LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಕೋಲಾರ ಜಿಲ್ಲಾ ಸ್ವೀಪ್ ಸಮಿತಿ: `ಮಜ್ಜಿಗೆ ಕುಡಿದು ಮತದಾನ ಮಾಡಿ’ ವಿನೂತನ ಜಾಗೃತಿ ಕಾರ್ಯಕ್ರಮ

ಕೋಲಾರ: ಕೋಲಾರದಲ್ಲಿ ನೋಂದಾಯಿಸಿದ 15,000 ಆಟೋಗಳಿದ್ದು, ಪ್ರತಿಯೊಬ್ಬ ಆಟೋ ಚಾಲಕರು ತಾವೂ ಮತ ಹಾಕಿ ತಮ್ಮ ಪ್ರಯಾಣಿಕರಿಗೂ ಮತ ಹಾಕುವಂತೆ ಪ್ರೇರೆಪಿಸಬೇಕೆಂದು ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಪದ್ಮಬಸವಂತಪ್ಪ ಅವರು ತಿಳಿಸಿದರು.

ಜಿಲ್ಲಾ ಸ್ವೀಪ್ ಸಮಿತಿಯಿಂದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ “ಮಜ್ಜಿಗೆ ಕುಡಿಯಿರಿ ಮತದಾನ ಮಾಡಿರಿ” ಎಂಬ ವಿನೂತನ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಬಿಸಿಲು-ಮಜ್ಜಿಗೆ-ಮತದಾನ ಇವುಗಳನ್ನು ಕಡ್ಡಾಯವಾಗಿ ಅನುಭವಿಸಿ ಮತದಾನ ಮಾಡಿ ಎಂದರು. ಚುನಾವಣೆ ಸಂದರ್ಭದಲ್ಲಿ ಆಟೋ ಚಾಲಕರಿಗೆ ತುಂಬಾ ಬೇಡಿಕೆಯಿದ್ದು, ಇಂತಹ ಸಮಯದಲ್ಲಿ ಸಹ ಪ್ರಯಾಣಿಕರಿಗೆ ಕಡ್ಡಾಯ ಮತದಾನ ಮಾಡಲು ಪ್ರೋತ್ಸಾಹಿಸಬೇಕೆಂದರು. ಕೋಲಾರ ಜಿಲ್ಲೆಯಲ್ಲಿ ಕೆಜಿಎಫ್ ಹಾಗೂ ಕೋಲಾರ ಪಟ್ಟಣದಲ್ಲಿ ಮತದಾನವು ತುಂಬಾ ಕಡಿಮೆಯಾಗುತ್ತಿದೆ.

ಕಾರಣ ಜನರು ರಜೆಯ ಮೇಲೆ ಊರಿಗೆ ತೆರಳುವುದು, ಮತಗಟ್ಟೆ ತೆರಳಲು ಆಲಸಿಗಳಾಗಿದ್ದಾರೆ. ಹೀಗಾಗಿ ಅವರಿಗೆ ಊರಿಗೆ ತೆರಳದಂತೆ ಹಾಗೂ ಮತದಾನ ಮಾಡುವಂತೆ ಅಟೋ ಚಾಲಕರು ಸ್ಫೂರ್ತಿ ನೀಡಿ ನಮ್ಮೊಂದಿಗೆ ಕೈಜೋಡಿಸಬೇಕೆಂದರು.ಕೆಎಸ್‍ಆರ್‍ಟಿಸಿ ಸಂಸ್ಥೆಯಿಂದ ಬಸ್‍ನಲ್ಲಿ ಪ್ರಯಾಣಿಸು
ವವರಿಗೆ ಮತದಾನ ಜಾಗೃತಿ ಮೂಡಿಸಲು ಇಲ್ಲಿಯವರೆಗೆ ಎರಡೂವರೆ ಲಕ್ಷ ಬಸ್ ಟಿಕೇಟ್‍ಗಳ ಮೇಲೆ ಮುದ್ರಣ ಮಾಡಿಸಿ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಚುನಾವಣಾ ಸಂದರ್ಭದಲ್ಲಿ ಪ್ರಿಜ್ಡ್, ಟಿವಿ, ಸೀರೆ, ಹಣ, ಕುಕ್ಕರ್ ಹಾಗೂ ಬಾಡೂಟ, ಊಟ ಇನ್ನು ಮುಂತಾದ ಆಮಿಷಗಳನ್ನು ತೋರಿಸಿ ಮತದಾನ ಮಾಡುವ ಸಂದರ್ಭಗಳು ಕಂಡುಬಂದಲ್ಲಿ ಸಿವಿಜಿಲ್ ಆ್ಯಪ್ ಬಳಸಿ ಫೋಟೋ ತೆಗೆದು ಅಪಲೋಡ್ ಮಾಡಿದರೆ, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳುತ್ತಾರೆ ಹಾಗೂ ತಮ್ಮ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು.

ಕಾರ್ಯಕ್ರಮದಲ್ಲಿ ಯೋಜನಾ ನಿರ್ದೇಶಕರು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ರವಿಚಂದ್ರ, ಕೆಎಸ್‍ಆರ್‍ಟಿಸಿ ಡಿವಿಜನಲ್ ಕಂಟ್ರೋಲರ್ ಬಸವರಾಜು, ಕೋಲಾರ ಹಾಗೂ ಕೆಜಿಎಫ್ ಆರ್‍ಟಿಓ ವೆಂಕಟೇಶ್ವರಲು, ನಯಾಜ್ ಪಾಷಾ, ಜಿ.ಪಂ. ಸಹಾಯಕ ನಿರ್ದೇಶಕ ಗೋವಿಂದಗೌಡ, ಆಟೋ ಅಸೋಸಿಯೇಶನ್ ಅಧ್ಯಕ್ಷ ಸುರೇಶ ಸೇರಿದಂತೆ ಆಟೋಚಾಲಕರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಪದ್ಮ ಬಸವಂತಪ್ಪ ಅವರು ಆಟೋಗಳಿಗೆ ಚುನಾವಣೆ ಸಂಬಂಧಿತ ಸ್ಟಿಕರ್ ಅಂಟಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು