LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಂಘಗಳ ಸ್ಥಾಪನೆಯಿಂದ ಸಮಾಜ ಸೇವೆ ಆಗಲಿ: ಎಲ್.ಹನುಮಂತಯ್ಯ

ಬೆಂಗಳೂರು: ಸಂಘಗಳನ್ನು ಕಟ್ಟಿಕೊಂಡರೆ ಅಷ್ಟೇ ಸಾಲದು ಜನಸಾಮಾನ್ಯರ ಧ್ವನಿಯಾಗಿ ಸಲ್ಲಬೇಕಾದ ಹಕ್ಕುಗಳ ರಕ್ಷಣೆಗಾಗಿ ಸರ್ಕಾರಗಳ ಕಣ್ತೆರೆಸುವಲ್ಲಿ ಗಮನಹರಿಸಬೇಕು' ಎಂದು ರಾಜ್ಯಸಭಾ ಮಾಜಿ ಸದಸ್ಯ ಎಲ್ ಹನುಮಂತಯ್ಯ ಕಿವಿ ಮಾತು ಹೇಳಿದರು.

ನಗರದ ನಯನ ಸಭಾಂಗಣದಲ್ಲಿ ಭೀಮಬಾಯಿ ಮಹಿಳಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವ, ಭೀಮಬಾಯಿ ಜನ ಸೇವಾ ಟ್ರಸ್ಟ್ ಉದ್ಘಾಟಿಸಿ ಮಾತನಾಡಿದರು.ಸಮಾಜದ ಶೋಷಿತ ಮಹಿಳೆಯರ ಬೆಂಬಲವಾಗಿ ನಿಂತು ಅವರ ಕಷ್ಟ ಸುಖಗಳಿಗೆ ಸ್ಪಂದಿಸಲು ಡಾ. ಲಕ್ಷ್ಮಮ್ಮ ಅವರು ಈ ಟ್ರಸ್ಟ್ ಸ್ಥಾಪಿಸಿರುವುದು ಹೆಮ್ಮೆಯ ಸಂಗತಿ' ಎಂದರು.

ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿ ಮಾತನಾಡಿ 'ಮಹಿಳೆಯರು ಪುರುಷರಂತೆ ಸಮಾನಾಗಿ ದುಡಿಯುತ್ತಿದ್ದಾರೆ. ಮಹಿಳಾ ಸಂಘಗಳು ಸಮಾಜದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿವೆ. ಅದರಂತೆ ಸಮಾಜಕ್ಕೆ ಏನಾದರೂ ಕೊಡಗೆ ನೀಡಲು ತೀರ್ಮಾನಿಸಿ ಲಕ್ಷ್ಮಮ್ಮ ಅವರು ಸಂಘದ ಸದಸ್ಯರ ಮೂಲಕ ಸೇವೆ ಮಾಡುತ್ತಿರುವುದು ನಿಜಕ್ಕೂ ಮೆಚ್ಚುವಂಥದ್ದು ಎಂದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಲಾಯಿತು. ಸಂಘದ ಎಲ್ಲಾ ಸದಸ್ಯರಿಗೆ ಸೀರೇ ವಿತರಣೆ ಮಕ್ಕಳಿಗೆ ನೋಟ್ ಪುಸ್ತಕ ಹಾಗೂ ವಿಧವೆಯರಿಗೆ ಸೀರೆ ವಿತರಣೆ ಪೌರಕಾರ್ಮಿಕರಿಗೆ ಮತ್ತು ಅಂಗವಿಕಲರಿಗೆ ಸನ್ಮಾನ ಮಾಡಲಾಯಿತು.ಈ ವೇಳೆ ಟ್ರಸ್ಟ್ ಅಧ್ಯಕ್ಷೆ ಡಾ. ಲಕ್ಷ್ಮಮ್ಮ, ಉಪಾಧ್ಯಕ್ಷೆ ಮಂಜುಳಾ, ರಾಮೋಹಳ್ಳಿ ಸಿದ್ದರೂಡ ಮಿಷನ್ ಆರೂಢ ಭಾರತಿ ಸ್ವಾಮೀಜಿ, ನೆಲಮಂಗಲದ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿ, ನೆಲಮಂಗಲ ಶಾಸಕ ಎನ್. ಶ್ರೀನಿವಾಸ್, ಡಾ. ನರಸಿಂಹಮೂರ್ತಿ ಕೆ.ಜಿ, ಸಮಾಜ ಸೇವಕರಾದ ಸುಭಾಷಿಣಿ, ಭಾವನಾಶೇಖರ್, ಶ್ರೀಧರ್, ಹಿನ್ನೆಲೆ ಗಾಯಕಿ ಚೈತ್ರ, ಶಶಿಕಲಾ, ಪುರುಷೋತ್ತಮ್, ಉನ್ಮೇಷ ಭಾರತಿ ಮುಂತಾದವರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು