LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ತೀವ್ರ ಕುತೂಹಲ ಕೆರಳಿಸಿದೆ ಖಅಃ ಗಿs ಉಖಿ ಕ್ವಾಲಿಫೈಯರ್ 1 ಫೈಟ್!

ಲೀಗ್ ಹಂತದ ಕುತೂಹಲವೆಲ್ಲ ಮುಗಿದು ಇದೀಗ ಐಪಿಎಲ್ 2026 ಸೀಸನ್ ನಲ್ಲಿ ಪ್ಲೇ ಆಫ್ ಪರ್ವ ಆರಂಭವಾಗಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಅಂಕಪಟ್ಟಿಯ ಮೊದಲೆರಡು ಸ್ಥಾನಿಗಳಾದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿ ಆಗಲಿವೆ. ಬ್ಯಾಟಿಂಗ್ ಗೆ ಅನುಕೂಲಕರವಾದ ಇಲ್ಲಿನ ಪಿಚ್ ನಲ್ಲಿ ಹೆಚ್ಚು ಬಾರಿ ಮೊದಲು ಬ್ಯಾಟಿಂಗ್ ತೆಗೆದುಕೊಂಡ ತಂಡಗಳೇ ಜಯಶಾಲಿಯಾಗಿದ್ದರೂ ಈ ಬಾರಿ ಪರಿಸ್ಥಿತಿ ಭಿನ್ನವಾಗಿದ್ದು ಚೇಸಿಂಗ್ ಮಾಡುವವರಿಗೆ ಹೆಚ್ಚು ಅನುಕೂಲ ಎಂದು ಹೇಳಲಾಗುತ್ತಿದೆ.
ಮೇ 26ರ ಮಂಗಳವಾರದAದು ಧರ್ಮಶಾಲಾದ ಎಚ್‌ಎಸ್ ಪಿಎ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ರನ್ ಹೊಳೆಯೇ ಹರಿಯಬಹುದು ಎಂಬ ನಿರೀಕ್ಷೆ ಇದೆ. ಈ ಸೀಸನ್ ನಲ್ಲಿ ಇತ್ತಂಡಗಳು ಎದುರುಬದುರಾದಾಗ ಬೆಂಗಳೂರಿನಲ್ಲಿ ನಡೆದ ಲೀಗ್ ಪಂದ್ಯದಲ್ಲಿ ಆರ್ ಸಿಬಿ 5 ವಿಕೆಟ್ ಗಳಿಂದ ಜಯಭೇರಿ ಬಾರಿಸಿತ್ತು. ಬಳಿಕ ಅಹ್ಮದಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ಶುಭಮನ್ ಗಿಲ್ ಬಳಗ ಆರ್ ಸಿಬಿಯನ್ನು 4 ವಿಕೆಟ್ ಗಳಿಂದ ಪರಾಭವಗೊಳಿಸಿತ್ತು. ಇದೀಗ ತಟಸ್ಥ ಸ್ಥಳದಲ್ಲಿ ಯಾರು ಜಯಶಾಲಿಯಾಗುತ್ತದೆ ಎಂಬ ಬಗ್ಗೆ ಕ್ರಿಕೆಟ್ ಪ್ರೇಮಿಗಳಿಗೆ ಭಾರೀ ಕುತೂಹ
ಲವಿದೆ. ಈವರೆಗೂ ಇತ್ತಂಡಗಳು 8 ಬಾರಿ ಮುಖಾಮುಖಿಯಾಗಿದ್ದು 4 ಬಾರಿ ಆರ್ ಸಿಬಿ ಮತ್ತು ಅಷ್ಟೇ ಬಾರಿ ಗುಜರಾತ್ ಗೆಲುವು ಸಾಧಿಸಿದೆ.
ಕಳೆದ ಸೀಸನ್‌ನ ಚಾಂಪಿಯನ್ಸ್ ಆಗಿರುವ ಆರ್‌ಸಿಬಿ ಈ ಬಾರಿಯೂ ಅತ್ಯುತ್ತಮ ಲಯದಲ್ಲಿದೆ. ಇದೇ ಕಾರಣಕ್ಕೆ ಅಗ್ರಸ್ಥಾನಿಯಾಗಿ ಪ್ಲೇ ಆಫ್ ಪ್ರವೇಶಿಸಿದೆ. ಸೀಸನ್ ಉದ್ದಕ್ಕೂ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿ 557 ಕಲೆ ಹಾಕಿರುವ ವಿರಾಟ್ ಕೊಹ್ಲಿ ಎದುರಾಳಿ ತಂಡಗಳಿಗೆ ದೊಡ್ಡ ತಲೆನೋವಾಗಿದ್ದಾರೆ. ರಜತ್ ಪಾಟೀದಾರ್, ದೇವದತ್ ಪಡಿಕ್ಕಲ್, ವೆಂಕಟೇಶ್ ಅಯ್ಯರ್ ಅವರು ಅಗ್ರ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಟಿಂ ಡೇವಿಡ್, ಜಿತೇಶ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ಡೆತ್ ಓವರ್ ಗಳಲ್ಲಿ ಎದುರಾಳಿಗಳಿಗೆ ಸಿಂಹಸ್ವಪ್ನವಾಗಿದ್ದಾರೆ.
ಇನ್ನು ಸ್ಫೋಟಕ ಆರಂಭಕಾರ ಫಿಲ್ ಸಾಲ್ಚ್ ಅವರು ತಂಡವನ್ನು ಸೇರಿಕೊಂಡಿದ್ದು ಕಣಕ್ಕಿಳಿಯುತ್ತಾರಾ ಇಲ್ಲವಾ ಎಂಬ ಬಗ್ಗೆ ತಂಡದ ಮ್ಯಾನೇಜ್ ಮೆಂಟ್ ಯಾವುದೇ ಸ್ಪಷ್ಟನೆ ನೀಡಿಲ್ಲ. ಒಂದು ವೇಳೆ ಅವರು ಕಣಕ್ಕಿಳಿದಿದ್ದೇ ಆದಲ್ಲಿ ಆರ್ ಸಿಬಿಯ ಬ್ಯಾಟಿಂಗ್ ಬಲವನ್ನು ಮತ್ತಷ್ಟು ಹೆಚ್ಚಿಸಲಿದೆ. ಬೌಲಿಂಗ್ ವಿಭಾಗದಲ್ಲಿ ಪರ್ಪಲ್ ಕ್ಯಾಪ್ ಹೋಲ್ಡರ್ ಭುವನೇಶ್ವರ ಕುಮಾರ್ ಅವರು ಜೋಶ್ ಹೇಜಲ್ವುಡ್ ತಂಡದ ಬೌಲಿಂಗ್ ಆಧಾರವಾಗಿದ್ದಾರೆ.
ಹೇಗಿದೆ ಧರ್ಮಶಾಲಾ ಪಿಚ್?
ಸಮುದ್ರಮಟ್ಟದಿಂದ 1500 ಮೀಟರ್ ಎತ್ತರದಲ್ಲಿರುವ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳ ಸ್ವರ್ಗ ಎಂದೇ ಹೇಳಲಾಗುತ್ತಿದೆ. ಬೌಲರ್ ಗಳು ಸರಿಯಾದ ಜಾಗದಲ್ಲಿ ಚೆಂಡೆಸೆದರೆ ಫಲಿತಾಂಶ ಸಿಗಬಹುದು. ಅದರ ಹೊರತಾಗಿ ಪಿಚ್ ನಿಂದ ಯಾವುದೇ ರೀತಿಯ ನೆರವೂ ಸಿಗುವುದಿಲ್ಲ ಎಂದು ಭಾವಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು