LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬೆದರಿಸಲು ದೂರು ಕುಪೇಂದ್ರರೆಡ್ಡಿ ಆರೋಪ

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಯಾರು, ಯಾರನ್ನು ಬೇಕಾದರೂ ಭೇಟಿ ಮಾಡಿ ಮತ ಕೇಳುವ ಅವಕಾಶಗಳಿವೆ. ತಮ್ಮನ್ನು ಬೆದರಿಸಲು ರಾಜ್ಯಸರ್ಕಾರ ದುರುದ್ದೇಶಪೂರ್ವಕವಾಗಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಪ್ರಕರಣ ದಾಖಲಿಸಿದೆ ಎಂದು ರಾಜ್ಯಸಭಾ ಚುನಾವಣೆಯ ಎನ್‍ಡಿಎ ಅಭ್ಯರ್ಥಿ ಕುಪೇಂದ್ರರೆಡ್ಡಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು ನೀಡಿರುವುದು ಮತ್ತು ಕೇಸು ದಾಖಲಿಸುವ ಕ್ರಮ ಕೂಡ ಕ್ರಮಬದ್ಧವಾಗಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರು ದೂರು ನೀಡಿದ್ದಾರೆ. ಅದರಲ್ಲಿ ಫೆ.22 ರಂದು ನಡೆಯಲಿರುವ ಚುನಾವಣೆಯಲ್ಲಿ ಎಂದು ನಮೂದಿಸಲಾಗಿದೆ. ರಾಜ್ಯಸಭೆ ಚುನಾವಣೆಯಿರುವುದು ಫೆ.27 ರಂದು. 22 ರಂದು ಯಾವ ಚುನಾವಣೆ ನಡೆಯಲಿದೆ ಎಂಬ ಬಗ್ಗೆ ನನಗಂತೂ ಮಾಹಿತಿ ಇಲ್ಲ.

ಆತುರಾತುರವಾಗಿ ದೂರು ಕೊಡುವಾಗ ಈ ರೀತಿಯ ಲೋಪಗಳು ಕಂಡುಬಂದಿವೆ. ವಾಸ್ತವವಾಗಿ ಚುನಾವಣೆಗೆ ಸಂಬಂಧಪಟ್ಟಂತೆ ಯಾವುದೇ ತಕರಾರುಗಳಿದ್ದರೂ ಅದನ್ನು ಆಯೋಗಕ್ಕೆ ಲಿಖಿತವಾಗಿ ತಿಳಿಸಬೇಕು. ಆಯೋಗ ಪೊಲೀಸ್ ಆಯುಕ್ತರಿಗೆ ದೂರನ್ನು ರವಾನಿಸುತ್ತದೆ.

ಆಯುಕ್ತರು ಪರಿಶೀಲನೆ ನಡೆಸಿ ಮೇಲ್ನೋಟಕ್ಕೆ ಸತ್ಯಾಂಶ ಕಂಡುಬಂದಿದ್ದರೆ ಮ್ಯಾಜಿಸ್ಟ್ರೇಟ್‍ರ ಅನುಮತಿ ಪಡೆದು ಪ್ರಕರಣ ದಾಖಲಿಸಬೇಕು. ಆದರೆ ಇಲ್ಲಿ ಏಕಾಏಕಿ ಶಾಸಕರು ದೂರು ನೀಡುತ್ತಾರೆ. ಸೆಕ್ಷನ್ 506 ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ. ಇದು ಸಂಪೂರ್ಣ ನಿಯಮ ಬಾಹಿರವಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದರು.

ನಾನು ಈ ಬಾರಿ ಗೆಲ್ಲುತ್ತೇನೆ ಎಂಬ ವಿಶ್ವಾಸದಲ್ಲೇ ಸ್ಪರ್ಧೆ ಮಾಡಿದ್ದೇನೆ. ಸೋಲು-ಗೆಲುವು ಅನಂತರದ ವಿಚಾರ. ಈ ಬಾರಿಯೂ ಸೋಲಿಸುವುದಾದರೆ ಸೋಲಿಸಲಿ, ಕಾಂಗ್ರೆಸ್‍ನಲ್ಲೂ ನನಗೆ ಬಹಳಷ್ಟು ಸ್ನೇಹಿತರಿದ್ದಾರೆ. ಅವರಿಂದ ನಾನು ಆತ್ಮಸಾಕ್ಷಿ ಮತ ಕೇಳುತ್ತೇನೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು