LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಕರಿಮಣಿ ಮಾಲಿಕ ನೀನಲ್ಲ" ಚಂದ್ರು ಓಬಯ್ಯ ಹೊಸ ಚಿತ್ರ

ಯು ಟರ್ನ್ 2 ಖ್ಯಾತಿಯ ಚಂದ್ರು ಓಬಯ್ಯ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದಂಥ ಜನಪ್ರಿಯ ಹಾಡಿನ ಟೈಟಲ್ ಇಟ್ಟುಕೊಂಡು ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ತಮ್ಮ ಹೊಸ ಸಿನಿಮಾದ ಶೀರ್ಷಿಕೆಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿಸಿದ್ದಾರೆ. ಅದರ ಹೆಸರು "ಕರಿಮಣಿ ಮಾಲಿಕ ನೀನಲ್ಲ". ಮ್ಯೂಸಿಕ್ ಅಡ್ಡಾದ ಲೋಕೇಶ್ ಅವರು ಟೈಟಲ್ ಲಾಂಚ್ ಮಾಡಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಂದ್ರು ಓಬಯ್ಯ ' ಯುಟರ್ನ್ 2 ಆದ ನಂತರ ರಾಮು ಅಂಡ್ ರಾಮು ಚಿತ್ರ ಮಾಡಿದ್ದೆ. ಅದು ಸೆನ್ಸಾರ್ ಹಂತದಲ್ಲಿದೆ. ಅಲ್ಲದೆ ಪ್ಯಾಟಿ ಹುಡ್ಗಿ ಹಳ್ಳಿ ಲೈಫು ಇನ್ನೂ ಚಿತ್ರೀಕರಣ ಹಂತದಲ್ಲಿದೆ. ಈಗ ಕರಿಮಣಿ ಮಾಲಿಕ ನೀನಲ್ಲ ಟೈಟಲ್ ಇಟ್ಟುಕೊಂಡು ಈ ಚಿತ್ರವನ್ನು ಮುಂದಿನ ತಿಂಗಳು ಪ್ರಾರಂಭಿಸುತ್ತಿದ್ದೇನೆ. ಎಳನೀರು ಮಾರೋ ಹುಡುಗ, ಹೂ ಮಾರೋ ಹುಡುಗಿಯ ನಡುವೆ ನಡೆಯೋ ವಿಭಿನ್ನ ಪ್ರೇಮಕಥೆ ಈ ಚಿತ್ರದಲ್ಲಿದೆ. ನಾನು ರೆಡಿ ಮಾಡಿಕೊಂಡಿದ್ದ ಕಥೆಗೆ ಈ ಟೈಟಲ್ ಸೂಕ್ತ ಎನಿಸಿ ಇಟ್ಟಿದ್ದೇನೆ.

ಮೇ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭಿಸಿ, 40 ದಿನಗಳ ಕಾಲ ಬೆಂಗಳೂರು, ಮೈಸೂರು, ಮಡಿಕೇರಿ ಸುತ್ತಮುತ್ತ ಶೂಟಿಂಗ್ ಮಾಡೋ ಪ್ಲಾನಿದೆ. ಚಿತ್ರದಲ್ಲಿ 4 ಹಾಡುಗಳಿದ್ದು, ಮ್ಯೂಸಿಕ್ ಕೂಡ ನಾನೇ ಮಾಡುತ್ತಿದ್ದೇನೆ. ನಾಯಕಿಯಾಗಿ ರಮಿಕಾ ಸುತಾರ ಅಭಿನಯಿಸುತ್ತಿದ್ದು, ನಾಯಕನ ಪಾತ್ರಕ್ಕೆ ಹುಡುಕಾಟ ನಡೆಸಿದ್ದೇವೆ, ಮುಂದಿನ ದಿನಗಳಲ್ಲಿ ಹೆಚ್ಚಿನ ವಿವರ ತಿಳಿಸುತ್ತೇನೆ ಎಂದರು.ನಂತರ ನಾಯಕಿ ಪಾತ್ರ ಮಾಡುತ್ತಿರುವ ರಮಿಕಾ ಸುತಾರ ಮಾತನಾಡುತ್ತ ನಾನು ಮೂಲತ: ಗುಲ್ಬರ್ಗದವಳು. ಸಿನಿಮಾ ಬಗ್ಗೆ ಮೊದಲಿಂದಲೂ ಆಸಕ್ತಿಯಿತ್ತು. ಅವಕಾಶ ಸಿಕ್ಕಿರಲಿಲ್ಲ. ಆಕ್ಟಿಂಗ್ ಕ್ಲಾಸ್ ಹೋಗಿದ್ದೇನೆ. ಈ ಚಿತ್ರದಲ್ಲಿ ಹೂ ಮಾರುವ ಹುಡುಗಿಯಾಗಿ ನಟಿಸುತ್ತಿದ್ದೇನೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು