LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಜೀವನಗಾಥೆ ಜಿಯೊಸಿನಿಮಾದಲ್ಲಿ !

 ವೈವಿಧ್ಯಮಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಹೊಂದಿರುವ ಕಂಟೆಂಟ್ ಅನ್ನು ಜನರಿಗೆ ನೀಡುವಲ್ಲಿ JioCinema ಮುಂಚೂಣಿಯಲ್ಲಿದೆ. ಆ ಪ್ರಯತ್ನದ ಭಾಗವಾಗಿ ಇದೀಗ, ಮುತ್ತಯ್ಯ ಮುರಳೀಧರನ್ ಅವರ ಜೀವನವನ್ನಾಧರಿಸಿದ, ಎಂ.ಎಸ್. ಶ್ರೀಪತಿ ನಿರ್ದೇಶಿಸಿರುವ 800 ಸಿನಿಮಾ JioCinemaದಲ್ಲಿ ಬಿಡುಗಡೆಗೊಳ್ಳುತ್ತಿದೆ.

ಇದೇ ಡಿಸೆಂಬರ್ 2ರಂದು JioCinema ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೊಳ್ಳುತ್ತಿರುವ ಈ ಸಿನಿಮಾ, ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ್ದು. ಟೆಸ್ಟ್ ಕ್ರಿಕೆಟ್‍ನಲ್ಲಿ 800 ವಿಕೆಟ್‍ಗಳನ್ನು ಪಡೆದುಕೊಂಡು ದಾಖಲೆ ನಿರ್ಮಿಸಿದ್ದ ಬೌಲರ್ ಬದುಕಿನ ತೆರೆ-ಮರೆಯ ಕಥೆಯನ್ನು ಹೇಳುವ ಈ ಸಿನಿಮಾ, ಕ್ರಿಕೆಟ್ ಪ್ರಿಯರಿಗಂತೂ ಮನರಂಜನೆಯ ಮೃಷ್ಟಾನ್ನವನ್ನೇ ಉಣಿಸುತ್ತದೆ.

ವಿವೇಕ್ ರಂಗಾಚಾರಿ ನಿರ್ಮಾಣದ ಈ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಹಿಂದಿ, ಬೆಂಗಾಲಿ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ವೀಕ್ಷಣೆಗೆ ಲಭ್ಯವಿರುವುದು ವಿಶೇಷ. ಸ್ಪಿನ್ನರ್ ಬದುಕಿನ ಸ್ಟನ್ನಿಂಗ್ ಸ್ಟೋರಿ!: ಖ್ಯಾತ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಕ್ರಿಕೆಟ್ ಬದುಕಿನ ಸಾಧನೆಗಳನ್ನು ಹೇಳುವ 800 ಸಿನಿಮಾ, ಅವರ ಖಾಸಗಿ ಬದುಕಿನ ಸಂಕಷ್ಟಗಳನ್ನೂ ನೋಡುಗರ ಎದುರಿಗೆ ತೆರೆದಿಡುತ್ತದೆ. ಹಲವು ಸಂಕಷ್ಟಗಳು, ವಿವಾದಗಳನ್ನು ಹಾದು ಕ್ರಿಕೆಟ್ ಜಗತ್ತಿನ ಲೆಜೆಂಡ್ ಆದ ಸ್ಪೂರ್ತಿಕಥೆಯನ್ನು ಹೇಳುತ್ತದೆ.

800 ಸಿನಿಮಾದಲ್ಲಿ, ತಮಿಳಿನ ಯುವನಟ ಮಧುರ್ ಮಿತ್ತಲ್, ಮುತ್ತಯ್ಯ ಮುರಳೀಧರನ್ ಅವರ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಮಹಿಮಾ ನಂಬಿಯತಾರ್, ನಾಸರ್, ಆರುಲ್‍ದಾಸ್ ಮುಖ್ಯಭೂಮಿಕೆಯಲ್ಲಿದ್ದಾರೆ. ಮುತ್ತಯ್ಯ ಮುರಳೀಧರನ್ ಪಾತ್ರಕ್ಕೆ ಜೀವತುಂಬುವ ಅವಕಾಶ ಸಿಕ್ಕಿರುವುದು ಮಧುರ್ ಮಿತ್ತಲ್ ಅವರಿಗೆ ಸಾಕಷ್ಟು ಖುಷಿಕೊಟ್ಟಿದೆ. ತಮ್ಮ ಸಿನಿಮಾ JioCinema ದಲ್ಲಿ ಪ್ರೀಮಿಯರ್ ಆಗುತ್ತಿರುವ ಕುರಿತೂ ಅವರು ಅಷ್ಟೇ ಎಕ್ಸೈಟ್ ಆಗಿದ್ದಾರೆ.

JioCinemaಒಟಿಟಿ ವೇದಿಕೆಯ ಮೂಲಕ ತಮ್ಮ ಜೀವನವನ್ನಾಧರಿಸಿದ ಸಿನಿಮಾ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿರುವುದು ಮುತ್ತಯ್ಯ ಮುರಳೀಧರನ್ ಅವರನ್ನೂ ರೋಮಾಂಚಿತಗೊಳಿಸಿದೆ. ?ನನ್ನ ಬದುಕಿನ ಕಥೆ, ಸ್ಫೂರ್ತಿದಾಯಕ ಸಿನಿಮಾ ಆಗುತ್ತಿರುವುದು ನಿಜಕ್ಕೂ ನನ್ನಲ್ಲಿ ವಿನೀತಭಾವ ಹುಟ್ಟಿಸಿದೆ. ಇದಕ್ಕೆ ಕಾರಣರಾದವರಿಗೆ ನಾನು ಕೃತಜ್ಞನಾಗಿದ್ದೇನೆ. ಈ ಸಿನಿಮಾಗೆ ತುಂಬ ಒಳ್ಳೆಯ ಪ್ರತಿಸ್ಪಂದನ ಸಿಗುತ್ತದೆ ಎಂಬ ನಂಬಿಕೆ ನನಗಿದೆ.

ತಮ್ಮ ಕನಸನ್ನು ನನಸಾಗಿಸಿಕೊಳ್ಳುವ ದಾರಿಯಲ್ಲಿರುವ ಅಸಂಖ್ಯ ಯವ ಪ್ರತಿಭಾವಂತರಿಗೆ ಈ ಸಿನಿಮಾ ಸ್ಫೂರ್ತಿ ನೀಡಲಿ ಎಂದು ನಾನು ಹಾರೈಸುತ್ತೇನೆ. ನನ್ನ ಪಾಲಿಗೆ ಕ್ರಿಕೆಟ್ ಎನ್ನುವುದು ಬದುಕಿನ ಕ್ರಮವೇ ಆಗಿತ್ತು. ದೇಶಕ್ಕಾಗಿ ಆಡುವ ಅವಕಾಶ ಸಿಕ್ಕಿದ್ದು ನನಗೆ ಸಂದ ದೊಡ್ಡ ಗೌರವ ಎಂದು ಮುರಳೀಧರನ್ ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ.ಕ್ರಿಕೆಟ್ ಲೋಕದಲ್ಲಿ ದಂತಕಥೆಯಾದ ಮುತ್ತಯ್ಯ ಮುರಳೀಧರನ್ ಬದುಕಿನ ಕಥೆ, 800 ಸಿನಿಮಾವನ್ನು ಡಿಸೆಂಬರ್ 2ರಿಂದ ಎಕ್ಸ್‍ಕ್ಲ್ಯೂಸಿವ್ ಆಗಿ ವೀಕ್ಷಿಸಿ, JioCinemaದಲ್ಲಿ!

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು