ಗೌರಿಬಿದನೂರು: ಕನ್ನಡ ರಾಜ್ಯೋತ್ಸವ ಎನ್ನುವುದು ನಾಡಿನ ಜನರು ಮನೆ ಮನಗಳಲ್ಲಿ ಆಚರಿಸುವ ಹಬ್ಬವಾಗಿದೆ ಎಂದು ಶಾಸಕ ಕೆ ಎಚ್ ಪುಟ್ಟಸ್ವಾಮಿ ಗೌಡ ಹೇಳಿದರು.
ನಗರದ ನೇತಾಜಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕವು ಕೇವಲ ಭೌಗೋಳಿಕ ಪ್ರದೇಶವಲ್ಲ, ಶಿಕ್ಷಣ, ತಾಂತ್ರಿಕತೆ, ನೈಸರ್ಗಿಕ ಸಂಪನ್ಮೂಲಗಳು ಹಾಗೂ ಯುವಶಕ್ತಿಯಿಂದ ಕೂಡಿದ ಅಪಾರ ಸಾಮರ್ಥ್ಯ ಹೊಂದಿರುವ ನಾಡಾಗಿದೆ. ವಿಶ್ವದ ಭೂಪಟದಲ್ಲಿ ಕರ್ನಾಟಕಕ್ಕೆ ವಿಶೇಷ ಸ್ಥಾನವಿದೆ. ಯುವಶಕ್ತಿ ಇನ್ನಷ್ಟು ಶ್ರಮವಹಿಸಿ ಕೆಲಸ ಮಾಡಿದರೆ ಮುಂದುವರಿದ ದೇಶಗಳಂತೆ ಕರ್ನಾಟಕವೂ ಮುಂಚೂಣಿಯಲ್ಲಿ ನಿಲ್ಲಲಿದೆ. ಇದಕ್ಕೆ ಮೊದಲು ವಿಧಾನಸೌಧದ ಮೂರನೇ ಮಹಡಿಯಲ್ಲಿರುವವರು ಸರಿಯಾಗಬೇಕು. ಆಗ ಇಡೀ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆಯಾಗಿ ರಾಜ್ಯ ಅಭಿವೃದ್ಧಿಯತ್ತ ಸಾಗಲಿದೆ ಎಂದು ಹೇಳಿದರು.
ದೇಶದಲ್ಲಿ ಸಂಸ್ಕöÈತ, ಕನ್ನಡ ಮತ್ತು ತಮಿಳು ಮಾತ್ರ ಪುರಾತನ ಭಾಷೆಗಳಾಗಿವೆ. ಹರಿದು ಹಂಚಿಹೋಗಿದ್ದ ಕನ್ನಡ ನಾಡನ್ನು ಕವಿಗಳು, ಹೋರಾಟಗಾರರು, ಕನ್ನಡ ಪ್ರೇಮಿಗಳು ಸೇರಿದಂತೆ ಅನೇಕ ಮಹನೀಯರು ಒಗ್ಗೂಡಿಸುವಲ್ಲಿ ಶ್ರಮಿಸಿದ್ದಾರೆ. ಕದಂಬರು ಮತ್ತು ಚಾಲುಕ್ಯರಂತಹ ರಾಜವಂಶಗಳು ಆಳಿದ ಹೆಮ್ಮೆಯ ಇತಿಹಾಸ ಕರ್ನಾಟಕಕ್ಕಿದೆ ಎಂದರು.
ತಹಶೀಲ್ದಾರ್ ಅರವಿಂದ್ ಕೆ.ಎಂ. ಮಾತನಾಡಿ, ಕನ್ನಡ ಭಾಷೆಗೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಹಳೆಗನ್ನಡ ಮತ್ತು ಹೊಸಗನ್ನಡ ಸಾಹಿತ್ಯಕ್ಕೆ ಅನೇಕ ಕವಿಗಳು ಅಪಾರ ಕೊಡುಗೆ ನೀಡಿದ್ದಾರೆ. ಕನ್ನಡಕ್ಕೆ ಲಭಿಸಿರುವ ಜ್ಞಾನಪೀಠ ಪ್ರಶಸ್ತಿಗಳ ಸಂಖ್ಯೆಯೇ ಭಾಷೆಯ ಸಾಹಿತ್ಯ ಶ್ರೀಮಂತಿಕೆಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಕೆ. ಹೊನ್ನಯ್ಯ ಮಾತನಾಡಿ, ಕರ್ನಾಟಕದಲ್ಲಿ ಹುಟ್ಟಿರುವುದೇ ಸೌಭಾಗ್ಯ, ಕನ್ನಡ ಮಾತನಾಡುವುದೇ ಹೆಮ್ಮೆ. ಕದಂಬರ ಕಾಲದಿಂದಲೂ ಕನ್ನಡ ಆಡಳಿತ ಭಾಷೆಯಾಗಿ ಬಳಕೆಯಲ್ಲಿದೆ. ಕನ್ನಡದ ಪ್ರಾಚೀನತೆ ಮತ್ತು ಕವಿಗಳು ಭಾಷೆಯ ಬಗ್ಗೆ ಹೊಂದಿರುವ ಗೌರವ ಅದರ ಹಿರಿಮೆಯನ್ನು ಸಾರುತ್ತದೆ ಎಂದರು.ಮುಖ್ಯ ಭಾಷಣಕಾರ್ತಿ ಶೈಲಜಾ ಸಪ್ತಗಿರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜನಾರ್ಧನ ಮೂರ್ತಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಇಡಗೂರಿನ ಲಕ್ಷ್ಮೀ ಮಹಿಳಾ ಸ್ವಸಹಾಯ ಸಂಘ ತಯಾರಿಸಿದ ಮಸಾಲೆ ಪದಾರ್ಥಗಳ ಕಿಟ್‌ಗಳನ್ನು ಶಾಸಕ ಪುಟ್ಟಸ್ವಾಮಿ ಗೌಡ ಅವರು ವಾಲ್ಮೀಕಿ ಮತ್ತು ಅಂಬೇಡ್ಕರ್ ವಿದ್ಯಾರ್ಥಿನಿಲಯಗಳಿಗೆ ಪ್ರಾಯೋಗಿಕವಾಗಿ ವಿತರಿಸಿದರು. ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕöÈತಿಕ ಕಾರ್ಯಕ್ರಮಗಳು ನಡೆದವು. ಬಳಿಕ ತಾಲ್ಲೂಕಿನ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಕೆ.ಜಿ. ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಆರ್. ರಮೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಆರ್. ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ ಗೌಡ ನಾಯ್ಕರ್, ವ್ಯವಸ್ಥಾಪಕ ಅಂಜಿನಪ್ಪ, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಾರುತಿ, ಸಿಡಿಪಿಒ ರವಿ, ಸಣ್ಣ ನೀರಾವರಿ ಇಲಾಖೆ ಎಇಇ ಶ್ರೀನಿವಾಸ್, ಪಂಚ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಂಗರಾಜು, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ನರಸಿಂಹಯ್ಯ, ಸುಕನ್ಯಾ, ಕಾರ್ಮಿಕ ನಿರೀಕ್ಷಕ ಹರೀಶ್, ಕೃಷಿ ಸಹಾಯಕ ನಿರ್ದೇಶಕ ರವಿಕುಮಾರ್, ವೃತ್ತ ನಿರೀಕ್ಷಕ ಅಂಜನ್ ಕುಮಾರ್, ಪರಿಸರವಾದಿ ಚೌಡಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.