LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವಿಜಯಪುರದಲ್ಲಿ ಕಸಾಪ ಸಂಸ್ಥಾಪಕ ದಿನ

ವಿಜಯಪುರ: ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ ವಿಶ್ವೇಶ್ವರಯ್ಯ ರವರ ಮಾರ್ಗದರ್ಶನದಂತೆ ಕನ್ನಡ ಸಾಹಿತ್ಯ ಪರಿಷತ್ ಇಂದಿಗೂ ಸಹ ಅತ್ಯುತ್ತಮವಾಗಿ ನಡೆದುಕೊಂಡು ಬರುತ್ತಿದೆ. ಕನ್ನಡ ಸಮ್ಮೇಳನ ಸಾಹಿತ್ಯ ಕಾರ್ಯ ಆಯೋಜಿಸುವುದಕ್ಕಿಂತ ದಿನ ನಿತ್ಯಕನ್ನಡ ಭಾಷೆಗೆ ಹೆಚ್ಚಿನ  ಪ್ರೋತ್ಸಾಹ ನೀಡಬೇಕೆಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ್ ಹಡಪದ್ ರವರು ತಿಳಿಸಿದರು.

ವಿಜಯಪುರ ಪಟ್ಟಣದ ಶಿಲ್ಪ ಪ್ರಿಂಟರ್ಸ್ ಮಳಿಗೆಯಲ್ಲಿ ದೇವನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವಿಜಯಪುರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ 110 ನೇಯ ಸಂಸ್ಥಾಪನಾ ದಿನಾಚರಣೆ ಮತ್ತು ಅಭಿನಂದನೆ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ಪರಿಷತ್ ಹಿರಿಯ ಸದಸ್ಯರು ಹಾಗೂ ತಾಲ್ಲೂಕು ಕಸಾಪ ಸಂಸ್ಥಾಪಕ ಖಜಾಂಚಿಗಳಾದ ಎಂ.ಗಿರಿರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನವನ್ನು ಸ್ವೀಕರಿಸಿ ಎಂ.ಗಿರಿರಾಜ್ ರವರು ಮಾತನಾಡುತ್ತಾ ನನ್ನ ಅಧಿಕಾರ ಅವಧಿಯಲ್ಲಿ ಮೂರು ಬಾರಿ ಖಜಾಂಚಿಯಾಗಿ ಅಧಿಕಾರ ಸ್ವೀಕರಿಸಿ ಪ್ರಾಮಾಣಿಕವಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸಿದ್ದೇನೆ ಎಂದರು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷರಾದ ಮಾಸ್ ಮಹೇಶ್ ವಹಿಸಿದ್ದರು.

ಹಿರಿಯ ಕಲಾವಿದರಾದ ಅರದೇಶನಹಳ್ಳಿಯ ಮುನಿಕೆಂಪಣ್ಣ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮುಖ್ಯ ಅತಿಥಿಗಳಾಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಆರ್ ಕೆ ನಂಜೇಗೌಡರು,ಕೋಶಾಧಿಕಾರಿಗಳಾದ ರಾಮಾಂಜಿನಪ್ಪ, ಹೋಬಳಿ ಕೋಶಾಧ್ಯಕ್ಷರಾದ ಕನ್ನಡಿಗ ಎನ್ ಕನಕರಾಜು, ಪಟ್ಟಣ ಕಸಾಪ ನಿಕಟ ಪೂರ್ವ ಅಧ್ಯಕ್ಷರಾದ ಜೆ ಆರ್ ಮುನಿವೀರಣ್ಣ, ಮುರುಳಿ ಮಗು, ಜೇಸಿಐ ವಲಯ 14ರ ವಲಯಾಧಿಕಾರಿಗಳಾದ ಎನ್.ಸಿ ಮುನಿ ವೆಂಕಟರಮಣ, ಹಾರೋಹಳ್ಳಿ ಗ್ರಾಮದ ಬೈರೇಗೌಡರು, ಮಂಜುನಾಥ್, ಸುಬ್ರಮಣಿ, ಮಳ್ಳೂರು ಮಂಜುನಾಥ್, ಗೋವಿಂದರಾಜುಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು