LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅಧಿಕಾರ ದುರುಪಯೋಗದ ವಿರುದ್ಧ ಕಾನೂನು ಹೋರಾಟ: ಎಚ್ಡಿಕೆ

ಮೈಸೂರು: ಪ್ರಜ್ವಲ್ ರೇವಣ್ಣ ಮಾಡಿದ್ದಾರೆ ಎನ್ನಲಾದ ತಪ್ಪು ಸಾಭೀತಾದರೆ ಶಿಕ್ಷೆ ಕೊಡಿ ಎಂದು ಆಗ್ರಹಿಸಿರುವ ಮಾಜಿ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿಗಳೇ ಅಧಿಕಾರ ಶಾಶ್ವತವಲ್ಲ. ನಿಮ್ಮ ಅಧಿಕಾರ ದುರುಪಯೋಗದ ವಿರುದ್ಧ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜೇಗೌಡ, ಶಿವರಾಮೇಗೌಡ, ಡಿಕೆ ಶಿವಕುಮಾರ್ ಪೆನ್‍ಡ್ರೈವ್ ವಿತರಣೆ ಹಿಂದೆ ಇದ್ದಾರೆ.

ಅರ್ಧ ನಿಮಿಷದಲ್ಲೆ ಎಲ್ಲವೂ ತೀರ್ಮಾನವಾಗಿದೆ. ಈಗ ಎಂಟು ಜನ ಸೇರಿದಂತೆ ಪೊಲೀಸರ ರಕ್ಷಣೆಯಲ್ಲಿ ಕಾರ್ತಿಕ್ ಇದ್ದಾನೆ ಯಾವ ಕಾರಣಕ್ಕೆ ಇನ್ನೂ ಕಾರ್ತಿಕ್ ಬಂಧನ ತೋರಿಸಿಲ್ಲ? ನ್ಯಾಯಾಲಯಕ್ಕೆ ಹಾಜರು ಪಡಿಸಿಲ್ಲ ಹೇಳಿ ಎಂದು ಪ್ರಶ್ನಿಸಿದ್ದಾರೆ.ವಿರೋಧಿಗಳಿಗೆ ತೊಂದರೆ ಕೊಡುವುದು. ದ್ವೇಷದ ರಾಜಕಾರಣ ಮಾಡುವುದಷ್ಟೆ ಸರಕಾರದ ಕೆಲಸ ಆಗಿದೆ. ಸರ್ಕಾರದ ಪ್ರಾಯೋಜಕತ್ವದಲ್ಲಿ ಮೇ 30 ರಂದು ಹಾಸನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿದೆ.

ಅಂಗನವಾಡಿ ಕಾರ್ಯಕರ್ತರನ್ನು ಪ್ರತಿಭಟನೆಗೆ ಕರೆ ತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನನಗೆ ಹೇಳಿದ್ದರೆ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳುಹಿಸುತ್ತಿದ್ದೆ ಎಂದು ವಾಗ್ದಾಳಿ ಮಾಡಿದರು.ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಳಿ ಇರುವವರೆಲ್ಲ ಭಯೋತ್ಪಾದಕರೇ, ಬಹಳಷ್ಟು ಭಯೋತ್ಪಾದಕರು ಅವರ ಸುತ್ತಮುತ್ತ ಇದ್ದಾರೆ. ನನಗೆ ಡಿಕೆ ಶಿವಕುಮಾರ್ ಕಂಡರೆ ಅಸೂಯೆ ಅಂತಾ ಹೇಳಿದ್ದಾರೆ. ನಾನು ಯಾಕೆ ಅವರನ್ನು ನೋಡಿ ಅಸೂಯೆ ಪಡಲಿ ವಿಡಿಯೋ ಮಾಡಿರುವುದು ಒಂದು ಭಾಗ. ವಿಡಿಯೋವನ್ನು ಚುನಾವಣೆಗಾಗಿ ವಿತರಿಸಿದ್ದು ಅಪರಾಧ ಅಲ್ವಾ ವಿಡಿಯೋ ಮಾಡಿದ್ದಕ್ಕಿಂತ ಅದನ್ನು ಹಂಚಿದ್ದು ಹೆಚ್ಚು ಅಪರಾಧ ಅಲ್ವಾ? ಎಂದು ಹೇಳಿದ್ದಾರೆ.

ಮಹಾನುಭಾವರು 1980 ರಲ್ಲೇ ಸಿಡಿ ಫ್ಯಾಕ್ಟರಿ ಓಪನ್ ಮಾಡಿದ್ದರು. ಅಧಿಕಾರ ಯಾರ ಅಪ್ಪನ ಮನೆ ಆಸ್ತಿಯೂ ಅಲ್ಲ. ರಾಜಕೀಯದಲ್ಲಿ ಏಳು ಬೀಳು ಅದು ಭಗವಂತನ ಇಚ್ಚೆ. ಇದರಲ್ಲಿ ಅಸೂಯೆ ಯಾಕೆಪ್ರಧಾನಿ ಸ್ಥಾನವನ್ನೇ ಅತ್ಯಂತ ಸುಲಭವಾಗಿ ತೆರವು ಮಾಡಿದ ವಂಶ ನಮ್ಮದು. ಎಲ್ಲ ಅಧಿಕಾರವನ್ನು ನಾವು ನೋಡಿಯಾಗಿದೆ. ನಮಗೆ ಅಧಿಕಾರ ಬೇಡ ಅಂದರೂ ಬಂದಿದೆ. ನಾವು ಅಧಿಕಾರ ಹುಡುಕಿಕೊಂಡು ಹೋಗಿಲ್ಲ. ನಿಮಗೆ ಇದು ಗೊತ್ತಿರಲಿ ಎಂದು ಗುಡುಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು