LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಕರ್ನಾಟಕ ಪಬ್ಲಿಕ್ ಶಾಲೆಯಿಂದ ದಾಖಲಾತಿ ಆಂದೋಲನ

ಕೋಲಾರ : ಜಿಲ್ಲೆಯಾದ್ಯಂತ ಯಾವುದೇ ವಿದ್ಯಾರ್ಥಿ ಶಾಲೆಯಿಂದ ಹೊರಗೆ ಉಳಿಯಬಾರದು ಪ್ರತಿಯೊಬ್ಬ ವಿದ್ಯಾರ್ಥಿಯು ಶಾಲೆಗೆ ದಾಖಲಾಗಬೇಕು ಹಾಜರಾಗಬೇಕು ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರಾದ ಅಲ್ಮಾಸ್ ಪರ್ವೀನ್ ತ್ರಾಜ್ ತಿಳಿಸಿದರು ಕೋಲಾರ ತಾಲೂಕಿನ ನರಸಾಪುರದಲ್ಲಿಂದು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಏರ್ಪಡಿಸಿದ್ದ ದಾಖಲಾತಿ ಆಂದೋಲನ ಉದ್ಘಾಟಿಸಿ ಮಾತನಾಡಿದರು.
ಅರ್ಹವಯ್ಸಿನ ಪ್ರತಿಯೊಬ್ಬ ಮಗುವು ಶಾಲೆಗೆ ಹಾಜರಾಗಬೇಕು ನಿಯಮಿತವಾಗಿ ದಾಖಲಾಗ ಬೇಕು. ಈ ನಿಟ್ಟಿನಲ್ಲಿ ಕೇವಲ ಶಿಕ್ಷಕರೇ ಅಲ್ಲದೆ ಪೋಷಕರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ. ಈಗಾಗಲೇ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಯ ಸರ್ವತೋಮುಖ ಪ್ರಗತಿಗೆ ಪೂರಕವಾಗಿ ಕಲಿಕಾ ವಾತಾವರಣವನ್ನು ಪ್ರತಿ ಶಾಲೆಯಲ್ಲಿ ನಿರ್ಮಿಸಿದ್ದು ಅಗತ್ಯ ಪೀಠೋಪಕರಣ ಶಿಕ್ಷಕರನ್ನು ಒದಗಿಸಿ, ವಿದ್ಯಾರ್ಥಿಗಳನ್ನು ಪ್ರಭುತ್ವ ನಾಗರಿಕರನ್ನಾಗಿ ತಯಾರು ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಪ್ರಗತಿಗೆ ಕೇವಲ ಶಿಕ್ಷಕರಷ್ಟೇ ಜವಾಬ್ದಾರರಲ್ಲದೆ ಅವರನ್ನು ಪೋಷಣೆ ಮಾಡುತ್ತಿರುವ ಪೋಷಕರು ಈ ಜವಾಬ್ದಾರಿಯನ್ನು ಹೊರಬೇಕು. ಈ ದಿಸೆಯಲ್ಲಿ ತಮ್ಮ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ತಯಾರು ಮಾಡುವ ಹೊಣೆಗಾರಿಕೆಯನ್ನು ಹೊರಬೇಕು ಎಂದರು.
ಸರ್ವ ಶಿಕ್ಷಣ ಅಭಿಯಾನ ತಾಲೂಕು ಸಮನ್ವಯಾಧಿಕಾರಿ ರಾಧಮ್ಮ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರಗತಿಗೆ ಎಲ್ಲಾ ರೀತಿಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಶಾಲಾ ಆರಂಭಕ್ಕೂ ಮುನ್ನವೇ ದಾಖಲಾತಿಯ ಬಗ್ಗೆ ಅರಿವನ್ನು ಉಂಟುಮಾಡುವ ಕಾರ್ಯವನ್ನು ಶಿಕ್ಷಕರೇ ಅಲ್ಲದೆ ಪೋಷಕರು ಭಾಗಿಗಳಾಗಿ ವಿದ್ಯಾರ್ಥಿಗಳ ದಾಖಲಾತಿಗೆ ಸ್ಪಂದಿಸಬೇಕು ಎಂದರು.ಆಂದೋಲನದಲ್ಲಿ ಬಿಆರ್‌ಸಿ ಸಂಯೋಜಕಿ ರಾಧಮ್ಮ, ಇಸಿಒ ಶ್ರೀನಿವಾಸ್, ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸ, ಮುಖ್ಯೋಪಾದ್ಯಾಯ ಜಗನ್ನಾಥ್, ಕೆಪಿಎಸ್ ಕಾಲೇಜಿನ ಪ್ರಾಂಶುಪಾಲರಾದ ಮಂಜುಳ, ಬಿಆರ್‌ಪಿ ಮಲ್ಲಿಕಾರ್ಜುನ್, ಹನುಮಾನ್ ಸಿಂಗ್, ಶ್ರೀರಾಮಯ್ಯ, ವೆಂಕಟರವಣ, ಶೈಲಜಾ, ಹಂಸವೇಣಿ, ಭಾರತಿ, ಸೌಮ್ಯಾ, ಕೋಮಲ, ನಾರಾಯಣಮ್ಮ, ಮನುಜ, ರೇಣುಕಾ, ಅರ್ಚನಾ ಹಾಗೂ ಸಿಬ್ಬಂದಿ ವರ್ಗ ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು