LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆ, ನೋಂದಣಿಗೆ ಚಾಲನೆ

ದಾವಣಗೆರೆ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಜಿಲ್ಲೆಯಲ್ಲಿ ಯುವನಿಧಿಗೆ ನೋಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ.ವಿ ಚಾಲನೆ ನೀಡಿದರು.

ಮಂಗಳವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರ್ಕಾರದ ಐದನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದೊಂದಿಗೆ ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಯವರು ಚಾಲನೆ ನೀಡಿರುವರು.

ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ, ಡಿಪ್ಲಮೋ ಮುಗಿಸಿರುವ ನಿರುದ್ಯೋಗಿ ಯುವಕ-ಯುವತಿಯರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಅರ್ಜಿದಾರರು ಕರ್ನಾಟಕದ ನಿವಾಸಿಗಳಾಗಿರಬೇಕು ಮತ್ತು 2023 ರಲ್ಲಿ ಕೋರ್ಸ್ ಪೂರ್ಣಗೊಳಿಸಿರಬೇಕು. ಪದವಿ ಪಾಸ್ ಆದವರಿಗೆ 3 ಸಾವಿರ, ಡಿಪ್ಲೊಮೋ ತೇರ್ಗಡೆ ಹೊಂದಿದವರಿಗೆ 1,500 ರೂಪಾಯಿಗಳನ್ನು ಎರಡು ವರ್ಷಗಳವರೆಗೆ ನೀಡಲಾಗುತ್ತದೆ.

ಪದವಿ ಪಡೆದು ವಿದ್ಯಾಭ್ಯಾಸವನ್ನು ಮುಂದುವರೆಸುತ್ತಿರುವವರು ಈ ಯೋಜನೆಗೆ ಅರ್ಹರಾಗುವುದಿಲ್ಲ. ಅರ್ಜಿ ಸಲ್ಲಿಸುವಾಗ ನೀಡಿದ ದಾಖಲೆಗಳನ್ನು ಪರಿಶೀಲಿಸುವ ಎಲ್ಲಾ ರೀತಿಯ ವ್ಯವಸ್ಥೆಯನ್ನು ಸರ್ಕಾರ ಮಾಡಿಕೊಂಡಿದೆ.ಯುವ ನಿಧಿ ಫಲಾನುಭವಿಗಳು ಕೆಲಸ ದೊರೆತಿದೆಯೋ ಇಲ್ಲವೋ ಎಂಬುದನ್ನು ಪ್ರತಿ ತಿಂಗಳು ಸಂದೇಶ ಅಥವಾ ಮಾಹಿತಿ ನೀಡಬೇಕಾಗುತ್ತದೆ.

ಸ್ವಂತ ಉದ್ಯೋಗ ಆರಂಭಿಸಿದರೆ, ಉದ್ಯೋಗ ಸಿಕ್ಕರೆ ಈ ಭತ್ಯೆ ಪಡೆಯುವಂತಿಲ್ಲ. ಐಟಿ- ಜಿಎಸ್‍ಟಿ ನೋಂದಣಿ, ಇಎಸ್‍ಐ, ಪಿಎಫ್ ಮಾಹಿತಿಯಿಂದಲೂ ಉದ್ಯೋಗ ಪಡೆದಿರುವ ಬಗ್ಗೆ ಮಾಹಿತಿ ಸಿಗಲಿದೆ. ವಿದ್ಯಾರ್ಥಿಗಳು ಯೋಜನೆಯನ್ನು ದುರುಪ ಯೋಗಪಡಿಸಿಕೊಳ್ಳದೇ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್.ಬಿ ಇಟ್ನಾಳ್ ಮಾತನಾಡಿ ಗ್ರಾಮ ಮಟ್ಟದಲ್ಲಿ ಬಾಪೂಜಿ ಸೇವಾ ಕೇಂದ್ರದಲ್ಲಿ ಈ ದಿನದಿಂದಲೇ ಅರ್ಜಿಗಳನ್ನು ಸ್ವೀಕಾರ ಮಾಡಲಾಗುತ್ತಿದೆ. ಅಲ್ಲದೇ ಡಿ. 27 ರಿಂದ 29 ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿ.ಡಿ.ಓ, ಡಾಟಾ ಎಂಟ್ರಿ ಆಪರೇಟರ್, ಅಂಗನವಾಡಿ ಕಾರ್ಯಕರ್ತೆಯರು, ಬ್ಯಾಂಕ್ ಪ್ರತಿನಿಧಿಗಳು ಹಾಗೂ ಇ.ಡಿ.ಸಿ.ಎಸ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಕ್ಯಾಂಪ್‍ಗಳನ್ನು ಆಯೋಜನೆ ಮಾಡಲಾಗುತ್ತದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸ್ಥಿತಿಗತಿ, ಆಧಾರ್ ಜೋಡಣೆ ಹಾಗೂ ಇನ್ನಿತರೆ ತಾಂತ್ರಿಕ ಸಮಸ್ಯೆಗಳಿದ್ದರೆ, ಇಲ್ಲಿ ಬಗೆಹರಿಸಿಕೊಳ್ಳಬಹುದು ಎಂದರು.

ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ..ಡಿ, ಕೌಶಲ್ಯಾಭಿವೃದ್ಧಿ ಅಧಿಕಾರಿ ಬಸವನಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು