LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಕರ್ಣಾಟಬಲಂ ಅಜೇಯಂ' ಹಾಗೂ "ಸೈನಿಕ 2" ಚಿತ್ರಕ್ಕೆ ಚಾಲನೆ

ಸಿ.ಪಿ.ಯೋಗೀಶ್ವರ್ ಪುತ್ರ ಧ್ಯಾನ್ ಯೋಗೀಶ್ವರ್ "ಕರ್ಣಾಟಬಲಂ ಅಜೇಯಂ" ಹಾಗೂ "ಸೈನಿಕ 2" ಚಿತ್ರಗಳಲ್ಲಿ ನಾಯಕನಾಗಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಎರಡು ಚಿತ್ರಗಳಲ್ಲಿ ಯೋಗೀಶ್ವರ್ ಅವರು ಸಹ ಅಭಿನಯಿಸುತ್ತಿದ್ದು, 25 ವರ್ಷಗಳ ನಂತರ ನಟನೆಗೆ ಮರಳಿ ಬಂದಿದ್ದಾರೆ. ಈ ಪೈಕಿ "ಕರ್ಣಾಟಬಲಂ ಅಜೇಯಂ" ಚಿತ್ರವನ್ನು ನಿರ್ದೇಶಕ ನಾಗಣ್ಣ ನಿರ್ದೇಶಿಸುತ್ತಿದ್ದು, "ಸೈನಿಕ 2" ಚಿತ್ರವನ್ನು ಪುನೀತ್ ರುದ್ರನಾಗ್ ನಿರ್ದೇಶಿಸಲಿದ್ದಾರೆ. ಎರಡು ಚಿತ್ರಗಳ ಮುಹೂರ್ತ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ "ಕರ್ಣಾಟಬಲಂ ಅಜೇಯಂ" ಚಿತ್ರಕ್ಕೆ ಆರಂಭ ಫಲಕ ತೋರಿದರೆ ಕೇಂದ್ರ ಸಚಿವ ವಿ.ಸೋಮಣ್ಣ "ಸೈನಿಕ 2" ಚಿತ್ರಕ್ಕೆ ಆರಂಭ ಫಲಕ ತೋರಿಸಿ ಚಾಲನೆ ನೀಡಿದರು. ಡಿ.ಕೆ.ಸುರೇಶ್ ಕ್ಯಾಮೆರಾ ಚಾಲನೆ ಮಾಡಿದರು. ಈ ಎರಡು ಚಿತ್ರಗಳನ್ನು ಶೀಲಾ ಯೋಗೀಶ್ವರ್ ಅವರು ನಿರ್ಮಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಎರಡು ಚಿತ್ರಗಳ ಫಸ್ಟ್ ಲುಕ್ ಟೀಸರ್ ಸಹ ಅನಾವರಣವಾಯಿತು. ಯೋಗೀಶ್ವರ್ ಪುತ್ರ ಧ್ಯಾನ್ ಚಿತ್ರರಂಗದ ಭವಿಷ್ಯ ಉಜ್ವಲವಾಗಿರಲಿ ಎಂದು ಮುಖ್ಯಮಂತ್ರಿ ಹಾರೈಸಿದರು. ಚಿತ್ರ ಯಶಸ್ವಿಯಾಗಲೆಂದು ಕೇಂದ್ರ ಸಚಿವ ವಿ.ಸೋಮಣ್ಣ ಶುಭ ಕೋರಿದರು. ಮರಳಿ ಈಗ ಚಿತ್ರರಂಗಕ್ಕೆ ಬಂದಿದ್ದೇನೆ. ನನ್ನ ಮಗ ಧ್ಯಾನ್ ಯೋಗೀಶ್ವರ್ , ಈ ಎರಡು ಚಿತ್ರಗಳ ಮೂಲಕ ನಾಯಕನಾಗಿ ಚಿತ್ರರಂಗ ಮಾಡುತ್ತಿದ್ದಾನೆ. ಅದರಲ್ಲಿ ಮೊದಲು "ಕರ್ಣಾಟಬಲಂ ಅಜೇಯಂ" ಚಿತ್ರ ಆರಂಭವಾಗಲಿದೆ. ಮುಂದಿನ ಸಂಕ್ರಾಂತಿ ಸಮಯಕ್ಕೆ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ನಾಗಣ್ಣ ಅವರು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 'ಸೈನಿಕ 2' ಚಿತ್ರವನ್ನು ಪುನೀತ್ ರುದ್ರನಾಗ್ ನಿರ್ದೇಶಿಸುತ್ತಿದ್ದಾರೆ. ನಮ್ಮ ಎರಡು ಚಿತ್ರಗಳಿಗೂ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಸಿ.ಪಿ.ಯೋಗೀಶ್ವರ್.ನಟನೆಗೆ ಪೂರ್ವತಯಾರಿ ಮಾಡಿಕೊಂಡಿದ್ದೇನೆ.ಈಗಲೂ ಕಲಿಯುತ್ತಿದ್ದೇನೆ. ನನ್ನ ಮೊದಲ ಪ್ರಯತ್ನಕ್ಕೆ ಬೆಂಬಲವಿರಲಿ ಎಂದರು ಧ್ಯಾನ್. ನಮ್ಮ ಭಾರತದ ಮಣ್ಣಿನಲ್ಲಿ ಸಾಕಷ್ಟು ಇತಿಹಾಸಗಳು ಸೃಷ್ಟಿಯಾಗಿದೆ. ಇದನ್ನು ನಾವು ನಮ್ಮ ಮಕ್ಕಳಿಗೆ ತಿಳಿಸುವುದು ಕರ್ತವ್ಯ. ಅದನ್ನು ಸಿನಿಮಾ ಮೂಲಕ ತೋರಿಸಿದಾಗ ಜನರಿಗೆ ಬೇಗ ತಲುಪುತ್ತದೆ. "ಕರ್ಣಾಟಬಲಂ ಅಜೇಯಂ" ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಎಂದರು ನಿರ್ದೇಶಕ ನಾಗಣ್ಣ."ಸೈನಿಕ 2 ಕಥೆ ಇನ್ನೂ ಪೂರ್ಣವಾಗಿಲ್ಲ. ಮುಂದಿನ ವರ್ಷ ಈ ಚಿತ್ರಕ್ಕೆ ಚಾಲನೆ ಸಿಗಲಿದೆ ಎಂದು "ಸೈನಿಕ 2" ಚಿತ್ರದ ನಿರ್ದೇಶಕ ಪುನೀತ್ ರುದ್ರನಾಗ್ ಹೇಳಿದರು.ಖ್ಯಾತ ನಟ ಜಗಪತಿಬಾಬು ಹಾಗೂ ಇಪ್ಪತ್ತು ವರ್ಷಗಳ ನಂತರ ಕನ್ನಡ ಚಿತ್ರದಲ್ಲಿ ನಟಿಸುತ್ತಿರುವ ತೆಲುಗು ನಟಿ ಲಯ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಮಿಸ್ ಯುನಿವರ್ಸ್ ಇಂಡಿಯಾ ಮಣಿಕ ವಿಶ್ವಕರ್ಮ ಹಾಗೂ ಮಿಸ್ ಯುನಿವರ್ಸ್ ಇಂಡಿಯಾ ರನ್ನರ್ ಅಪ್ ರೇಖಾ ಪಾಂಡೆ "ಕರ್ಣಾಟಬಲಂ ಅಜೇಯಂ" ಚಿತ್ರದ ನಾಯಕಿಯರಾಗಿ ನಟಿಸುತ್ತಿದ್ದು, ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದಕ್ಕೆ ಬಹಳ ಖುಷಿಯಾಗಿದೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು