LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಮೇ 16ರಂದು ಕರುನಾಡ ಜಾನಪದ ಕಲಾ ಮಹೋತ್ಸವ

ರಾಮನಗರ: ಕಲಾಜ್ಯೋತಿ ಚಾರಿಟಬಲ್ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಮೇ 16ರಂದು ನಗರದ ಅಂಬೇಡ್ಕರ್ ಭವನದಲ್ಲಿ ಎಬಿಸಿಡಿ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ ಅಂಗವಾಗಿ ಕರುನಾಡ ಜಾನಪದ ಕಲಾ ಮಹೋತ್ಸವ - 2026 ಮತ್ತು ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾಂಭ ಆಯೋಜಿಸಿದೆ ಎಂದು ಟ್ರಸ್ಟ್ ಸಂಸ್ಥಾಪಕ ಎಸ್.ರೇಣುಕಾಪ್ರಸಾದ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರ್ಷಿಕೋತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಹಿರಿಯ ಕಲಾವಿದರಿಗೆ ಕಲಾಜ್ಯೋತಿ ಜಾನಪದ ರತ್ನ ಪ್ರಶಸ್ತಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕಲಾಜ್ಯೋತಿ ಕನ್ನಡರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಬೆಳಗ್ಗೆ ಶ್ರೀ ರೇವಣಸಿದ್ದೇಶ್ವರಸ್ವಾಮಿ ದಾಸೋಹ ಮಠದ ಶ್ರೀ ರಾಜಶೇಖರ ಶಿವಾಚಾರ್ಯ ಸ್ವಾಮಿಗಳ ಸಾನಿಧ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ರವರ ಘನ ಉಪಸ್ಥಿತಿಯಲ್ಲಿ ಶಾಸಕ ಇಕ್ಬಾಲ್ ಹುಸೇನ್ ರವರು ಸಮಾರಂಭ ಉದ್ಘಾಟಿಸಲಿದ್ದು, ಪದ್ಮಶ್ರೀ ಪುರಸ್ಕೃತ ಡಾ.ಹಾಸನ ರಘು ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸತೀಶ್ , ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚೇತನ್ ಕುಮಾರ್ , ಜಾನಪದ ವಿದ್ವಾಂಸ ಡಾ.ಕಾಳಯ್ಯ, ಉಪನ್ಯಾಸಕ ಡಾ.ಅಂಕನಹಳ್ಳಿ ಪಾರ್ಥ, ಎಂಐನ ಸಿಟಿಸಿ ಹೇಮಂತ್ ಕುಮಾರ್, ಪತ್ರಕರ್ತೆ ಸುಧಾರಣಿ, ವಿಶೇಷ ಆಹ್ವಾನಿತರಾಗಿ ಡ್ಯಾನ್ಸ್ ಮಾಸ್ಟರ್ ರವಿಕುಮಾರ್ , ರುದ್ರ ಮಾಸ್ಟರ್ , ಶಶಿ ಮಾಸ್ಟರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಂಜೆ 4 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿರವರ ಅಧ್ಯಕ್ಷತೆಯಲ್ಲಿ ಜಾನಪದ ವಿದ್ವಾಂಸ ಎಂ.ಬೈರೇಗೌಡ ಉದ್ಘಾಟಿಸುವರು. ಸಮಾಜ ಸೇವಕ ಮಹೇಂದ್ರ ಮುನ್ನೂತ್ , ಶ್ರೀ ಗಣೇಶ್ ಜ್ಯುವೆಲರ್ಸ್ ಮಾಲೀಕ ಲಕ್ಷ÷್ಮಣ್ , ವಕೀಲ ದರ್ಶನ್ , ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರಾಜು, ಪತ್ರಕರ್ತರಾದ ಸೂರ್ಯಪ್ರಕಾಶ್ ,ರಾಜು ಪಾದರಹಳ್ಳಿ, ಸಾಹಿತಿ ಪೂರ್ಣಚಂದ್ರ ಮತ್ತಿತರರು ಪಾಲ್ಗೊಳ್ಳುವರು ಎಂದು ಹೇಳಿದರು.
ಚನ್ನಪಟ್ಟಣದ ಸರ್ವೋತಮ್ಮ ಮತ್ತು ತಂಡ ಸುಗಮ ಸಂಗೀತ ಗಾಯನ ಹಾಗೂ ಹೊನ್ನಿಗಾನಹಳ್ಳಿ ಸಿದ್ದರಾಜಯ್ಯ ಮತ್ತು ತಂಡ ಜಾನಪದ ಗೀತ ಗಾಯನ ನಡೆಸಿಕೊಡುವರು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಪ್ರದರ್ಶನ ನೀಡಲಿವೆ ಎಂದು ರೇಣುಕಾ ಪ್ರಸಾದ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಕಾರ್ಯದರ್ಶಿ ಶಶಿಕಲಾ, ಎನ್.ವಿ.ಲೋಕೇಶ್, ಗೋವಿಂದಯ್ಯ, ಚಂದನ್ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು