ಎ.ಪಿ. ಅರ್ಜುನ್ ಸಾರಥ್ಯದಲ್ಲಿ ಮೂಡಿ ಬಂದಿರುವ ‘ಲಕ್ಷ್ಮೀಪುತ್ರ’ ಚಿತ್ರವನ್ನು ಅನ್ನಪೂರ್ಣ ಎ.ಪಿ. ಅರ್ಜುನ್ ನಿರ್ಮಾಣ ಮಾಡಿದ್ದು, ರವಿಕುಮಾರ್ ಅವರು ಸಹ ನಿರ್ಮಾಪಕರಾಗಿದ್ದಾರೆ.ಎ.ಪಿ. ಅರ್ಜುನ್ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದಿದ್ದು, ಸಂಭಾಷಣೆಯಲ್ಲಿ ಪ್ರಶಾಂತ್ ರಾಜಪ್ಪ ಮತ್ತು ವಿಜಯ್ ಈಶ್ವರ್ ಕೈಜೋಡಿಸಿದ್ದಾರೆ. ಹಾಗೂ ವಿಜಯ್ ಎಸ್. ಸ್ವಾಮಿ ಅವರ ಚೊಚ್ಚಲ ನಿರ್ದೇಶನ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ನಟ ಚಿಕ್ಕಣ್ಣ ನಾಯಕನಾಗಿ ನಟಿಸಿರುವ ಎರಡನೇ ಸಿನಿಮಾ ಈ ಚಿತ್ರ. ಇದರ ಟ್ರೇಲರ್ ಬಿಡುಗಡೆಯಾಗಿದೆ. ಹಾಸ್ಯದ ಜೊತೆಗೆ ಭರ್ಜರಿ ಆ್ಯಕ್ಷನ್ ಮತ್ತು ಭಾವನಾತ್ಮಕ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಅನ್ನು ಶಿವರಾಜ್‌ಕುಮಾರ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಹಳ್ಳಿ ಹುಡುಗನ ಗೆಟಪ್‌ನಲ್ಲಿ ಚಿಕ್ಕಣ್ಣ ಗಮನ ಸೆಳೆದಿದ್ದು, ಹಿರಿಯ ನಟಿ ತಾರಾ ಅವರು ಚಿಕ್ಕಣ್ಣನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಈ ವಾರ ಚಿತ್ರ ತೆರೆಗೆ ಬರಲಿದೆ.ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಟ ಶಿವರಾಜ್‌ಕುಮಾರ್, ಚಿಕ್ಕಣ್ಣ ಅವರ ನಟನೆ ಮತ್ತು ನೃತ್ಯವನ್ನು ಕೊಂಡಾಡಿದರು. “ಚಿಕ್ಕಣ್ಣ ಹಿಂದಿನ ಸಿನಿಮಾಗಳಿಗಿಂತಲೂ ಈ ಚಿತ್ರದಲ್ಲಿ ತುಂಬಾ ಲೀಲಾಜಾಲವಾಗಿ ಡ್ಯಾನ್ಸ್ ಮಾಡಿದ್ದಾರೆ. ಅವರ ಡ್ಯಾನ್ಸ್ ನೋಡಿದರೆ ನನಗೆ ಪ್ರಭುದೇವ ಅವರ ನೆನಪಾಗುತ್ತದೆ. ಭೂಷಣ್ ಮತ್ತು ಹರ್ಷ ಮಾಸ್ಟರ್ ಅವರ ಕೊರಿಯೋಗ್ರಫಿ ಹಾಗೂ ಅರ್ಜುನ್ ಜನ್ಯ ಅವರ ಮೂರು ಹಾಡುಗಳು ಅದ್ಭುತವಾಗಿವೆ. ವಿಶೇಷವಾಗಿ ತಾಯಿ ಸೆಂಟಿಮೆAಟ್ ಹಾಡಿನಲ್ಲಿ ವಿಷ್ಣುವರ್ಧನ್, ಅಂಬರೀಶ್, ಅನಂತ್ ನಾಗ್, ಶಂಕರ್ ನಾಗ್ ಅವರ ತಾಯಂದಿರ ಫೋಟೋಗಳನ್ನು ಬಳಸಿರುವುದು ಮೈ ರೋಮಾಂಚನಗೊಳಿಸುತ್ತದೆ” ಎಂದು ಭಾವುಕರಾದರು. “ಚಿಕ್ಕಣ್ಣ ಅವರ ಹಾಸ್ಯದಲ್ಲಿ ಆಡಂಬರವಿಲ್ಲ, ಬಹಳ ಸಟಲ್ ಆಗಿ ನಟಿಸುತ್ತಾರೆ. ಬರೆದಿಟ್ಟುಕೊಳ್ಳಿ, ಇನ್ನೆರಡು-ಮೂರು ವರ್ಷಗಳಲ್ಲಿ ಚಿಕ್ಕಣ್ಣ ದೊಡ್ಡ ಸೂಪರ್ ಸ್ಟಾರ್ ಆಗುತ್ತಾರೆ” ಎಂದು ಭವಿಷ್ಯ ನುಡಿದರು. ನಾಯಕಿ ವಂದಿತಾ ಹಾಗೂ ತಾರಾ ಅವರ ಅಭಿನಯಕ್ಕೂ ಶಿವಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು. ಶಿವರಾಜ್‌ಕುಮಾರ್ ಮಾತುಗಳಿಗೆ ಪ್ರತಿಕ್ರಿಯಿಸಿದ ನಟ ಚಿಕ್ಕಣ್ಣ, ಶಿವಣ್ಣ ಬಾಯಲ್ಲಿ ಇಂತಹ ಮಾತು ಕೇಳಿದಾಗಲೇ ನಾನು ಸೂಪರ್ ಸ್ಟಾರ್ ಆದಷ್ಟೇ ಖುಷಿಯಾಯಿತು” ಎಂದು ಸಂತಸ ಹಂಚಿಕೊAಡರು. ಚಿತ್ರ ನಿರ್ಮಾಣದ ಹಾದಿಯ ಬಗ್ಗೆ ಮಾತನಾಡಿದ ಎ.ಪಿ. ಅರ್ಜುನ್, ಈ ಸಿನಿಮಾ ಸೆಟ್ಟೇರಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವೇ ಕಾರಣ ಅಂದರು.