LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಕೆಂಪಾಂಬುಧಿ' ಟೀಸರ್ ಬಿಡುಗಡೆ

ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡನ ಆದರ್ಶಮಯ ಬದುಕು, ದೂರದೃಷ್ಟಿ ಮತ್ತು ಪರಂಪರೆಯನ್ನು ತೆರೆ ಮೇಲೆ ಅನಾವರಣಗೊಳಿಸುವ `ಕೆಂಪಾಂಬುಧಿ' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಶಾಂತ್ ಪ್ರಕಾಶ್ ಫ್ಯಾಮಿಲಿ ಫೌಂಡೇಶನ್ ಪ್ರಸ್ತುತಪಡಿಸಿರುವ ಈ ಚಿತ್ರಕ್ಕೆ ಹೋಂಬಾಳೆ ಮ್ಯೂಸಿಕ್ ಸಹಯೋಗ ನೀಡಿದೆ.ದೂರದೃಷ್ಟಿಯ ಆಡಳಿತಗಾರ, ಜನಪರ ನಾಯಕ ಹಾಗೂ ಪರಿಸರದ ಮಹತ್ವವನ್ನು ಬಹಳ ಹಿಂದೆಯೇ ಅರಿತು ಅನುಷ್ಠಾನಗೊಳಿಸಿದ್ದ ನಾಡಪ್ರಭು ಕೆಂಪೇಗೌಡನ ಚಿಂತನೆಗಳು ಇಂದಿಗೂ ಬೆಂಗಳೂರಿನ ಅಸ್ತಿತ್ವದ ಅವಿಭಾಜ್ಯ ಭಾಗವಾಗಿದೆ. ಲೇಖಕ ಜಾಣಗೆರೆ ವೆಂಕಟರಾಮಯ್ಯ ಅವರ ಜನಪ್ರಿಯ ಕಾದಂಬರಿಯನ್ನು ಆಧರಿಸಿ ಮೂಡಿಬಂದಿರುವ `ಕೆಂಪಾಂಬುಧಿ', ಇತಿಹಾಸ, ಜನಪದ, ದಂತಕಥೆಗಳು ಹಾಗೂ ಸಾಂಸ್ಕೃತಿಕ ನೆನಪುಗಳನ್ನು ಒಗ್ಗೂಡಿಸಿ ರೂಪುಗೊಂಡ ವಿಶಿಷ್ಟ ಚಿತ್ರವಾಗಿದೆ.ಇದು ಕೇವಲ ಐತಿಹಾಸಿಕ ಕಥನವಾಗಿಯೇ ಉಳಿಯದೆ, ಅಂದಿನ ಮತ್ತು ಇಂದಿನ ಬೆಂಗಳೂರನ್ನು ಜೋಡಿಸುವ ಪ್ರಯತ್ನವಾಗಿದೆ. ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ನಿಧಾನವಾಗಿ ಮರೆಯಾಗುತ್ತಿರುವ `ಗಾರ್ಡನ್ ಸಿಟಿ'ಯ ಹಸಿರು ವೈಭವವನ್ನು ಮತ್ತೆ ನೆನಪಿಸುವುದರ ಜೊತೆಗೆ, ಪರಿಸರ ಸಂರಕ್ಷಣೆ ಮತ್ತು ನಗರವನ್ನು ಕಟ್ಟಿದ ಮೂಲ ಮೌಲ್ಯಗಳ ಕಡೆಗೆ ಸಮಾಜದ ಗಮನ ಸೆಳೆಯುವ ಕೆಲಸವನ್ನು ಈ ಚಿತ್ರ ಮಾಡುತ್ತದೆ.ಈ ಚಿತ್ರಕ್ಕೆ ಬೆಂಬಲ ನೀಡುವ ಮೂಲಕ ಪ್ರಶಾಂತ್ ಪ್ರಕಾಶ್ ಫ್ಯಾಮಿಲಿ ಫೌಂಡೇಶನ್, ಬೆಂಗಳೂರಿನ ಪರಂಪರೆ, ಇತಿಹಾಸ ಹಾಗೂ ಹಸಿರು ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ವ್ಯಕ್ತಪಡಿಸಿದೆ.
ಚಿತ್ರದಲ್ಲಿ ನೆನಪಿರಲಿ ಪ್ರೇಮ್, ಮೇಘನಾ ಗಾಂವ್ಕರ್, ರಾಜೇಶ್ ನಟರಂಗ, ಸುಧಾ ಬೆಳವಾಡಿ, ಸಂಯುಕ್ತಾ ಹೊರನಾಡು, ನಾಗಶ್ರೀ ಬೇಗಾರ್, ರಾಜೇಂದ್ರ ಕಾರಂತ್, ರಮೇಶ್ ಹಂಡಿತ್, ಬಿ.ಎಲ್. ರವಿಕುಮಾರ್, ನಟರಾಜ್ ರಾವ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.ತಾಂತ್ರಿಕ ವರ್ಗದಲ್ಲಿ ಮೂಲ ಕಾದಂಬರಿ: ಜಾಣಗೆರೆ ವೆಂಕಟರಾಮಯ್ಯ ಕಥೆ, ಚಿತ್ರಕಥೆ ಹಾಗೂ ನಿರ್ದೇಶನ: ರಮೇಶ್ ಬೇಗಾರ್
ಸಂಗೀತ ಹಾಗೂ ಹಿನ್ನೆಲೆ ಸಂಗೀತ: ವೀರ್ ಸಮರ್ಥ್ಛಾಯಾಗ್ರಹಣ: ಶಶೀರ್ ಶೃಂಗೇರಿ ಸಂಕಲನ: ಅವಿನಾಶ್ ಶೃಂಗೇರಿ
ಕಲಾ ನಿರ್ದೇಶನ: ಅಭಿಷೇಕ್ ಹೆಬ್ಬಾರ ಇದ್ದಾರೆ.
ಕರ್ನಾಟಕದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಹೊಸ ತಲೆಮಾರಿಗೆ ತಲುಪಿಸುವ ಇಂತಹ ಪ್ರಯತ್ನಗಳಿಗೆ ಕೆಂಪೇಗೌಡನ ಜೀವನದೃಷ್ಟಿ ಮತ್ತು ದೂರದರ್ಶಿ ಚಿಂತನೆಗಳನ್ನು ತೆರೆ ಮೇಲೆ ಮೂಡಿಸುವ ಈ ಚಿತ್ರದ ಮೂಲಕ ಬೆಂಗಳೂರಿನ ಹಸಿರು ಪರಂಪರೆಯನ್ನು ಕಾಪಾಡುವ ಜವಾಬ್ದಾರಿಯ ಬಗ್ಗೆ ಜನರಲ್ಲಿ ಮತ್ತಷ್ಟು ಅರಿವು ಮೂಡಿಸುವ ಆಶಯವೂ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು