LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಮಳೆಯಿಂದ ಕೆಕೆಆರ್- ಪಂಜಾಬ್ ಪಂದ್ಯ ರದ್ದು

ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯ
ಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್? ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2026 ರ 12ನೇ
ಪಂದ್ಯ ಮಳೆಯಿಂದ ರದ್ದಾಗಿದೆ. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊAದು ಅಂಕ ಸಿಕ್ಕಿದೆ. ಇದರಿಂದ ಕೆಕೆಆರ್‌ಗೆ ಲಾಭವಾದರೆ, ಪಂಜಾಬ್ ತಂಡ ಬೇಸರದಿಂದ ಮೈದಾನ ತೊರೆದಿದೆ. ಏಕೆಂದರೆ ಕೆಕೆಆರ್ ತಂಡ ಆಡಿದ ಮೊದಲ ಎರಡು ಪಂದ್ಯಗಳನ್ನು ಸೋತಿತ್ತು. ಇದರಿಂದ ತಂಡ ಯಾವುದೇ ಅಂಕಗಳನ್ನು ಹೊಂದಿರಲಿಲ್ಲ. ಆದರೆ ಈ ಪಂದ್ಯ ರದ್ದಾದ ಕಾರಣ ಕೆಕೆಆರ್‌ಗೆ 1 ಅಂಕ ಸಿಕ್ಕಿದೆ. ಇತ್ತ ಪಂಜಾಬ್ ಮೊದಲ ಎರಡು ಪಂದ್ಯಗಳನ್ನು ಗೆದ್ದು 4 ಅಂಕಗಳನ್ನು ಹೊಂದಿತ್ತು. ಇದೀಗ ಈ ಪಂದ್ಯವನ್ನು ಗೆದ್ದು 6 ಅಂಕಗಳನ್ನು ಪಡೆಯುವ ಅವಕಾಶ ಹೊಂದಿತ್ತು. ಆದರೆ ಅದಕ್ಕೆ ಮಳೆರಾಯ ಅವಕಾಶ ಮಾಡಿಕೊಡಲಿಲ್ಲ. ಆದಾಗ್ಯೂ ಪಂಜಾಬ್ 5 ಅಂಕಗಳೊAದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಇಬ್ಬರು ಪ್ರಮುಖ ಬ್ಯಾಟರ್?ಗಳಾದ ಫಿನ್ ಅಲೆನ್ ಹಾಗೂ ಕ್ಯಾಮರೂನ್ ಗ್ರೀನ್ ಬಹುಬೇಗನೇ ವಿಕೆಟ್ ಒಪ್ಪಿಸಿದರು. ಇದರಿಂದ ಈ ಪಂದ್ಯದಲ್ಲೂ ಕೆಕೆಆರ್ ಸೋಲು ಖಚಿತ ಎಂದು ತೋರುತ್ತಿತ್ತು. ಆದರೆ ಕೆಕೆಆರ್ ಇನ್ನಿಂಗ್ಸ್ನ 4ನೇ ಓವರ್ ನಡೆಯುತ್ತಿದ್ದಾಗ ಮಳೆ ಸುರಿಯಲಾರಂಬಿಸಿತು. ಇದರಿಂದ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಯಿತು.
ತಲಾ ಐದು ಓವರ್‌ಗಳ ಪಂದ್ಯವನ್ನು ನಡೆಸಲು ಕಟ್‌ಆಫ್ ಸಮಯ ರಾತ್ರಿ 11:14 ಆಗಿದ್ದ ಕಾರಣ ಅಂಪೈರ್‌ಗಳು ಅಲ್ಲಿಯವರೆಗೆ ಕಾದರು. ಅಷ್ಟರಲ್ಲಿ ಮಳೆ ಕೂಡ ನಿಂತಿತು. ಆದರೆ ಕವರ್‌ಗಳನ್ನು ತೆಗೆದುಹಾಕಿದಾಗ, ಮೈದಾನವು ತುಂಬಾ ತೇವವಾಗಿತ್ತು, ಬೌಂಡರಿಯ ಬಳಿ ನೀರು ಸಂಗ್ರಹವಾಗಿತ್ತು. ನಿಗದಿತ ಸಮಯದೊಳಗೆ ಮೈದಾನವನ್ನು ಸಿದ್ಧಪಡಿಸಲು ಸಾಧ್ಯವಾಗಲಿಲ್ಲ, ಆದ್ದರಿಂದ ಅಂಪೈರ್‌ಗಳು ಮೈದಾನವನ್ನು ಪರಿಶೀಲಿಸಿದ ನಂತರ, ಎರಡೂ ನಾಯಕರೊಂದಿಗೆ ಚರ್ಚಿಸಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದರು. ಹೀಗಾಗಿ ಕೆಕೆಆರ್ ಮತ್ತು ಪಂಜಾಬ್‌ಗೆ ತಲಾ ಒಂದು ಪಾಯಿಂಟ್ ನೀಡಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು