LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

ಬೆಂಗಳೂರು: ಬ್ಯಾಟಿಂಗ್ ಹೀರೋ ವಿರಾಟ್ ಕೊಹ್ಲಿ ಸೋಮವಾರ ಬೆಂಗಳೂರಿನಲ್ಲಿ ಆರ್‍ಸಿಬಿ ತಂಡವನ್ನು ಸೇರಿಕೊಂಡರು. ಜತೆಗೆ ಮೊದಲ ಸುತ್ತಿನ ಅಭ್ಯಾಸವನ್ನೂ ನಡೆಸಿದರು. ನಾಯಕ ಫಾ ಡು ಪ್ಲೆಸಿಸ್ ಕೂಡ ಇದ್ದರು.

ಆರ್‍ಸಿಬಿಯ ಮಾಜಿ ನಾಯಕರಾಗಿರುವ ವಿರಾಟ್ ಕೊಹ್ಲಿ ಕಳೆದ ಕೆಲವು ವಾರಗಳಿಂದ ಲಂಡನ್‍ನಲ್ಲಿದ್ದರು.
ಮಗ `ಅಕಾಯ್’ನ ಜನನವಾದ ಬಳಿಕ ರವಿವಾರವಷ್ಟೇ ಭಾರತಕ್ಕೆ ಮರಳಿದ್ದರು. ಆದರೆ ಮಾಧ್ಯಮದವರಿಗೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವಿರಾಟ್ ಕೊಹ್ಲಿ 2022ರ ವಿಶ್ವಕಪ್ ಬಳಿಕ ಕಳೆದ ಜನವರಿಯಲ್ಲಷ್ಟೇ ಅಫ್ಘಾನಿಸ್ಥಾನ ವಿರುದ್ಧ ಮೊದಲ ಟಿ20 ಪಂದ್ಯ ಆಡಿದ್ದರು. ಇದೇ ಸರಣಿಯಲ್ಲಿ ರೋಹಿತ್ ಶರ್ಮ ಕೂಡ ಟಿ20 ನಾಯಕರಾಗಿ ಮರಳಿದ್ದರು.ಪ್ರವಾಸಿ ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಯಿಂದ ಬೇರ್ಪಟ್ಟಿದ್ದ ವಿರಾಟ್ ಕೊಹ್ಲಿ ಪಾಲಿಗೆ ಈ ಬಾರಿಯ ಐಪಿಎಲ್ ಅತ್ಯಂತ ಮಹತ್ವದ್ದಾಗಿದೆ.

ಜೂನ್‍ನಲ್ಲಿ ನಡೆಯುವ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವ ಳಿಯಿಂದ ಇವರನ್ನು ದೂರ ಇರಿಸುವ ಬಗ್ಗೆ ನಾನಾ ಊಹಾಫೋಹಗಳು ಹರಿದಾಡುತ್ತಿದ್ದು, ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಬೇಕಿದೆ.

ವಿರಾಟ್ ಕೊಹ್ಲಿ ಕಳೆದ ಐಪಿಎಲ್‍ನಲ್ಲಿ 2 ಶತಕ ಸೇರಿದಂತೆ 639 ರನ್ ಪೇರಿಸಿ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದರು. ಈ ಬಾರಿ ಆರ್‍ಸಿಬಿ ಉದ್ಘಾಟನ ಪಂದ್ಯದಲ್ಲಿ ಆಡಲಿದ್ದು, ಶುಕ್ರವಾರ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು