LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

17.70 ಕೋಟಿಗೆ KD ಆಡಿಯೋ

ಅತಿದೊಡ್ಡ ತಾರಾಗಣ, ಅದ್ದೂರಿ ಮೇಕಿಂಗ್‍ನಿಂದಲೇ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಕುತೂಹಲ, ನಿರೀಕ್ಷೆಗಳನ್ನು ಹುಟ್ಟುಹಾಕಿದ್ದ KD ಚಿತ್ರದ ಆಡಿಯೋ ಹಕ್ಕು ಕೂಡ ಆನಂದ್ ಆಡಿಯೋ ಸಂಸ್ಥೆಗೆ ಸೇಲಾಗಿದೆ.

ಇದುವರೆಗೂ ತಮ್ಮ ಚಿತ್ರದ ಆಡಿಯೋ ಹಕ್ಕು ಎಷ್ಟು ಮೊತ್ತಕ್ಕೆ ಹೋಗಿದೆ ಎಂದು ಯಾವೊಬ್ಬ ನಿರ್ಮಾಪಕರೂ ಹೇಳಿಕೊಂಡಿದ್ದಿಲ್ಲ. ಆದರೆ ಇದೇ ಮೊದಲಬಾರಿಗೆ ನಿರ್ದೇಶಕ ಪ್ರೇಮ್ ತಮ್ಮ ಏಆ ಚಿತ್ರದ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋದವರು 27.70 ಕೋಟಿ ರೂ.ಗಳಿಗೆ ತಗೊಂಡಿದ್ದಾರೆ ಎಂದು ಪ್ರಕಟಿಸಿದ್ದಾರೆ.
ಏಆ ಚಿತ್ರದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯವನ್ನು ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ಕೆವಿಎನ್  ಪ್ರೊಡಕ್ಷನ್ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಜ್ ಮಾಡಿದ್ದಾರೆ, ವೇದಿಕೆಯಲ್ಲಿ ಚಿತ್ರದ ನಿರ್ದೇಶಕ, ನಾಯಕ, ಸಂಗೀತ ನಿರ್ದೇಶಕ ಸೇರಿ ಎಲ್ಲರೂ ವಿಂಟೇಜ್ ಡ್ರೆಸ್‍ನಲ್ಲಿದ್ದುದು ವಿಶೇಷವಾಗಿತ್ತು. ಏಕೆಂದರೆ ಈ ಚಿತ್ರದ ಕಥೆ ನಡೆಯುವುದು ಎಪ್ಪತ್ತು, ಎಂಭತ್ತರ ದಶಕದಲ್ಲಿ. ನಿರ್ದೇಶಕ ಪ್ರೇಮ್, ಚಿತ್ರದ ಕ್ವಾಲಿಟಿಯಲ್ಲಿ ಎಲ್ಲೂ ಕಾಂಪ್ರಮೈಸ್ ಆಗಿಲ್ಲ, ಇನ್ನು ಈ ಚಿತ್ರದ ಹಾಡುಗಳಿಗೆ ಭಾರತೀಯ ಚಿತ್ರರಂಗದಲ್ಲಿ ಇದೇ ಮೊದಲಬಾರಿಗೆ 256 ಪೀಸ್ ಆರ್ಕೆಸ್ಟ್ರಾ ಬಳಸಲಾಗಿದೆ.

ಚಿತ್ರದ ಕುರಿತಂತೆ ಮಾತನಾಡಿದ ನಿರ್ದೇಶಕ ಪ್ರೇಮ್, ಏಆ ಚಿತ್ರಕ್ಕೆ ಈವರೆಗೆ 150 ದಿನಗಳ ಚಿತ್ರೀಕರಣ ನಡೆಸಿದ್ದೇವೆ. ಇನ್ನೊಂದು ವಾರದ ಟಾಕಿ ಪೋರ್ಷನ್ ಹಾಗೂ 3 ಹಾಡುಗಳನ್ನು ಶೂಟ್ ಮಾಡಿದರೆ ಚಿತ್ರೀಕರಣ ಮುಗಿದಂತೆ, ನೈಜಘಟನೆ ಆಧಾರಿತ ಈ ಚಿತ್ರಕ್ಕೆ ಇಪ್ಪತ್ತು ಎಕರೆ ಜಾಗದಲ್ಲಿ ಸೆಟ್ ಹಾಕಿದ್ದೇವೆ, ಚಿತ್ರದಲ್ಲಿ ಆರು ಹಾಡುಗಳಿದ್ದು, ಆರು ಜನ ಕೊರಿಯಾಗ್ರಾಫರ್ಸ್ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿ ನಂತರ ಕೆಡಿ ಚಿತ್ರವನ್ನು ಡಿಸೆಂಬರ್‍ನಲ್ಲಿ ತೆರೆಗೆ ತರುವುದಾಗಿ ತಿಳಿಸಿದರು.

ಸಿನಿಮಾ ಬಗ್ಗೆ ಪ್ರೇಮ್ ತುಂಬಾ ತಿಳಿದುಕೊಂಡಿದ್ದಾರೆ, ನಾವು ಸೆಟ್‍ಗೆ ಹೋದಾಗ ಅವರು ಟೀಚರ್ ಥರ ಇರ್ತಾರೆ, ಅವರೇ ಆಕ್ಟ್ ಮಾಡಿ ತೋರಿಸುತ್ತಾರೆ, ಇದು 70 ರ ದಶಕದಲ್ಲಿ ಬೆಂಗಳೂರಲ್ಲಿ ನಡೆಯುವ ಕಥೆ. ಇಡೀ ಬೆಂಗಳೂರನ್ನೇ ಅವರು, ಇನ್ನೊಂದು ಬೆಂಗಳೂರು ಮಾಡಿಬಿಟ್ಟಿದ್ರು, ಚಿತ್ರದ ಬಗ್ಗೆ ಎಲ್ಲ ಕಡೆಯಿಂದಲೂ ಪಾಸಿಟಿವ್ ವೈಬ್ಸ್ ಬರ್ತಾ ಇದೆ, ನಾನು ಕೂಡ ತುಂಬಾ ಎಕ್ಸೂಟ್ ಆಗಿದ್ದೇನೆ ಎಂದು ಹೇಳಿದರು,

ಕಾರ್ಯಕಾರಿ ನಿರ್ಮಾಪಕರಾದ ಸುಪ್ರೀತ್ ಮಾತನಾಡಿ ಈ ಸಿನಿಮಾ ಸ್ಟಾರ್ಟ್ ಆಗಲು ಕಾರಣ ಪ್ರೇಮ್, ನಾನು ವೆಂಕಟ್ ಅವರ ಬಳಿ ಚರ್ಚೆ ಮಾಡುತ್ತ `ಧ್ರುವ ಸರ್ಜಾ ಸಿನಿಮಾನ ಯಾರಕೈಲಿ ಡೈರೆಕ್ಟ್ ಮಾಡಿಸೋದು ಎಂಬ ಪ್ರಶ್ನೆ ಬಂದಾಗ ಫಸ್ಟ್ ನೆನಪಾದದ್ದು ಪ್ರೇಮ್. ಜನ್ಯ ಅವರು ನಮ್ಮ ಸಿನಿಮಾಗೆ ಕೊಟ್ಟಷ್ಟು ಟೈಮನ್ನು ಯಾವ ಚಿತ್ರಕ್ಕೂ ಕೊಟ್ಟಿಲ್ಲ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು