LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕೆ.ಜಿ.ಗಟ್ಟಲೆ ಚಿನ್ನ, ವಜ್ರ ಅಪಾರ ಮೊತ್ತದ ನಗದು ಜಪ್ತಿ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಮತ್ತು ಚುನಾವಣಾ ಆಯೋಗ ಹಣ, ಚಿನ್ನ, ಬೆಳ್ಳಿ ಮತ್ತು ವಸ್ತುಗಳ ಅಕ್ರಮ ವಹಿವಾಟಿನ ಮೇಲೆ ಹದ್ದಿನ ಕಣ್ಣು ಇಟ್ಟಿವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಶೋಧ ನಡೆಸಿದ್ದು, ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಹಣ ಪತ್ತೆಯಾಗಿದೆ.

ಶಂಕರಪುರದಲ್ಲಿ 3 ಕೋಟಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಶಾರದದೇವಿ ರಸ್ತೆಯಲ್ಲಿ 3 ಕೋಟಿ 39 ಲಕ್ಷ ಮೌಲ್ಯದ 4 ಕೆಜಿ 800 ಗ್ರಾಂ, ಮರ್ಕೈಂಟಲ್ ಬ್ಯಾಂಕ್ ಬಳಿ 2 ಕೋಟಿ 13 ಲಕ್ಷ ಮೌಲ್ಯದ 3 ಕೆಜಿ 400 ಗ್ರಾಂ, ಜಯನಗರ 3ನೇ ಬ್ಲಾಕ್‍ನಲ್ಲಿ 5 ಕೋಟಿ 33 ಲಕ್ಷ ಮೌಲ್ಯದ 7 ಕೆಜಿ 598 ಗ್ರಾಂ, ಸಾರಸ್ವತ್ ಬ್ಯಾಂಕ್, ಚಾಮರಾಜಪೇಟೆಯಲ್ಲಿ 84 ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆಯಾಗಿದೆ.

ಬಸವನಗುಡಿ ಅಂಚೆ ಕಚೇರಿ ಬಳಿ 3 ಲಕ್ಷ 34 ಸಾವಿರ ಮೌಲ್ಯದ 6.38 ಕ್ಯಾರೆಟ್ ವಜ್ರ, ಮಾತಾ ಶಾರದಾ ದೇವಿ ರಸ್ತೆಯಲ್ಲಿ 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ, ಜಯನಗರದಲ್ಲಿ 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆಯಾಗಿದೆ.ಒಟ್ಟು 16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, 6 ಕೋಟಿ 45 ಲಕ್ಷ ಮೌಲ್ಯದ ವಜ್ರ ವಶಪಡಿಸಿಕೊಳ್ಳಲಾಗಿದೆ. 1.33 ಕೋಟಿ ನಗದು ಪತ್ತೆಯಾಗಿದೆ.

ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸರು, ಎಫ್.ಎಸ್.ಟಿ ಹಾಗೂ ವಿವಿಎಸ್‍ಟಿ ತಂಡದ ಜಂಟಿ ಕಾರ್ಯಚರಣೆಯಲ್ಲಿ ದಾಖಲೆ ಇಲ್ಲದೆ ಸಂಗ್ರಹಿಸಿದ್ದ 23 ಲಕ್ಷ ನಗದು, 450 ಗ್ರಾಂ ಚಿನ್ನ, 13 ಕೆಜಿ ಬೆಳ್ಳಿ ಪತ್ತೆಯಾಗಿದೆ. ಕಂಬಳಿ ಬಜಾರ್‍ನ ಚುನ್ನಿಲಾಲ್ ರಾಕೇಶ್ ಕುಮಾರ್ ಷಾ ಜ್ಯೂವೆಲರ್ಸ್‍ನ ಮಾಲೀಕ ಕಮಲೇಶ್ ಜೈನ್ ಎಂಬುವರ ಮನೆಯಲ್ಲಿ ಇಷ್ಟೊಂದು ಪ್ರಮಾಣದ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಜಪ್ತಿ ಮಾಡಲಾದ ಹಣ, ಚಿನ್ನ ಮತ್ತು ಬೆಳ್ಳಿಯನ್ನು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು