LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ನೀರಾವರಿ ಸೌಲಭ್ಯ ಕಲ್ಪಿಸಲು ಕೋಲಾರ ಸಂಸದ ಭರವಸೆ

ಕೋಲಾರ: ನೀರಾವರಿ ಯೋಜನೆ, ಯುಕವರಿಗೆ ಉದ್ಯೋಗ ಸೃಷ್ಟಿಸಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಮೊದಲ ಆಧ್ಯತೆಯನ್ನು ನೀಡುವುದಾಗಿ ಸಂಸದ ಮಲ್ಲೇಶ್ ಬಾಬು ಬರವಸೆ ನೀಡಿದ್ದಾರೆ.ಮೊದಲ ಬಾರಿಗೆ ಸಂಸತ್ ಪ್ರವೇಶಿಸಿ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕೋಲಾರ ಜನತೆ ನೀಡಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿ ಸುತ್ತೇನೆ 5 ವರ್ಷದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿದರೆ ಸೂಕ್ತ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ, ಅವರ ಜೊತೆ ಇದ್ದು ಹೇಗೆ ಕೆಲಸ ಮಾಡುತ್ತಾರೆ ಎನ್ನುವ ಅವಕಾಶ ನಮಗೆ ಸಿಗುವುದಲ್ಲೆ ಸ್ಪೂರ್ತಿಯಾಗುತ್ತಾರೆ ಎಂದು ತಿಳಿಸಿದರು.ಕುಮಾರಸ್ವಾಮಿಯವರಿಗೆ ಯಾವ ಖಾತೆ ನೀಡುತ್ತಾರೆ ಎನ್ನುವುದು ಬಿಜೆಪಿ ಹೈಕಮಾಂಡ್, ಕುಮಾರಸ್ವಾಮಿ ಅವರಿಗೆ ಬಿಟ್ಟ ವಿಚಾರ ನೀರಾವರಿ ಯೋಜನೆಗಳು ಅನುಷ್ಠನಗೊಳಿಸಲು ಸೂಕ್ತ ಸಚಿವ ಸ್ಥಾನ ನೀಡಿದರೆ ಉತ್ತಮ ಎಂದು ತಿಳಿಸಿದರು.

ಕಳೆದ 5 ವರ್ಷಗಳಲ್ಲಿ ಬಿಜೆಪಿ ಸಂಸದರಾಗಿದ್ದ ಎಸ್.ಮುನಸ್ವಾಮಿ ಅವರು ಕ್ಷೇತ್ರಕ್ಕೆ ಬೇಕಾದ ಅಭಿವೃದ್ದಿಗಳ ಪಟ್ಟಿಯನ್ನು ಕೊಟ್ಟಿದ್ದಾರೆ ಸಮಯದ ಅಭಾವದಿಂದ ಅದನ್ನು ಇನ್ನು ನೋಡಿಲ್ಲ ಈಗಾಗಲೇ ಅವರು ಕೈಗೆತ್ತಿಗೊಂಡಿರುವ ಅಭಿವೃದ್ದಿ ಯೋಜನೆಗಳನ್ನು ಪೂರೈಸಲು ಪ್ರಾಮಾಣಿ ಪ್ರಯತ್ನವನ್ನು ಮಾಡುತ್ತೇನೆ, ನೀರಾವರಿ ಯೋಜನೆ ಹಾಗೂ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎನ್ನುವುದು ನನ್ನ ಮೊದಲ ಆಧ್ಯತೆ ಎಂದು ವಿವರಿಸಿದರು.

ಬಂಗಾರಪೇಟೆ ಹಾಗೂ ಕೆಜಿಎಪ್ ಕ್ಷೇತ್ರದಲ್ಲಿ ಪ್ರತಿನಿತ್ಯ 30 ಸಾವಿರಕ್ಕೂ ಹೆಚ್ಚು ಯುವಕ ಯುವತಿಯರು ಉದ್ಯೋಗ ಹರಿಸಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾರೆ ಅದನ್ನು ತಪ್ಪಿಸಲು ಬಿಜಿಎಲ್ ಪ್ರದೇಶದಲ್ಲಿ ಉತ್ದಾದನಾ ಘಟಕ ಸ್ಥಾಪನೆಯಾಗಬೇಕು, ಕೋಲಾರ ಗಡಿಯಾದ ವಿ.ಕೋಟ ಪಲಮನೇರು ಭಾಗದಲ್ಲಿ ಹರಿಯುತ್ತಿರುವ ಕೃಷ್ಟ ನದಿ ನೀರನ್ನು ಕೋಲಾರಕ್ಕೆ ತರುವ ಬಗ್ಗೆ ಎನ್.ಡಿ.ಎ ಮೈತ್ರಿಯಲ್ಲಿ ಭಾಗವಾಗಿರುವ ಟಿಡಿಪಿ ಅವರ ಜೊತೆ ಮಾತನಾಡಲು ಒಳ್ಳೆಯ ಅವಕಾಶ ಲಭಿಸಿದೆ ಆಂದ್ರದ ಟಿಡಿಪಿ ಪಕ್ಷವು ಅಧಿಕಾರಕ್ಕೆ ಬಂದ ಕೂಡಲೇ ಕೃಷ್ಣಾ ನದಿ ನೀರನ್ನು ಕೋಲಾರಕ್ಕೆ ತರುವ ನಿಟ್ಟಿನಲ್ಲಿ ಪ್ರಧಾನಿಗಳ ಮೇಲೆ ಒತ್ತಡ ಹಾಕಿ ಈ ಯೋಜನೆ ಜಾರಿಗೆ ತರಲು ರೂಪು ರೇಷೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಲೋಕ ಚುನಾವಣೆಯಲ್ಲಿ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇವೆ ಎನ್ನುವ ನಂಬಿಕೆ ಇತ್ತು ಆದರೆ ಕೆಜಿಎಫ್ ಕ್ಷೇತ್ರದಲ್ಲಿ 30 ಸಾವಿರ ಮತಗಳ ಹಿನ್ನಡೆಯಾಗಿದೆ ಬಂಗಾರಪೇಟೆ ಕ್ಷೇತ್ರದ ಜನತೆ ಕೈ ಹಿಡಿಯುತ್ತಾರೆ ಎನ್ನುವ ನಂಬಿಕೆ ಈ ಮೋದಲ ಇತ್ತು ಅದರಂತೆ ಇಪ್ಪತ್ತೆಂಟು ಸಾವಿರ ಮತಗಳನ್ನು ಮುನ್ನಡೆ ನೀಡಿದ್ದಾರೆ ಅವರಿಗೆ ನಾನು ಚಿರರುಣಿಯಾಗಿರುತ್ತೇನೆ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮುಖಂಡರು ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುತ್ತಾರೆ ಎನ್ನುವ ನಂಬಿಕೆ ಇಂದು ಪಲಿತಾಂಶವಾಗಿ ನಮಗೆ ಗೆಲುವು ಸಾಧಿಸಲು ಸಾದ್ಯಾವಾಗಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು