LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸರ್ಕಾರಿ ಬಸ್‌ಗಳ ಕೊರತೆ ಉದ್ಯಮಿ ಮೋಹನ್ ದಾಸ್ ಪೈ ಅಸಮಾಧಾನ

ಬೆಂಗಳೂರು: ಗುಂಡಿ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದ ಉದ್ಯಮಿ ಮೋಹನ್‌ದಾಸ್ ಪೈ ಈಗ ರಾಜ್ಯದಲ್ಲಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಟೀಕಿಸಿ ಸಚಿವ ರಾಮಲಿಂಗಾ ರೆಡ್ಡಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾರಿಗೆ ಸಚಿವರಾಗಿ ನಿಮ್ಮ ಸಿದ್ಧಾಂತ, ನಡೆಯಿಂದ ಉತ್ತಮ ಸಾರಿಗೆ ವ್ಯವಸ್ಥೆ ನೀಡುವಲ್ಲಿ ವಿಫಲರಾಗಿದ್ದೀರಿ. ಖಾಸಗಿ ವಲಯಕ್ಕೆ ಅವಕಾಶ ನೀಡಿ ಎಂದು ಕುಟುಕಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಾರಿಗೆ ಸರಿಯಿಲ್ಲ. ಬಸ್ಸುಗಳ ಸಂಖ್ಯೆ ಕಡಿಮೆಯಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಈ ಪೋಸ್ಟ್ಗೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಯಾವುದೇ ವೇದಿಕೆಯಲ್ಲಿ ನಿಮ್ಮೊಂದಿಗೆ ಮುಖಾಮುಖಿ ಚರ್ಚೆಗೆ ಸಿದ್ದ. ನಿಮ್ಮ ಜೊತೆಗೆ ಚರ್ಚೆ ಮಾಡಲು ನಮ್ಮ ಬಿಎಂಟಿಸಿ ಎಂಡಿ ಸಾಕು. ದಯಮಾಡಿ ಬಂದು ವಾಸ್ತವಾಂಶಗಳನ್ನು ನೇರವಾಗಿ ಅವರೊಂದಿಗೆ ಚರ್ಚಿಸಿ ನೀವು ಚರ್ಚೆಗೆ ಬರುತ್ತೀರಾ? ಇಲ್ಲ ಟ್ವೀಟ್ ಮಾಡುತ್ತಲೇ ಇರುತ್ತೀರಾ ಎಂದು ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ.
ನಿಮ್ಮ ದೃಷ್ಟಿಕೋನವು ಕೇವಲ ಪಕ್ಷಪಾತವಲ್ಲ. ಇದು ಮೂಲಭೂತವಾಗಿ ಸಿದ್ಧಾಂತವಾಗಿದೆ. ನೀವು ಸಾರ್ವಜನಿಕ ಸೇವೆಯನ್ನು ಬ್ಯಾಲೆನ್ಸ್ ಶೀಟ್ ಆಧಾರದಲ್ಲಿ ನೋಡುತ್ತೀರಿ. ನಾವು ಸಾರ್ವಜನಿಕ ಸಾರಿಗೆ ಸೇವೆಯಾಗಿ ನೋಡುತ್ತೇವೆ. ಶಕ್ತಿ ಯೋಜನೆ ಮೂಲಕ ಕ್ರಾಂತಿ ಮಾಡಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.
ನಾವು ಮಹಿಳೆಯರಿಗೆ ೬೫೦ ಕೋಟಿ+ ಉಚಿತ ಟಿಕೆಟ್ ನೀಡಿದ್ದೇವೆ. ಶಕ್ತಿ ಯೋಜನೆ ಕೇವಲ ಯೋಜನೆ ಅಲ್ಲ. ಇದು ಭಾರತದ ಇತಿಹಾಸದಲ್ಲಿ ಅತ್ಯಂತ ದೊಡ್ಡ ಆರ್ಥಿಕ ಸಬಲೀಕರಣ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಬದಲು ನೀವು ನೇರ ಚರ್ಚೆಗೆ ಬನ್ನಿ ಎಂದು ಸವಾಲು ಎಸೆದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು