LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕೊಹ್ಲಿ ಕಾಲಿಗೆ ಗಾಯ: ಅಫ್ಘಾನಿಸ್ತಾನ ವಿರುದ್ಧದ ಸರಣಿಯಿಂದ ಔಟ್

ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಅಭಿಮಾನಿಗಳಿಗೆ ಬೇಸರದ ಸುದ್ದಿ ಹೊರಬಿದ್ದಿದೆ. ಹ್ಯಾಮ್‌ ಸ್ಟ್ರಿಂಗ್ ಗಾಯದ ಸಮಸ್ಯೆಯಿಂದಾಗಿ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ.ಜೂನ್ 13 ರಿಂದ ಧರ್ಮಶಾಲಾದಲ್ಲಿ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕೊಹ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ. ಆ ಮೂಲಕ ಸರಣಿಯ ಕುತೂಹಲವನ್ನು ಸ್ವಲ್ಪ ಮಟ್ಟಿಗೆ ತಗ್ಗಿಸಲಿದೆ. ತೊಡೆಯ ಸ್ನಾಯುಸೆಳೆತಕ್ಕೆ ಒಳಗಾಗಿರುವ ಕೊಹ್ಲಿ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಕೊಹ್ಲಿ ಅವರು, ಭಾರತ ತಂಡದ ಟೆಸ್ಟ್ ಹಾಗೂ ಟಿ20 ಮಾದರಿಯಿಂದ ನಿವೃತ್ತಿ ಹೊಂದಿದ್ದು ಏಕದಿನದ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ.37ನೇ ವಯಸ್ಸಿನಲ್ಲೂ ವಿಶ್ವದ ಅತ್ಯಂತ ಫಿಟ್ ಕ್ರೀಡಾಪಟುಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿರುವ ಕೊಹ್ಲಿ, ಇತ್ತೀಚೆಗಷ್ಟೇ ನಡೆದ ಐಪಿಎಲ್‌ನಲ್ಲಿ ಅದ್ಭುತ ಫಾರ್ಮ್ನಲ್ಲಿದ್ದರು. ಆರ್‌ಸಿಬಿ ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಗೆಲುವಿನ ರನ್ ಬಾರಿಸಿದ್ದೂ ಕೂಡ ವಿರಾಟ್ ಕೊಹ್ಲಿಯೇ. ಇಡೀ ಐಪಿಎಲ್ ಟೂರ್ನಿಯಲ್ಲಿ ಅವರು ಒಂದು ಶತಕ ಹಾಗೂ ಐದು ಅರ್ಧಶತಕಗಳ ನೆರವಿನಿಂದ ಒಟ್ಟು 675 ರನ್ ಕಲೆಹಾಕಿದ್ದರು.ಐಪಿಎಲ್ ವೇಳೆ ಹ್ಯಾಮ್‌ ಸ್ಟ್ರಿಂಗ್ ಗಾಯಕ್ಕೆ ತುತ್ತಾಗಿದ್ದ ರೋಹಿತ್ ಅವರನ್ನು ಫಿಟ್ನೆಸ್ ಪರೀಕ್ಷೆಯ ಆಧಾರದ ಮೇಲೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಹಾಗಾಗಿ ಅವರು ಪೂರ್ಣ ಸರಣಿಯಲ್ಲಿ ಆಡುತ್ತಾರೆಯೇ ಎಂಬುದು ಕಾದು ನೋಡಬೇಕಿದೆ.ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ ನಂತರ, ಕೊಹ್ಲಿ ಮತ್ತು ರೋಹಿತ್ ಅವರ ಏಕದಿನ ಭವಿಷ್ಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಮುಂದಿನ 50 ಓವರ್‌ಗಳ ವಿಶ್ವಕಪ್ 2027ರ ಅಕ್ಟೋಬರ್-ನವೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ. ಅಲ್ಲಿಯವರೆಗಿನ ಅವರ ಫಾರ್ಮ್ ಮತ್ತು ದೈಹಿಕ ಸಾಮರ್ಥ್ಯವನ್ನು ಆಧರಿಸಿ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು