LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹಾಕಿ: ಎಂಟರ ಘಟ್ಟಕ್ಕೆ ಕರ್ನಾಟಕ ಬಾಲಕಿಯರು

ಮಡಿಕೇರಿ: ಕರ್ನಾಟಕ ಸೇರಿದಂತೆ 8 ರಾಜ್ಯಗಳ ತಂಡಗಳು, ಕೊಡಗಿನಲ್ಲಿ ನಡೆಯುತ್ತಿರುವ 67ನೇ ರಾಷ್ಟ್ರಮಟ್ಟದ, ಶಾಲಾ ಬಾಲಕಿಯರ ಹಾಕಿ ಟೂರ್ನಿಯಲ್ಲಿ ಶುಕ್ರವಾರ ಕ್ವಾರ್ಟರ್ ಫೈನಲ್ ಪ್ರವೇಶಿಸಿದವು. ಕರ್ನಾಟಕವು 6-0ಯಿಂದ ಛತ್ತೀಸಗಢ ತಂಡವನ್ನು ಮಣಿಸಿತು.

ಇದಕ್ಕೂ ಮುನ್ನ ನಡೆದ ಲೀಗ್ ಪಂದ್ಯದಲ್ಲಿ ಕರ್ನಾಟಕ ತಂಡವು ಕೆವಿಎಸ್ (ಕೇಂದ್ರೀಯ ವಿದ್ಯಾಲಯ ಸಂಘಟನೆ) ತಂಡವನ್ನು 11-0 ಗೋಲಿನಿಂದ ಸುಲಭವಾಗಿ ಮಣಿಸಿ ಪಾರಮ್ಯ ಮರೆದಿತ್ತು.

ಉಳಿದಂತೆ, ಪಂಜಾಬ್, ಮಣಿಪುರ, ಮಧ್ಯಪ್ರದೇಶ, ಚಂಡೀಗಡ, ಕೇರಳ, ಜಾರ್ಖಂಡ್, ಒಡಿಶಾ ರಾಜ್ಯಗಳ ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸಿವೆ. ಪಂದ್ಯಾವಳಿಯಲ್ಲಿ ಒಟ್ಟು 27 ತಂಡಗಳು ಭಾಗವಹಿಸಿವೆ. ಕ್ವಾರ್ಟರ್‍ಫೈನಲ್ ಪಂದ್ಯಗಳು ಶನಿವಾರ ಸೋಮವಾರಪೇಟೆಯ ನೂತನ ಹಾಕಿ ಕ್ರೀಡಾಂಗಣದಲ್ಲಿ ನಡೆಯಲಿವೆ.

ಮಡಿಕೇರಿಯ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಮೈದಾನದಲ್ಲಿ ಶುಕ್ರವಾರ ನಡೆದ 67ನೇ ರಾಷ್ಟ್ರಮಟ್ಟದ ಬಾಲಕಿಯರ (ಶಾಲೆಗಳ) ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ ಹಾಗೂ ಕೆವಿಎಸ್ (ಕೇಂದ್ರೀಯ ವಿದ್ಯಾಲಯ ಸಂಘಟನೆ) ತಂಡಗಳು ಗೆಲುವಿಗಾಗಿ ಸೆಣಸಾಡಿದವು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು