LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಅಸ್ಪೃಶ್ಯತೆ ಜೀವಂತವಾಗಿದೆ ಎಂಬುದಕ್ಕೆ ಖರ್ಗೆ ಘಟನೆ ಸಾಕ್ಷಿ


ರಾಮನಗರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಅವಮಾನ ಮಾಡಲಾಗಿದ್ದು, ಘಟನೆಗೆ ಕಾರಣ ರಾಗಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಕಾಂಗ್ರೆಸ್ ಕಚೇರಿ ಬಳಿ ಬುಧವಾರ ಜಮಾವಣೆಗೊಂಡ ಕಾಂಗ್ರೆಸ್ ಮುಖಂಡರು, ಕಾರ್ಯ ಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಐಜೂರು ವೃತ್ತದವರೆಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸಿಗರು, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಘಟನೆಯ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.ಈ ವೇಳೆ ಮಾತನಾಡಿದ ಎಸ್ಸಿ, ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ನರಸಿಂಹಯ್ಯ, ಸಂವಿಧಾನದ ಬಗ್ಗೆ ಗೌರವ ಇರುವುದಾಗಿ ಬಿಂಬಿಸಿಕೊಳ್ಳುವ ಬಿಜೆಪಿ ತೆರೆಮರೆಯಲ್ಲಿ ಇಂತಹ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ. ಅಂಬೇಡ್ಕರ್ ಹಾಗೂ ಸಂವಿಧಾನದ ಮೇಲೆ ನಂಬಿಕೆ ಇದ್ದರೆ ಆರೋಪಿಗಳನ್ನು ಕೂಡಲೇ ಗಡಿಪಾರು ಮಾಡಬೇಕು. ಇಂತಹ ದೌರ್ಜನ್ಯಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಮಲ್ಲಿಕಾರ್ಜುನ್ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿದ ಘಟನೆಯು ದೇಶದಲ್ಲಿ ಅಸ್ಪöÈಶ್ಯತೆ ಜೀವಂತವಾಗಿದೆ ಎಂಬುದಕ್ಕೆ ನಿದರ್ಶನವಾಗಿದೆ ಎಂದು ಕಿಡಿಕಾರಿದರು.ಸ್ಥಳ ಶುದ್ಧೀಕರಿಸಿದ್ದು ಖಂಡನೀಯ, ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಸಾಧ್ಯವಾಗಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಇದರ ಕರಾಳತೆ ಇನ್ನೂ ಹೆಚ್ಚು, ದೇಶಕ್ಕೆ ಸ್ವಾತಂತ್ರö?ಯ ಬಂದು 80 ವರ್ಷಗಳ ನಂತರವೂ ಇಂತಹ ಘಟನೆಗಳು ನಡೆಯುತ್ತಿರುವುದು ವಿಪರ್ಯಾಸ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಗುಲಾಮಗಿರಿ ಸಂಸ್ಕöÈತಿಯನ್ನು ಪೋಷಣೆ ಮಾಡುತ್ತಿವೆ, ತಳ ಸಮುದಾಯದ ವ್ಯಕ್ತಿ ನಾಯಕ ಆಗುವುದನ್ನು ಒಪ್ಪಿಕೊಳ್ಳುತ್ತಿಲ್ಲ ಎಂಬ ಸಂದೇಶ ಇದರಲ್ಲಿದೆ, ಇದು ಬಹುದಿನಗಳ ಕಾಲ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
 ನಗರಸಭೆ ಅಧ್ಯಕ್ಷ ಶೇಷಾದ್ರಿ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂವಿಧಾನ ಸಂಬAಧ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಬಳಿಕ ಆ ಸ್ಥಳವನ್ನು ಗಂಗಾಜಲದಿಂದ ಶುದ್ಧೀಕರಿಸಲಾಗಿದೆ, ಈ ಘಟನೆ ಖಂಡನೀಯ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಪಯಣ ಜಾತ್ಯತೀತ ವಾಗಿದ್ದು, ಇಂತಹ ಕೃತ್ಯಗಳನ್ನು ಮನುವಾದಿ ಮನಸ್ಥಿತಿಯವರು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 ಕಾರ್ಯಕ್ರಮದ ನಂತರ ವೇದಿಕೆಯನ್ನು ಶುದ್ಧೀಕರಿಸಿದ್ದು ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ, ಇಂತಹ ದಲಿತ ವಿರೋಧಿ ಕ್ರಮಗಳನ್ನು ಕಾಂಗ್ರೆಸ್ ಸಹಿಸುವುದಿಲ್ಲ, ಇದಕ್ಕೆ ಕಾರಣರಾದ ಬಿಜೆಪಿ ನಾಯಕರ ವಿರುದ್ಧ ತಕ್ಷಣವೇ ದೂರು ದಾಖಲಿಸಬೇಕು.  ಪಕ್ಷದಿಂದ ಭಾಗಿಯಾದವರನ್ನು ತಕ್ಷಣ ಜಾರಿಗೆ ಬರುವಂತೆ ಅಮಾನತುಗೊಳಿಸಬೇಕು ಎಂದು ಬಿಜೆಪಿಯನ್ನು ಒತ್ತಾಯಿಸಿದರು. ಪಪ್ರತಿಭಟನೆಯಲ್ಲಿ ರಾಮನಗರ ನಗರಾಭಿವೃದ್ದಿ ಪ್ರಾದಿಕಾರದ ಅಧ್ಯಕ್ಷ ಎ.ಬಿ.ಚೇತನ್ಕುಮಾರ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಪುಟ್ಟರಾಜು, ಮಹಿಳಾ ಘಟಕದ ಅಧ್ಯಕ್ಷೆ ಕೋಕಿಲಾರಾಣಿ, ಚನ್ನಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್, ಎನ್‌ಎಸ್ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್, ಜಿಲ್ಲಾಧ್ಯಕ್ಷ ಅಮರ್, ಮುಖಂಡರಾದ ಕರುಣ್ ಎಂ.ಆನAದ್, ಸಿಎನ್‌ಆರ್.ವೆಂಕಟೇಶ್, ಎಸ್.ಸಿ.ಶೇಖರ್, ರೈಡ್ ನಾಗರಾಜು, ಬಸವರಾಜು, ಪ್ರಕಾಶ್ ದೇವರಹಳ್ಳಿ, ಶೇಖರ್ ಛಲವಾದಿ ಸೇರಿದಂತೆ ಹಲವರಿದ್ದರು. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST