LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕರ್ನಾಟಕ - ರೈಲ್ವೇಸ್ ಹೋರಾಟ

ಸೂರತ್: ರಣಜಿ ಟ್ರೋಫಿ ಕ್ರಿಕೆಟ್ ಕೂಟದ ಐದನೇ ಸುತ್ತಿನ ಪಂದ್ಯಗಳು ಶುಕ್ರವಾರದಿಂದ ವಿವಿಧ ತಾಣಗಳಲ್ಲಿ ಆರಂಭವಾಗಲಿವೆ. ಸೂರತ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ `ಸಿ' ಬಣದ ಅಗ್ರಸ್ಥಾನಿ ಕರ್ನಾಟಕವು ರೈಲ್ವೇಸ್ ತಂಡವನ್ನು ಎದುರಿಸಲಿದೆ.

ತ್ರಿಪುರ ವಿರುದ್ಧದ ಪಂದ್ಯದ ಬಳಿಕ ಸೂರತ್‍ಗೆ ತೆರಳಲು ವಿಮಾನವೇರಿದ ಬಳಿಕ ಅಸ್ವಸ್ಥರಾಗಿ ಅಗರ್ತಲಾದಲ್ಲಿ ಆಸ್ಪತ್ರೆಗೆ ದಾಖಲಾದ ಮಾಯಾಂಕ್ ಅಗರ್ವಾಲ್ ಅವರು ರೈಲ್ವೇಸ್ ವಿರುದ್ಧದ ಪಂದ್ಯದಲ್ಲಿ ಆಡುವುದಿಲ್ಲ. ಅವರ ಬದಲಾಗಿ ನಿಕಿನ್ ಜೋಸ್ ತಂಡವನ್ನು ಮುನ್ನಡೆಸಲಿದ್ದಾರೆ.

ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡ?ರಲ್ಲಿ ಜಯ ಸಾಧಿಸಿದ್ದ ಕರ್ನಾಟಕ ತಂಡವು ಇನ್ನೆರಡರಲ್ಲಿ ಸೋಲು, ಡ್ರಾ ಸಾಧಿಸಿ ಒಟ್ಟಾರೆ 15 ಅಂಕ ಸಂಪಾದಿಸಿದೆ. ತಮಿಳುನಾಡು ಕೂಡ ಎರಡರಲ್ಲಿ ಜಯಿಸಿದ್ದು 15 ಅಂಕ ಹೊಂದಿದೆ. ಆದರೆ ಕರ್ನಾಟಕ ಉತ್ತಮ ರನ್‍ಧಾರಣೆಯ ಆಧಾರ?ದಲ್ಲಿ ಅಗ್ರಸ್ಥಾನದಲ್ಲಿದೆ.

ಮುಂದಿನ ಹಂತಕ್ಕೇರಬೇಕಾದರೆ ಕರ್ನಾಟಕ ತಂಡವು ಮುಂದಿನ ಮೂರು ಪಂದ್ಯಗಳಲ್ಲಿ ಬಹಳ ಎಚ್ಚರಿಕೆಯಿಂದ ಆಡಬೇಕಾಗಿದೆ. ರೈಲ್ವೇಸ್ 12 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ ಗುಜರಾತ್ 13 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಕರ್ನಾಟಕ ಮುಂದಿನೆರಡು ಪಂದ್ಯಗಳಲ್ಲಿ ರೈಲ್ವೇಸ್ ಮತ್ತು ತಮಿಳುನಾಡು ವಿರುದ್ಧ ಆಡಬೇಕಾಗಿದೆ. ಇಲ್ಲಿ ಕರ್ನಾಟಕ ಗೆಲುವಿಗೆ ಪ್ರಯತ್ನ ಪಡಬೇಕಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು