಟಿಕೆಟ್

ಬೆಂಗಳೂರು: ಲೋಕಸಭಾ ಚುನಾವಣೆಯ ಅಧಿಸೂಚನೆ ರಾಜ್ಯದಲ್ಲಿ ಹೊರಡಿಸಲು ಕ್ಷಣಗಣನೆ ಆರಂಭಗೊಂಡಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷದ ವತಿಯಿಂದ ಅಭ್ಯರ್ಥಿ ಆಯ್ಕೆಗಾಗಿ ತೀವ್ರ ಕಸರತ್ತು ನಡೆದಿದೆ.

ಸಚಿವ ಕೆ. ಎಚ್. ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣಗಳ ನಡುವೆ ನಡೆಯುತ್ತಿರುವ ಗುದ್ದಾಟ ತೀವ್ರ ಗೊಂಡಿದೆ. ಒಂದು ಹಂತದಲ್ಲಿ ಸಚಿವ ಮುನಿಯಪ್ಪ ಸಂಬಂಧಿ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಲಾಗುವುದು...ಎಂಬುದನ್ನು ಗಮನಿಸಿದ ಜಿಲ್ಲೆಯ ಐವರು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಮಾಧ್ಯಮವೊಂದರೊಂದಿಗೆ ಮಾತನಾಡುತ್ತಾ ತಮ್ಮ ಅಸಮಾಧಾನವನ್ನು ಹೊರಹಾಕಿ ಈಗಾಗಲೇ ತಾವುಗಳು ವಿಧಾನಸಭಾಧ್ಯಕ್ಷರನ್ನು ಭೇಟಿಯಾಗಲು ಸಮಯ ಕೋರಿದ್ದು, ಐವರು ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿದ್ದೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಕೊತ್ತೂರು ಮಂಜುನಾಥ ಸೇರಿದಂತೆ ಸಚಿವ ಎಂ.ಸಿ.ಸುಧಾಕರ್, ಮಾಲೂರು ಶಾಸಕ ನಂಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಅನಿಲ್‍ಕುಮಾರ್, ನಜೀರ್ ಅಹಮದ್ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟಾರೆ ಕೋಲಾರದಲ್ಲಿ ಕಾಂಗ್ರೆಸ್ ಟಿಕೆಟ್‍ನ ಬಿಕ್ಕಟ್ಟು ಇನ್ನು ಬಗೆಹರಿದಿಲ್ಲ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು