LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕೆಪಿಎಸ್‌ಸಿ ಅಕ್ರಮ : 

ಇ.ಡಿ. ವಶಕ್ಕೆ ಗ್ಯಾನೇಂದ್ರ, ಕನ್ನಾಳೆ


ಬೆಂಗಳೂರು: KPSC  ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಅವರನ್ನು ಜೈಲಿನಲ್ಲೇ ಬಂಧಿಸಿದೆ. ಜೈಲಿನಲ್ಲಿ ವಿಚಾರಣೆಗೆ ಅಸಹಾಕಾರ ನೀಡಿದ ಹಿನ್ನೆಲೆ ಇಡಿ ತನ್ನ ಕಸ್ಟಡಿಗೆ ಪಡೆದುಕೊಂಡಿದೆ.ನಾಲ್ಕು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣೆ ನಡೆಸಿದ ಬಳಿಕ, ತನಿಖೆಗೆ ಸರಿಯಾಗಿ ಸಹಕರಿಸದ ಕಾರಣ ಇಬ್ಬರನ್ನೂ ಇಡಿ ಬಂಧಿಸಿದೆ.ಇಡಿ ಅಧಿಕಾರಿಗಳು ಶುಕ್ರವಾರ ಸಂಜೆ ಇಬ್ಬರನ್ನೂ ಬಂಧಿಸಿ ತಡರಾತ್ರಿ ಸ್ಪೆಷಲ್ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದಾರೆ. ಇಂದಿನಿಂದ ಇಡಿ ಕಚೇರಿಯಲ್ಲಿ ಜ್ಞಾನೇಂದ್ರ ಮತ್ತು ಬಸವರಾಜ್ ಕನ್ನಾಳೆ ಅವರ ವಿಚಾರಣೆ ಮುಂದುವರೆಯಲಿದೆ. ಈ ಹಿಂದೆ, ಸಿಐಡಿ ಅಧಿಕಾರಿಗಳು ಇವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇಡಿ ಅಧಿಕಾರಿಗಳು ಈ ಪ್ರಕರಣದಲ್ಲಿ ಹವಾಲಾ ಹಣದ ವಹಿವಾಟು ನಡೆದಿರುವ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಸಿಐಡಿ ಅಧಿಕಾರಿಗಳು ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಮನೆಗಳ ಪರಿಶೀಲನೆ ನಡೆಸಿ, ಎರಡು ಮೊಬೈಲ್ ಮತ್ತು ಒಂದು ಟ್ಯಾಬ್ ವಶಕ್ಕೆ ಪಡೆದಿದ್ದಾರೆ. ಅವರೂ ತನಿಖೆಗೆ ಸಹಕರಿಸುತ್ತಿಲ್ಲ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST