LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

`ಮೌಢ್ಯಗಳ ವಿರುದ್ಧ ವೈಚಾರಿಕತೆ ಮೂಡಿಸಿದ ಕುವೆಂಪು'

ಕೋಲಾರ: ಮನಜಪಥ ವಿಶ್ವಪಥ ಸಂದೇಶವನ್ನು ಸಾರಿದ ಶ್ರೇಷ್ಟ ವಿಶ್ವ ಮಾನವ ಕುವೆಂಪುರು ಸಮಾಜದಲ್ಲಿನ ಮೌಡ್ಯತೆಗಳನ್ನ ಹೋಗಲಾಡಿಸಲು ಶ್ರಮಿಸಿದರು, ಮಾತೃ ಭಾಷೆ ಕನ್ನಡವನ್ನು ಕನ್ನಡಿಗರಾದ ನಾವು ಉಳಿಸಿ ಬೆಳೆಸಬೇಕೆಂದು ವಿದ್ಯಾರ್ಥಿಗಳಿಗೆ ತಮ್ಮ ಉದ್ಘಾಟನಾ ಭಾಷಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಜಿ.ಆರ್ ಶಂಕರೇಗೌಡರವರು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಕೋಲಾರ ತಾಲ್ಲೂಕು ವತಿಯಿಂದ ನಗರದ ಸುಭಾಷ್ ವಿದ್ಯಾಸಂಸ್ಥೆಯಲ್ಲಿ ವಿಶ್ವಮಾನವ ರಾಷ್ಟ್ರಕವಿ ಕುವೆಂಪು ರವರ 119 ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ವಿಶ್ವಮಾನವ ರಾಷ್ಟ್ರಕವಿ ಕುವೆಂಪುರವರ 119ನೆಯ ಜನ್ಮದಿನೋತ್ಸವದ ಅಂಗವಾಗಿ ಶತಮಾನ ಕಂಡ ದೈತ್ಯ ಪ್ರತಿಭೆ ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ ಶ್ರೀರಾಮಾಯಣ ದರ್ಶನಂನಲ್ಲಿ ಈ ಕಾಲಕ್ಕೆ ಅಗತ್ಯವಾದ ದರ್ಶನವನ್ನು ನೀಡಿದ್ದಾರೆ.

ಅವರ ಎರಡು ಬೃಹತ್ ಕಾದಂಬರಿಗಳಾದ ’ಕಾನೂರು ಹೆಗ್ಗಡತಿ’ ಹಾಗೂ ’ಮಲೆಗಳಲ್ಲಿ ಮದುಮಗಳು’ ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ ಎಂದು ಮಕ್ಕಳಿಗೆ ಡಾ.ಗಾಯತ್ರಿದೇವಿರವರು ತಿಳಿಸಿದರುಮನುಷ್ಯ ಜಾತಿ ತಾನೊಂದೇವಲಂ ಎಂಬ ನುಡಿಯಮೇಲೆ ವಿಶ್ವ ಮಾನವ ಸಂದೇಶವನ್ನು ಸಾರಿದ ಜಗದಕವಿ, ಯುಗದ ರಸಋಷಿಯಾದ ಕುವೆಂಪುರವರು ಇಂದಿಗೂ ಎಂದೆಂದಿಗೂ ಪ್ರಸ್ತುತವಾಗಿದ್ದಾರೆ.

ಕ.ಸಾ.ಪ ಕೋಲಾರ ತಾಲ್ಲೂಕಿನ ವತಿಯಿಂದ ಕುವೆಂಪು ರವರ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಬೆ.ಉ.ವಿ.ವಿದ್ಯಾಲಯದ ಉಪನ್ಯಾಸಕರಾದ ಡಾ.ಗಾಯತ್ರಿ ದೇವಿರವರನ್ನು ಸನ್ಮಾನಿಸಲಾಯಿತು ಹಾಗೂ ಕುವೆಂಪುರವರ ಕುರಿತು ಏರ್ಪಡಿಸಿದ್ದ ಪ್ರಬಂದ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸುಭಾಷ್ ಶಾಲೆಯ ಮುಖ್ಯ ಶಿಕ್ಷಕರಾದ ವೇಣುಗೋಪಾಲ್, ಕ.ಸಾ.ಪ ಕೋಲಾರ ತಾಲ್ಲೂಕು ಕಾರ್ಯದರ್ಶಿಗಳಾದ ಮಾರುತಿ ಚಾಮರಹಳ್ಳಿ, ಸುಭಾಷ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಗಳಾದ ಧನ್ಯಶ್ರೀ, ಸುಭಾಷ್ ಶಾಲೆಯ ಕನ್ನಡ ಶಿಕ್ಷಕರಾದ ಕೃ‌ಷ್ಣೇಗೌಡ, ಹಾಗೂ ಸುಭಾಷ್ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು