LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಕನ್ನಡ ನಾಮಫಲಕ ಜಾಗೃತಿ ಅಭಿಯಾನ

ದೊಡ್ಡಬಳ್ಳಾಪುರ: ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಪಾಲಿಸುವಂತೆ ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಗರದ ಹಲವು ರಸ್ತೆಗಳಲ್ಲಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ನಡೆಸಲಾಯಿತು.

ಈ ವೇಳೆ ಮಾತನಾಡಿದ ಮುಖಂಡರು, ತಾಲ್ಲೂಕಿನಲ್ಲಿ ಹಲವಾರು ವರ್ಷಗಳಿಂದ ಹಲವು ರಾಜ್ಯದ, ಹಲವು ಭಾಷೆಯ ಎಲ್ಲಾ ಧರ್ಮದ ಜನರು ಇಲ್ಲಿ ಬಂದು ತಮ್ಮ ಜೀವನೋಪಾಯಕ್ಕೆ ಒಂದಲ್ಲ ಒಂದು ರೀತಿಯ ಉದ್ಯೋಗ ಮಾಡಿಕೊಂಡಿದ್ದಾರೆ. ಅದರಲ್ಲೂ ಮಗ್ಗಗಳ ನೇಕಾರಿಕೆಯಲ್ಲಿ ಸುಮಾರು ಸಾವಿರಾರು ಜನ ಬಂದು ನೆಲೆಸಿದ್ದಾರೆ.

ಅದೇ ರೀತಿ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಲ್ಲಿ ಮತ್ತು ಕಟ್ಟಡ ಕಾರ್ಮಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಕೈಗಾರಿಕಾ ನಿಯಮದ ಪ್ರಕಾರ ನಮ್ಮ ಕನ್ನಡಿಗರಿಗೆ ಸಿಗಬೇಕಾದ ಉದ್ಯೋಗಗಳು ಅನ್ಯ ರಾಜ್ಯದವರ ಪಾಲಾಗುತ್ತಿವೆ. ಆದರೆ ಇಂದು ಇಲ್ಲಿ ಬಂದು ನೆಲೆಸಿರುವ ಬೇರೆ ರಾಜ್ಯದ ಜನ ಇಲ್ಲಿಯ ಭಾಷೆ, ಸಂಸ್ಕೃತಿ, ನೆಲ, ಜಲಕ್ಕೆ ಗೌರವ ಕೊಡುವುದು ಅವರ ಕರ್ತವ್ಯ.

ಎಲ್ಲಿಯ ನೆಲ ನಮಗೆ ಜೀವನ ಕೊಡುತ್ತದೆಯೋ ಅದೇ ಭೂಮಿ ತಾಯಿ ಸಮಾನ. ಆದರೆ ಸ್ಥಳೀಯ ರಾಜಕೀಯ ನಾಯಕರ ಅಧಿಕಾರದ ಲಾಲಸೆಗೆ ನಾಡು, ನುಡಿ, ಜಲ, ಹೆಸರೇಳಿಕೊಂಡು ಅಧಿಕಾರ ಅನುಭವಿಸಿದವರು, ಊರಿಗೆ ಏನು ಮಾಡಿಲ್ಲ. ಕನ್ನಡದ ಹೆಸರೇಳಿಕೊಂಡು ರಾಜ್ಯ ಮಟ್ಟದ ಸನ್ಮಾನಗಳು ದಕ್ಕಿಸಿಕೊಂಡರೆ ಹೊರತು ಸರಿಯಾದ ಆಡಳಿತ ನಡೆಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಲೂ ಕೆಲವರು ಇದೆ ಕನ್ನಡ ಎಂಬ ಪದ ಬಳಕೆ ಮಾಡಿಕೊಂಡು ಕನ್ನಡಿಗರಿಗೆ ಯಾಮಾರಿಸುತ್ತಾ ಮುಂದುವರಿದಿದ್ದಾರೆ ಎಂದು ಆರೋಪಿಸಿದರು.ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ನಾಮಫಲಕಗಳಲ್ಲಿ ಕನ್ನಡ ಭಾಷೆ 60% ಕಡ್ಡಾಯವಾಗಿ ಇರಬೇಕು ಎಂಬ ಆದೇಶದ ಬಗ್ಗೆ ಹೇಳುವುದಾದರೆ ಬಹುತೇಕ ವ್ಯಾಪಾರಸ್ಥರು ತಮ್ಮ ಅಂಗಡಿ ಇನ್ನಿತರೆ ಕಡೆಗಳಲ್ಲಿ ಸರ್ಕಾರದ ಆದೇಶದಂತೆ ನಾಮಫಲಕಗಳನ್ನು ಬದಲಾಯಿಸಿಲ್ಲ.

ನಗರಸಭೆ ಅಧಿಕಾರಿಗಳು ಅಂಗಡಿ ಪರವಾನಗಿ ನೀಡುವಾಗ ಕನ್ನಡ ಕಡ್ಡಾಯದ ಬಗ್ಗೆ ವಿವರಿಸಿಲ್ಲ. ಇದಕ್ಕೆ ಕಾರಣ ಅಧಿಕಾರಿಗಳು ಮತ್ತು ಕನ್ನಡದ ಹೆಸರೇಳಿಕೊಂಡು ರಾಜಕೀಯ ಮಾಡುತ್ತಿರುವವರೆ ಕಾರಣ ಕನ್ನಡಿಗರು ನಿರ್ವಿಯರು ಎಂದು ತಿಳಿದಿರುವ ಅನ್ಯಭಾಷಿಕರು ತಮ್ಮ ಅಟ್ಟಹಾಸ ಮುಂದುವರಿಸಿದ್ದಾರೆ ಎಂದರು.

ನಾಮಫಲಕಗಳಲ್ಲಿ ಸಂಪೂರ್ಣ ಕನ್ನಡ ಬಳಕೆ ಮಾಡಿದವರಿಗೆ ಅಭಿನಂದನೆ ತಿಳಿಸಿದ ಸಂಘಟನೆಗಳ ಮುಖಂಡರು, ನಿಯಮ ಪಾಲಿಸದವರಿಗೆ ಹದಿನೈದು ದಿನಗಳ ಕಾಲಾವಕಾಶ ನೀಡಿ ಒಂದು ವೇಳೆ ಪಾಲಿಸದೆ ಹೋದರೆ ಕಾನೂನು ಮೂಲಕ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದರು.

ಶ್ರೀನೆಲದಾಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಿಂದ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟ ಮುಖಂಡರು ಹಾಗೂ ಕಾರ್ಯಕರ್ತರು ಕರಪತ್ರಗಳನ್ನು ಹಂಚಿ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಿದರು. ಅಭಿಯಾನದಲ್ಲಿ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕನ್ನಡ ಜಾಗೃತಿ ವೇದಿಕೆ, ನೊಂದವರ ಬಂಧು ಸೇವಾ ಸಂಸ್ಥೆ, ಜಯ ಕರ್ನಾಟಕ, ಕೆ.ಆರ್.ಎಸ್. ಪಕ್ಷ, ಮಹಾಕರ್ನಾಟಕ ಸಮಾಜ ಸೇವಾ ಸಂಘ, ಡಾ. ವಿಷ್ಣು ಸೇನಾ ಸಮಿತಿ, ಧೃವಸರ್ಜಾ ಅಭಿಮಾನಿ ಸಂಘ, ಕರ್ನಾಟಕ ನವ ನಿರ್ಮಾಣ ಸೇನೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ದಲಿತ ಸಿಂಹ ಗರ್ಜನೆ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು