LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಮೇಶ್ ಅರವಿಂದ್ ಹಾಗೂ ಡಾಲಿ ಧನಂಜಯ ಅವರಿಂದ "ವಿ ಸಿನಿಮಾಸ್" ಅನಾವರಣ

ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ ಖುಷಿಯ ವಿಚಾರ. ಹೌದು. ಇತ್ತೀಚಿಗೆ ಹೊಯ್ಸಳ ನಗರ, ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ "ವಿ ಸಿನಿಮಾಸ್" ಎಂಬ ನಾಲ್ಕು ಆಡಿಗಳ ಸುಸಜ್ಜಿತ ಮಲ್ಟಿಪ್ಲೆಕ್ಸ್ ಆರಂಭವಾಯಿತು.

ರಮೇಶ್ ಅರವಿಂದ್ ಚಿತ್ರಮಂದಿರವನ್ನು ಉದ್ಘಾಟಿಸಿ ಮೊದಲ ಶೋ ಗೆ ಟಿಕೇಟ್ ಪಡೆದರು. ಡಾಲಿ ಧನಂಜಯ ಪ್ರೊಜೆಕ್ಟರ್ ಚಾಲನೆ ಮಾಡಿದರು. ಹಿರಿಯ ವಿತರಕ ಮಾರ್ಸ್ ಸುರೇಶ್, ಮಾಲೀಕರಾದ ಅಜಿತ್ ಜಗದೀಶ್ ಹಾಗೂ ತಂತ್ರಜ್ಞ ಮ್ಯಾಥ್ಯೂ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ವಿತರಕ ಮಾರ್ಸ್ ಸುರೇಶ್ , ಅಜಿತ್ ಅವರು ರಾಮಮೂರ್ತಿ ನಗರದಲ್ಲಿ ಸುಸಜ್ಜಿತ ಚಿತ್ರಮಂದಿರವನ್ನು ನಿರ್ಮಿಸಿದ್ದಾರೆ. ಈ ಚಿತ್ರಮಂದಿರ ನೋಡಿಕೊಳ್ಳುವ ಉಸ್ತುವಾರಿಯನ್ನು ನನಗೆ ನೀಡಿದ್ದಾರೆ.

ನೂರರ ಆಸುಪಾಸಿನ ಆಸನದ ವ್ಯವಸ್ಥೆಯುಳ್ಳ ನಾಲ್ಕು ಆಡಿಗಳು ಇಲ್ಲಿದೆ. ಈಗಿನ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯಾವುದೇ ಮೂಲೆಯಲ್ಲಿ ಕುಳಿತುಕೊಂಡು ನೋಡಿದರೂ, ಪರದೆಯಲ್ಲಿ ಸಿನಿಮಾ ಚೆನ್ನಾಗಿ ಕಾಣಬೇಕು ಆ ರೀತಿ ಆಸನದ ವ್ಯವಸ್ಥೆ ಮಾಡಲಾಗಿದೆ. ಟಿಕೇಟ್ ದರ ಕೂಡ ಬೇರೆ ಮಲ್ಟಿಪ್ಲೆಕ್ಸ್ ಗಳಿಗಿಂತ ತುಂಬಾ ಕಡಿಮೆ ಇರುತ್ತದೆ. ಮೊದಲ ಪ್ರಾಧಾನ್ಯತೆ ಕನ್ನಡ ಚಿತ್ರಗಳಿಗಿರುತ್ತದೆ. ಇಂದು ಮೊದಲ ಚಿತ್ರವಾಗಿ ಡಾಲಿ ಧನಂಜಯ ಅಭಿನಯದ "ಕೋಟಿ" ಚಿತ್ರ ಪ್ರದರ್ಶನವಾಗಿದೆ ಎಂದರು.

ಏನೇ ಆಧುನಿಕ ತಂತ್ರಜ್ಞಾನ ಬಂದರೂ ಥಿಯೇಟರ್ ನಲ್ಲಿ ಸಾವಿರಾರು ಜನರ ಮಧ್ಯೆ ಕುಳಿತು ಸಿನಿಮಾ ನೋಡುವ ಅನುಭವವೇ ಬೇರೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರ ನೋಡಿ. ಚಿತ್ರಮಂದಿರ ಪ್ರಾರಂಭ ಮಾಡಿರುವ ಮಾಲೀಕರಿಗೆ ಹಾಗೂ ಮಾರ್ಸ್ ಸುರೇಶ್ ಅವರಿಗೆ ಅಭಿನಂದನೆಗಳು ಎಂದರು ರಮೇಶ್ ಅರವಿಂದ್. ಚಿತ್ರಮಂದಿರಲ್ಲಿ ಸಿನಿಮಾ ನೋಡುವ ಖುಷಿ ಮನೆಯಲ್ಲಿ ನೋಡಿದರೆ ಬರುವುದಿಲ್ಲ.. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರವನ್ನು ನೋಡಿ ಆನಂದಿಸಿದಾಗ, ನಮ್ಮಂತಹ ನಟರಿಗೆ ಆಗುವ ಸಂತೋಷ ಅಷ್ಟಿಷ್ಟಲ್ಲ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರಗಳನ್ನು ನೋಡಿ ಎಂದು ತಿಳಿಸಿದ ಡಾಲಿ ಧನಂಜಯ, "ವಿ ಸಿನಿಮಾಸ್" ಗೆ ಶುಭ ಹಾರೈಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು