ಬೆಂಗಳೂರು: ಇತ್ತೀಚೆಗೆ ಭಾರತೀಯ ಜನತಾ ಪಾರ್ಟಿಯಿಂದ ರಾಜ್ಯ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನಾ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಸಮಾವೇಶ ನಡೆಸಲು ಸಿದ್ಧತೆ ನಡೆಸಲು ಮುಂದಾಗಿದೆ. ಪ್ರಮುಖವಾಗಿ ಕಾಂಗ್ರೆಸ್ ಪಾದಯಾತ್ರೆ ಮಾಜಿ ಸಚಿವ ನಾಗೇಂದ್ರ ವಿರುದ್ಧವಾಗಿ ನಡೆಸಲು ನಿರ್ಧರಿಸಲಾಗಿತ್ತಾದರೂ ತದನಂತರ ನಡೆದ ಬೆಳವಣಿಗೆಗಳಲ್ಲಿ ಪಾದಯಾತ್ರೆ ಸ್ವರೂಪವೇ ಬದಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಎಂದು ಹೇಳಲಾಗಿತ್ತಾದರೂ ಬಿಜೆಪಿ ಪಾದಯಾತ್ರೆ ಒಂದು ರೀತಿಯಲ್ಲಿ ವಿಜಯೇಂದ್ರ ಅವರನ್ನು ವೈಭವೀಕರಿಸುವ ಸಮಾವೇಶವೆಂದೇ ಚರ್ಚೆ ನಡೆಯುತ್ತಿದೆ.
ವಿಜಯೇಂದ್ರ ನಾಯಕತ್ವವನ್ನು ಬಿಜೆಪಿಯಲ್ಲಿ ಗಟ್ಟಿಗೊಳಿಸುವ ಸಂಬAಧ ನಡೆಸಲಾಯಿತು ಎಂದು ಇದೀಗ ವ್ಯಾಖ್ಯಾನಿಸಲಾಗುತ್ತಿದೆ. ಪಾದಯಾತ್ರೆಯ ಕಡೆಯ ದಿನದಂದು ನಡೆದ ಬಹಿರಂಗ ಸಮಾವೇಶಕ್ಕೆ ಪರ್ಯಾಯವಾಗಿ ಕಾಂಗ್ರೆಸ್ ಸಹ ತನ್ನ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅತೀ ಶೀಘ್ರದಲ್ಲಿಯೇ ಬಳ್ಳಾರಿಯಲ್ಲಿ ಜಿಲ್ಲಾ ಸಮಾವೇಶವನ್ನು ನಡೆಸಿ ಸರ್ಕಾರದ ಮೂರು ವರ್ಷಗಳ ಸಾಧನೆ ಹಾಗೂ ಡಿಕೆಶಿ ಅವರ 100 ದಿನಗಳ ಸಾಧನೆ ಜನತೆಗೆ ವಿವರಿಸುವಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ. ಜಿಲ್ಲೆಯ ಪ್ರಮುಖ ಕಾಂಗ್ರೆಸ್ ನಾಯಕರನ್ನೊಳಗೊಂಡ ಸಭೆಯೊಂದನ್ನು ನಡೆಸಿ ಸಮಾವೇಶವದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ಹೇಳಲಾಗುತ್ತಿದೆ. ಈ ಸಮಾವೇಶಕ್ಕೆ ಮುಖ್ಯಮಂತ್ರಿ ಸೇರಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ನಾಯಕರನ್ನೊಳಗೊಂಡ ಪ್ರಮುಖರನ್ನು ಆಹ್ವಾನಿಸಲಾಗುವುದು. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ನಡೆದ ಅನೇಕ ಹಗರಣಗಳನ್ನು ಮುಂದಿಟ್ಟು ಮುಂದಿನ 28ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ತಯಾರಾಗುತ್ತಿದೆ.ಒಟ್ಟಾರೆ ಮುಂದಿನ ದಿನಗಳಲ್ಲಿ 28ರ ವಿಧಾನಸಭಾ ಚುನಾವಣೇಗೆ ಸಿದ್ಧತೆ ನಡೆಸುವುದೇ ಪಕ್ಷದ ಪ್ರಮುಖ ಅಜಂಡ ಆಗಿದೆ ಎಂದು ಮುಖಂಡರೊಬ್ಬರು ತಿಳಿಸಿದ್ದಾರೆ.