LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chitradurga

ಶ್ರೀ ಬಸವ ಮೂರ್ತಿ ಮಾದರ ಚನ್ನಯ್ಯ ಸ್ವಾಮಿಗೆ ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ

ಚಿತ್ರದುರ್ಗ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿ ಗೆ ಕೆಂಪೇಗೌಡರ 517ನೇ ಜನ್ಮ ದಿನಾಚರಣೆ ಪ್ರಯುಕ್ತ ನಾಡಪ್ರಭು ಕೆಂ ಪೇಗೌಡ ಪ್ರತಿಷ್ಠಾನ ನೀಡುವ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಚಿತ್ರದು ರ್ಗದ ಶ್ರೀ ಗುರು ಮಾದಾರ ಚನ್ನಯ್ಯ ಗುರುಪೀಠದ ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜೀಯವರಿಗೆ ನಿನ್ನೆ ಬೆಂಗಳೂರಿನ ಜ್ಞಾನ ಜ್ಯೋತಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ.ರಾಧಾ ಕೃಷ್ಣನ್ ಪ್ರಧಾನ ಮಾಡಿದರು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ 2 ಲಕ್ಷ ರೂ. ನಗದು ನೀಡಿ ಗೌರವಿಸಲಾಯಿತು. ಇನ್ಫೋಸಿಸ್ ಸಂಸ್ಥೆಯ ಹಣಕಾಸು ವಿಭಾಗದ ಮಾಜಿ ಮುಖ್ಯಸ್ಥರು ಹಾಗೂ ಅಕ್ಷಯಪಾತ್ರೆ ಯೋಜನೆಯ ಸಹ ಸಂಸ್ಥಾಪಕ ಟಿ.ವಿ.ಮೋಹನದಾ ಸ್ ಪೈ, ಮತ್ತು ರಾಜ್ಯದ ಅರಣ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದ ಎ.ಸಿ.ಲಕ್ಷ್ಮಣ್ ಅವರಿಗೆ ರಾಷ್ಟ್ರೀಯಪ್ರಶಸ್ತಿಯನ್ನು ನೀಡಲಾಯಿತು.ಉಳಿದಂತೆ ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆಆಡಳಿತ, ಶಿಕ್ಷಣ, ಸಂಸ್ಕೃತಿ , ಕೃಷಿ, ಪತ್ರಿಕೋದ್ಯಮ, ಸಾಹಿತ್ಯ, ಸಂಶೋಧನೆ ಮಹಿ ಳಾ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಸಾಧ ನೆ ಮಾಡಿರುವ 15 ಮಂದಿ ಅರ್ಹರನ್ನು ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ.ಅದರಂತೆ ಎಸ್.ವಿ.ರಂಗನಾಥ್, ಎಚ್.ಎ.ರಂಗನಾಥ್, ಎಂ.ಆ ರ್.ಜೈಶಂಕರ್, ಬಿ.ಎಂ.ಕೊಕರೆ, ಡಾ.ವಾಮ ದೇವಪ್ಪ, ಕೇಶವ ಆಯ್ಕೆ, ವಿ ಕ್ರಮ್ ಮುತ್ತಣ್ಣ, ಜಯಪ್ರಕಾಶ್ ಗೌಡ, ರವಿಕುಮಾರ್, ಯಶಸ್ವಿನಿಶರ್ಮ, ಪ್ರೇಮಾ ಗಣೇಶ್, ರಶ್ಮಿ ಸಾವಂತ್, ತ್ರಿಸ್ಟಾ ರಾಮಮೂರ್ತಿ, ಧರ್ಮೇಂದ್ರ, ಮಹೇಶ್ ಗೌಡ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಈ ಕಾರ್ಯಕ್ರಮದಲ್ಲಿ ಶ್ರೀ ನಿರ್ಮಲಾನಂದ ಶ್ರೀಗಳ ಸಾನಿಧ್ಯವಹಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣ, ವಿಪಕ್ಷ ನಾಯಕ ಆರ್.ಅಶೋಕ್ ನಾ ಡ ಪ್ರಭು ಕೆಂಪೇಗೌಡ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ಎಂ.ಕೃಷ್ಣೇಗೌಡ, ಶಾಸಕರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು