LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದು ಬಲಿಷ್ಠ ಭಾರತಕ್ಕೆ ಲಂಕಾ ಎದುರಾಳಿ

ಮುಂಬೈ: ಸುಮಾರು 12 ವರ್ಷಗಳ ಹಿಂದೆ ವಿಶ್ವಕಪ್ ಫೈನಲ್‍ನಲ್ಲಿ ಆಗ ಏಷ್ಯಾದ ಎರಡು ಬಲಿಷ್ಠ ತಂಡಗಳು ಎದುರಾಗಿದ್ದವು. ಈಗ ಭಾರತ ವಿಶ್ವಕಪ್‍ನಲ್ಲಿ ಮತ್ತೊಮ್ಮೆ ಶ್ರೀಲಂಕಾ ತಂಡವನ್ನು ಎದುರಿಸಲು ಸಜ್ಜಾಗಿದೆ. ಅಂದಿನ ದಿನಕ್ಕೆ ಹೋಲಿಸಿದರೆ ಗುರುವಾರ ನಡೆಯುವ ಪಂದ್ಯ ಎರಡು ಅಸಮಾನ ತಂಡಗಳ ನಡುವಣ ಹಣಾಹಣಿಯಾಗಿ ಕಾಣುತ್ತಿದೆ.

ಒಂದೆಡೆ ಆತಿಥೇಯ ತಂಡ ಇದುವರೆಗೆ ಆಡಿದ ಆರು ಲೀಗ್ ಪಂದ್ಯಗಳಲ್ಲಿ ಎದುರಾಳಿ ತಂಡಗಳ ಮೇಲೆ ಸವಾರಿ ಮಾಡಿದೆ. ಇನ್ನೊಂದೆಡೆ, ಶ್ರೀಲಂಕಾ ಗೆದ್ದಿರುವುದಕ್ಕಿಂತ ಸೋತಿದ್ದೇ ಜಾಸ್ತಿ.ಏಕೈಕ ಅಜೇಯ ತಂಡವಾಗಿರುವ ಭಾರತಕ್ಕೆ ಗಂಭೀರ ಸವಾಲು ಎದುರಾಗಿಲ್ಲ. ತಂಡದ ಆತ್ಮವಿಶ್ವಾಸ ಈಗ ಎತ್ತರದಲ್ಲಿದೆ. ಅದಕ್ಕಿಂತ ತನ್ನ ಸಾಮರ್ಥ್ಯ ಮತ್ತು ಕೌಶಲದ ಮೇಲಿರುವ ನಂಬಿಕೆಯೂ ಹೆಚ್ಚು ಇದೆ.

ಆಸ್ಟ್ರೇಲಿಯಾ ವಿರುದ್ಧ 2 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡಾಗ ಪುಟಿದೆದ್ದ ರೀತಿ ಅಮೋಘವಾಗಿತ್ತು. ಇಂಗ್ಲೆಂಡ್ ವಿರುದ್ಧ ಲಖನೌದಲ್ಲಿ 229 ರನ್ ಗಳಿಸಿದ್ದಾಗ ಹೋರಾಟ ಎದುರಾಗಬಹುದು ಎನ್ನುವ ಸ್ಥಿತಿಯಲ್ಲಿ ಜಯ ಸಲೀಸಾಗಿಯೇ ದಾಖಲಾಗಿತ್ತು. ಹೀಗಾಗಿ ರೋಹಿತ್ ಶರ್ಮಾ ಬಳಗವನ್ನು ಎದುರಿಸುವಾಗ ಎದುರಾಳಿ ತಂಡಗಳೂ ತಮ್ಮ ಆಟದ ಮಟ್ಟವನ್ನು ಗಮನಾರ್ಹವಾಗಿ ಎತ್ತರಿಸಬೇಕಾಗಿದೆ.

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಅವಕಾಶ ಪಡೆದ ಮೊಹಮ್ಮದ್ ಶಮಿ ಅವರು ತಂಡದ ಗೆಲುವಿನಲ್ಲಿ ಮಿಂಚಿದ್ದು ಗಮನಾರ್ಹ. ಒಮ್ಮೆ ಐದರ ಗೊಂಚಲು ಸೇರಿದಂತೆ ಎರಡು ಪಂದ್ಯಗಳಿಂದ 9 ವಿಕೆಟ್. ಹೀಗಾಗಿ ಅವರ ಸ್ಥಾನ ಗಟ್ಟಿಯಾದಂತಿದೆ. ಪಾಂಡ್ಯ ತಂಡಕ್ಕೆ ಮರಳುವ ಬಗ್ಗೆ ಇದುವರೆಗೆ ಖಚಿತ ಮಾಹಿತಿಯಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು