LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಮಲಪಡೆ ಕಿಡಿಕಿಡಿ ಹಿಜಾಬ್ ವಿಚಾರಕ್ಕೆ ಮುಖ್ಯಮಂತ್ರಿ ಹೇಳಿಕೆ ವಿರುದ್ಧ ಕೆಂಡಾಮಂಡಲ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಜಾಬ್ ನಿಷೇಧವನ್ನು ರದ್ದು ಮಾಡುತ್ತೇವೆ ಎಂದು ನೀಡಿರುವ ಹೇಳಿಕೆ ಸಂಬಂಧ ಬಿಜೆಪಿ ಮುಖಂಡರು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಿನ್ನೆ ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮತ್ತೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಕೈಹಾಕಿರುವುದು ಈ ನಾಡಿನ ಒಂದು ದುರದೃಷ್ಟ ಎಂದಿದ್ದಾರೆ.

ಸಿಎಂ ಅವರಿಂದ ಇಂಥ ಹೇಳಿಕೆಯನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಕನಿಷ್ಠ ಪಕ್ಷ ಶಾಲಾ, ಕಾಲೇಜುಗಳಿಗೆ ಹೋಗುವ ಮಕ್ಕಳನ್ನಾದರೂ ರಾಜಕೀಯದಿಂದ ದೂರ ಇಡುವ ಕೆಲಸವನ್ನು ರಾಜ್ಯ ಸರಕಾರ ಮಾಡಬೇಕಿತ್ತು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, ಮತ್ತೊಂದು ಕಡೆ ಇದೇ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇದ್ದಾಗ ಪರೀಕ್ಷೆಗೆ ಹೋಗುವ ವಿದ್ಯಾರ್ಥಿ, ವಿದ್ಯಾರ್ಥಿನಿಯರ, ತಾಯಂದಿರ ತಾಳಿ, ಕಾಲುಂಗುರ ತೆಗೆದಿಟ್ಟು ಹೋಗಲು ತಿಳಿಸುತ್ತದೆ. ರಾಜ್ಯ ಸರಕಾರದ ಈ ನಡವಳಿಕೆ ನಿಜವಾಗಿಯೂ ತಲೆತಗ್ಗಿಸುವಂಥದ್ದು. ಬಿಜೆಪಿ, ಇದನ್ನು ಬಲವಾಗಿ ಖಂಡಿಸುತ್ತದೆ ಎಂದು ಕಿಡಿಕಾರಿದರು.

ಮಾತೆತ್ತಿದರೆ ಕಾಂಗ್ರೆಸ್ಸಿಗರು ಅಲ್ಪಸಂಖ್ಯಾತರ ಕುರಿತು ಮಾತ್ರ ಮಾತನಾಡುತ್ತಾರೆ. ಕಾಂಗ್ರೆಸ್ಸಿಗರು, ತುಷ್ಟೀಕರಣ ನೀತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದ ಅವರು, ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯದ ನಂತರ 50ರಿಂದ 60 ವರ್ಷಗಳ ಕಾಲ ದೇಶ, ರಾಜ್ಯವನ್ನು ಆಳಿದೆ. ಆದರೂ, ಅಲ್ಪಸಂಖ್ಯಾತರಲ್ಲಿ ಶೇ 50ರಷ್ಟು ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದರೆ ಅದಕ್ಕೆ ಯಾರು ಹೊಣೆಗಾರರು ಎಂದು ಮುಖ್ಯಮಂತ್ರಿಗಳು ಉತ್ತರ ಕೊಡಬೇಕು ಎಂದು ಆಗ್ರಹ ಪಡಿಸಿದ್ದಾರೆ.

ಅದಕ್ಕೆ ಕಾರಣ ಕಾಂಗ್ರೆಸ್ ಪಕ್ಷವಲ್ಲವೇ? ಇವತ್ತಿಗೂ ಕೂಡ ಶೇ 60ಕ್ಕಿಂತ ಹೆಚ್ಚು ಅಲ್ಪಸಂಖ್ಯಾತ ಬಂಧುಗಳು ರಾಜ್ಯ, ದೇಶದಲ್ಲಿ ಕೆಲಸ ಇಲ್ಲದೆ ಬೇಜಬಾಬ್ದಾರಿಯಿಂದ ಓಡಾಡುತ್ತಿದ್ದರೆ ಅದಕ್ಕೆ ಹೊಣೆಗಾರರು ಕಾಂಗ್ರೆಸ್ ಪಕ್ಷದವರಲ್ಲವೇ ಎಂದು ಪ್ರಶ್ನಿಸಿದರು.
ಅಲ್ಪಸಂಖ್ಯಾತರನ್ನು ಮತಬ್ಯಾಂಕ್ ಆಗಿ ಕಾಂಗ್ರೆಸ್ ಪಕ್ಷ ದುರುಪಯೋಗ ಪಡಿಸಿಕೊಂಡಿದೆ. ಪ್ರಾಮಾಣಿಕವಾಗಿ ಅಲ್ಪಸಂಖ್ಯಾತರನ್ನು ಮೇಲೆತ್ತುವ ಕೆಲಸ ಮಾಡಿಲಿಲ್ಲ. ಅವರ ಶಿಕ್ಷಣಕ್ಕೆ ಒತ್ತು ಕೊಟ್ಟು ಆರ್ಥಿಕವಾಗಿ ಮೇಲೆತ್ತುವ ಕಾರ್ಯವನ್ನು ಕಾಂಗ್ರೆಸ್ ಮಾಡಲಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಲ್ಪಸಂಖ್ಯಾತ ಮಹಿಳೆಯರನ್ನು ಕೂಡ ದೇಶದ ಜನತೆ ಗೌರವದಿಂದ ಕಾಣಬೇಕು; ಪ್ರತಿಯೊಬ್ಬ ಅಲ್ಪಸಂಖ್ಯಾತ ಮಹಿಳೆಯೂ ಗೌರವ, ಸ್ವಾಭಿಮಾನದಿಂದ ಬಾಳಿ ಬದುಕಬೇಕೆಂಬ ದೃಷ್ಟಿಕೋನದೊಂದಿಗೆ ತ್ರಿವಳಿ ತಲಾಖ್ ಅನ್ನು ನರೇಂದ್ರ ಮೋದಿಯವರು ರದ್ದು ಮಾಡಿದ್ದಾರೆ. ನೀವೇನು ಮಾಡಿದ್ದೀರಿ? ಎಂದು ವಿಜಯೇಂದ್ರ ಅವರು ಪ್ರಶ್ನೆ ಮಾಡಿದ್ದಾರೆ.

ಅಲ್ಪಸಂಖ್ಯಾತರ ಕುರಿತು ಕೇವಲ ಭಾಷಣ ಮಾಡುತ್ತೀರಿ. ಅವರಿಗಾಗಿ ಯಾವುದಾದರೂ ಯೋಜನೆ ರೂಪಿಸುವ ಮೂಲಕ ಮೇಲೆತ್ತಿದ್ದೀರಾ ಎಂದು ಕೇಳಿದರು. ಅಲ್ಪಸಂಖ್ಯಾತರು ನಿರುದ್ಯೋಗ ಸಮಸ್ಯೆ ಸೇರಿ ಅನೇಕ ಸಮಸ್ಯೆಗಳನ್ನು ಎದುರಿಸಲು ಕಾಂಗ್ರೆಸ್ಸೇ ಕಾರಣ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್ಸಿಗರು ಅವತ್ತಿನಿಂದ ಇಂದಿನವರೆಗೂ ಒಡೆದು ಆಳುವ ನೀತಿಯನ್ನು ತಮ್ಮದಾಗಿ ಮಾಡಿಕೊಂಡಿದ್ದಾರೆ. ಬ್ರಿಟಿಷರ ಒಡೆದಾಳುವ ನೀತಿಯನ್ನು, ಪರಂಪರೆಯನ್ನು ಮುಂದುವರೆಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದರು. ಹಿಂದೆ 5 ವರ್ಷ ಪರಿಪೂರ್ಣವಾಗಿ ನೀವು ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದೀರಿ. ಮತ್ತೆ ಅಧಿಕಾರ ಸಿಗುವುದು ಕಷ್ಟ ಎಂಬ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಒಡೆಯಲು ಮುಂದಾಗಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ ಎಂದು ಕಟುವಾಗಿ ಟೀಕಿಸಿದ್ದಾರೆ.ನಾಡಿನ ಸಮಸ್ತ ಜನತೆಗೆ ಅವರು ವೈಕುಂಠ ಏಕಾದಶಿ ಶುಭಾಶಯಗಳನ್ನು ಕೋರಿದರು. ಸಂಸದ ಡಾ.ಉಮೇಶ್ ಜಾಧವ್, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು