LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವೈಭವಯುತವಾಗಿ ನಡೆದ ಕೆಂಗೇರಿ ಸುವರ್ಣ ಕರಗ ಶಕ್ತಿಯೋತ್ಸವ

ಕೆಂಗೇರಿ: ಹಿಂದಿನ ಕಾಲದಿಂದಲೂ ಚಾಲ್ತಿಯಲ್ಲಿರುವ ವಹ್ನಿಕುಲ ಕ್ಷತ್ರಿಯ ಆರಾಧ್ಯ ದೈವ ದ್ರೌಪದಿಯ ಅಮ್ಮನವರ ಕರಗ ಶಕ್ತಿ ಅರಾಧನೆ ಮಾಡುವುದು ವಾಡಿಕೆಯಾಗಿದೆ. ಅದರಂತೆ ಅನಾದಿಕಾಲದಿಂದಲೂ ಪ್ರತೀತಿಯಾಗಿ ಆಚರಿಸಿಕೊಂಡು ಬರಲಾಗುತ್ತಿರುವ ವೈಭವದ ಭವ್ಯ ಕರಗ ಶಕ್ತಿ ಉತ್ಸವದ ಅಂಗವಾಗಿ ಕೆಂಗೇರಿ ವಹ್ನಿಕುಲ ಕ್ಷತ್ರಿಯ ಸಮುದಾಯದವರು ಆಚರಿಸಲ್ಪಡುವ ಮಹತ್ವದ ಹಬ್ಬ ಕರಗ ಆಚರಣೆಯ ಆರಂಭದಲ್ಲಿ ಹಸಿ ಕರಗವನ್ನು ಮುನ್ನಡೆಸುವ ಮೂಲಕ ಚಾಲನೆ ನೀಡಲಾಗುತ್ತದೆ.
ಈ ಸಂದರ್ಭದಲ್ಲಿ ಆದಿಶಕ್ತಿ ಶ್ರೀ ದ್ರೌಪದಿಯನ್ನು ವಹ್ನಿಕುಲ ಕ್ಷತ್ರಿಯ (ತಿಗಳ ಕ್ಷತ್ರಿಯ) ಜನಾಂಗದವರ ಕುಲದೇವತೆ ಯಾಗಿ ಅರಾಧಿಸುತ್ತಾರೆ ಕರಗದಂದು ನಡುರಾತ್ರಿಯ ಹೊತ್ತಿಗೆ ಪೂಜಾರಿ, ಕುಲಪುರೋಹಿತರು, ವೀರಕುಮಾರರು ಮತ್ತು ಕುಲಸ್ಥರು ಸೇರುವರು. ಅಲ್ಲಿ ಒಂದೆಡೆ ಸ್ಥಳ ಶುದ್ಧಿಮಾಡಿ ಕೆಂಪು ಬಣ್ಣದ ಛತ್ರಿಯನ್ನು ನೆಡುವರು. ಹಿಂದಿನ ಏಳು ದಿನಗಳಿಂದ ವ್ರತ ನಿರತರಾಗಿದ್ದ ವೀರಕುಮಾರರು ಹೊಳೆಯುವ ಹರಿತವಾದ ಶಕ್ತಿಗಳನ್ನು ಅರ್ಧ ಚಂದ್ರಾಕಾರವಾಗಿ ಜೋಡಿಸುವರು.
ಇವರು ಕರಗ ದೇವತೆಯ ಹೆಸರಿನಲ್ಲಿ ತಮ್ಮ ಕುಲ ಪುರೋಹಿತರು ಮತ್ತು ಹಿರಿಯರ ಸಮ್ಮುಖದಲ್ಲಿ ದೀಕ್ಷೆ ಕೈಗೊಂಡವರು, ದೇವಿಯ ಆರಾಧನೆಯಲ್ಲಿ ಅಚಲವಾದ ಶ್ರದ್ಧೆ ಭಕ್ತಿಯನ್ನು ಇಟ್ಟಿರುವ ಇವರು ಕರಗಕ್ಕೆ ಅಂಗ ರಕ್ಷಕರು. ಭಕ್ತಿ ದ್ಯೋತಕವಾಗಿ ಕೈಯಲ್ಲಿರುವ ಖಡ್ಗ ಗಳಿಂದ ಎದೆಯ ಮೇಲೆ ಇವರು ಪ್ರಹಾರ ಮಾಡಿಕೊಳ್ಳುತ್ತಾರೆ. ಆಗ ರಕ್ತ ಬಂದರೆ ಔಷಧೀಯ ಬದಲಾಗಿ ದೇವಿಯ ಬಂಡಾರವನ್ನು ಅಂದರೆ ಹರಿಶಿನವನ್ನು ಗಾಯದ ಮೇಲೆ ಹಾಕಿಕೊಳ್ಳುತ್ತಾರೆ.
ಆನಂತರ ಕುಲಪುರೋಹಿತರ ನಿರ್ದೇಶನ ಮತ್ತು ಕುಲವೃದ್ಧರ ನೇತೃತ್ವದಲ್ಲಿ ರಾತ್ರಿ ಸುಮಾರು ಮೂರುಗಂಟೆಯ ಹೊತ್ತಿಗೆ ಹಸೀಕರಗ ಸಿದ್ಧವಾಗಿರುತ್ತದೆ. ಕೆಂಪು ಛತ್ರಿಯ ಕೆಳಗೆ, ಅರ್ಧ ಚಂದ್ರಾಕಾರವಾಗಿ ಜೋಡಿಸಿದ ಕತ್ತಿಗಳ ಮಧ್ಯೆ ಜಲ ತುಂಬಿದ ಕರಗವನ್ನು ಕೆಂಪು ವಸ್ತ್ರ, ದುಂಡು ಮಲ್ಲಿಗೆಹಾರ, ಅರಿಶಿಣ- ಕುಂಕುಮ ಮುಂತಾದ ಮಂಗಳ ದ್ರವ್ಯಗಳಿಂದ ಅಲಂಕರಿಸಿ ಪೂಜೆಗೆ ಅಣಿ ಮಾಡಲಾಗುತ್ತದೆ. ಈ ವೇಳೆಗಾಗಲೇ ಕರಗದ ಪೂಜಾರಿಯನ್ನು ಮಲ್ಲಿಗೆ ಹೂವಿನಿಂದ ಸಿಂಗರಿಸಿರುತ್ತಾರೆ. ಪೂಜಾರಿ ಮಹಾ ಮಂಗಳಾರತಿ ಮಾಡುತ್ತಾನೆ. ದೇವಿಯ ಸೇವೆಗಾಗಿ ನಿಂತಿರುವ ವೀರಕುಮಾರರು ಗೋವಿಂದ ಗೋವಿಂದ ನಾಮ ಸ್ಮರಣೆ ಮಾಡುತ್ತಾ ಆವೇಶ ತುಂಬಿಕೊಂಡು ಎದೆಯ ಮೇಲೆ ಪ್ರಹಾರ ಮಾಡಿಕೊಳ್ಳುತ್ತಾರೆ.
ಸುತ್ತುವರೆದ ವೀರಕುಮಾರರ ನಡುವೆ ಪೂಜಾರಿ ಭಕ್ತಿಯಿಂದ ಕರಗವನ್ನು ಎತ್ತಿಕೊಂಡು, ತನ್ನ ಸೊಂಟದ ಎಡಭಾಗದಲ್ಲಿ ಗಡಿಗೆ ಇಟ್ಟುಕೊಳ್ಳುವಂತೆ ಇಟ್ಟುಕೊಳ್ಳುತ್ತಾನೆ. ಪೂಜಾರಿ ನರ್ತನ ಮಾಡುತ್ತಾ ಮುಂದುವರೆಯುತ್ತಾನೆ. ಘಂಟೆ ಪೂಜಾರಿ ಮಾರ್ಗದರ್ಶನ ಮಾಡುತ್ತಿರುತ್ತಾನೆ. ಈ ಮಹೋತ್ಸವದಲ್ಲಿ ಘಂಟೆ ಪೂಜಾರಿಯ ಪಾತ್ರ ಮುಖ್ಯವಾದದ್ದು. ಕರಗ ಹೊರಟಾಗ ಈತ ತಾಳಬದ್ಧವಾಗಿ ಘಂಟೆಯ ನಾದ ಮಾಡುತ್ತಾ, ದೇವಿಯ ಮಹಿಮೆಯನ್ನು ಹೊಗಳುತ್ತಾ ಕರಗಕ್ಕೆ ಮಾರ್ಗದರ್ಶನ ಮಾಡುತ್ತಾ ಮುಂದುವರೆಯುತ್ತಾನೆ. ಈ ಹಕ್ಕು ಪೂಜಾರಿಯ ಹಕ್ಕಿನಂತೆ ವಂಶಪಾರAಪರ್ಯವಾಗಿ ಬಂದಿದೆ.
ಮಧ್ಯೆ ಕೆಲವೆಡೆ ಪೂಜಾರಿ ಮಂಡಿಯೂರಿ ಕುಳಿತಾಗ ಅಲಗು ಸೇವೆ ನಡೆಯುತ್ತದೆ. ಹೀಗೆ ಮುಂದುವರೆದ ಕರಗವು ಯಲ್ಲಮ್ಮ ದೇವಸ್ಥಾನದ ಬಳಿ ಕೆಂಗೇರಿ ಸುತ್ತಮುತ್ತಲಿನಬಡಾವಣೆಗಳಿಗೆ ಸಂಚರಿಸಿಪೂಜೆಯನ್ನು ಸ್ವೀಕರಿಸಿನಂತರ ದೇವಸ್ಥಾನ ಒಳ ಪ್ರವೇಶಿಸಿಸ ನಂತರ ಕರಗ ಮುಕ್ತಾಯವಾಗುತ್ತದೆ ಎಂದು ದೇವಸ್ಥಾನದ ಮುಖ್ಯಸ್ಥರು ಹಾಗು ಗೌರವ ಕಾರ್ಯದರ್ಶಿ ಪಿ ಮುನಿರಾಜು ರವರು ತಿಳಿಸಿದರು.
ಈ ಸಂದರ್ಭದಲ್ಲಿ ಬೆಸ್ಕಾಂ ಇ ಇ ಶಿವಕುಮಾರ್ ಮುಖಂಡ ಚೇತನ್ ಗೌಡ ವಹ್ನಿಕುಲ ಕ್ಷತ್ರಿಯ ಮುಖಂಡರಾದ ಜೆ ರಮೇಶ್ ಶಾಂತರಾಜು ಶಾಂತಿ ಕೃಷ್ಣ ಕೆ ವೈ ಕೃಷ್ಣ ಪುರುಷೋತ್ತಮ ಕಿಟ್ಟಿ ಗಂಟೆಪೂಜಾರಿಗಳಾದ ಶ್ರೀನಿವಾಸ್ ಸಂಜೀವ ಜಯಂತ್ ಸೀತಾರಾಮ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಈ ಬಾರಿ ಕರಗವನ್ನು ಹೊರುವವರು ಮತ್ತು ಕರಗ ಪೂಜಾರಿ ಮುನಿಅಂಜಿನಪ್ಪ ರವರು ಈ ಹಿಂದೆ ಕರಗವನ್ನು ಹೊತ್ತಿರುವವರು ಪಿ ಮೂರ್ತಿ ಹೇಮಂತ್ ಕುಮಾರ್ ಆನಂದ್ ಸೇರಿದಂತೆ ಸಮುದಾಯದ ಮುಖಂಡರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು