LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಚಿರತೆ ಸೆರೆಗೆ ಕಾರ್ಯಾಚರಣೆ

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಕಾಣಿಸಿಕೊಂಡಿರುವ ಚಿರತೆಯಿಂದಾಗಿ ಜನರು ಭಯಭೀತರಾಗಿದ್ದು, ಚಿರತೆ ಸೆರೆಗಾಗಿ ಮೈಸೂರಿನಿಂದ ವಿಶೇಷ ಕಾರ್ಯಾಚರಣೆ ಪಡೆ ಆಗಮಿಸಿದೆ.ಕಾಡಿನ ಸುತ್ತಮುತ್ತಲಿನ ಗಾಮಗಳಿಗೆ ಚಿರತೆ, ಹುಲಿ, ಆನೆಗಳ ಹಾವಳಿ ಹೆಚ್ಚಾಗಿದ್ದು, ಬೆಂಗಳೂರಿನಂತಹ ಮಹಾನಗರಕ್ಕೆ ಚಿರತೆ ಕಾಲಿಟ್ಟಿದ್ದು, ಆನೇಕಲ್‍ಸುತ್ತ ಮುತ್ತ ಜನತೆಯಲ್ಲಿ ಚಿರತೆ ಭಯ ಆವರಿಸಿದೆ.

ಅಕ್ಟೋಬರ್ 28ರ ಮಧ್ಯರಾತ್ರಿ 8ಅಡಿ ಎತ್ತರದ ಗೋಡೆ ಹಾರಿ ಅಪಾರ್ಟ್‍ಮೆಂಟ್‍ಗೆ ಚಿರತೆಯೊಂದು ನುಗ್ಗಿತ್ತು. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಕೂಡ್ಲುಗೇಟ್ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಜನರು ಕೈನಲ್ಲಿ ದೊಣ್ಣೆ ಹಿಡಿದುಕೊಂಡು ಆತಂಕದಲ್ಲಿಯೇ ಓಡಾಡುತ್ತಿದ್ದಾರೆ.

ತಡರಾತ್ರಿ 2 ಗಂಟೆ ಸಮಯದಲ್ಲಿ ಕೂಡ್ಲುಗೇಟ್ ಸಮೀಪ ಚಿರತೆ ಕಾಣಿಸಿಕೊಂಡಿದ್ದು, ಕಾರಿನ ಗ್ಯಾರೇಜ್ ನಲ್ಲಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಜನರಲ್ಲಿ ಚಿರತೆ ಭಯ ಮತ್ತಷ್ಟು ಹೆಚ್ಚಾಗಿದೆ. ಚಿರತೆ ಓಡಾಡಿರುವುದನ್ನು ಗಸ್ತಿನಲ್ಲಿದ್ದ ಪೊಲೀಸರು ನೋಡಿದ್ದಾರೆ. ಅಲ್ಲದೇ ಸ್ಥಳೀಯರು ಕೂಡ ಚಿರತೆ ನೋಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಪರಿಶೀಲನೆ ವೇಳೆ ಚಿರತೆ ಪತ್ತೆಯಾಗಿಲ್ಲ. ಈಗಾಗಲೇ ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನುಗಳನ್ನು ಇಟ್ಟಿದ್ದು, ರಾತ್ರಿ ವೇಳೆ ಒಂಟಿಯಾಗಿ ಓಡಾಡದಂತೆ ಅರಣ್ಯ ಅಧಿಕಾರಿಗಳು ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬೊಮ್ಮನಹಳ್ಳಿ, ಊSಖ ಲೇಔಟ್, ಃಖಿಒ ಲೇಔಟ್‍ನಲ್ಲಿ ಜನರಲ್ಲಿ ಚಿರತೆ ಆತಂಕ ಮನೆ ಮಾಡಿದೆ.
ಚಿರತೆ ಸೆರೆಗಾಗಿ ಸಿಸಿಎಸ್ ಲಿಂಗರಾಜು, ಡಿಎಫ್‍ಓ ರವೀಂದ್ರ ನೇತೃತ್ವದಲ್ಲಿ 5ತಂಡಗಳ ರಚನೆ ಮಾಡಲಾಗಿದೆ. ಆನೇಕಲ್, ಬನ್ನೇರುಘಟ್ಟ, ಕಗ್ಗಲೀಪುರ, ಕೆಆರ್‍ಪುರಂನಲ್ಲಿ ಆರ್‍ಎಫ್‍ಓ ಅಧಿಕಾರಿಗಳು ಈ ತಂಡದಲ್ಲಿದ್ದಾರೆ. ಎಇಸಿಎಫ್ ಲೇಔಟ್‍ಗೆ ಹೊಂದಿಕೊಂಡಿರುವ ಖಾಲಿ ಜಾಗದಲ್ಲಿ ಎರಡು ಬೋನ್ ಇರಿಸಲಾಗಿದ್ದು, ಅದರಲ್ಲಿ ಜೀವಂತ ಕೋಳಿಗಳನ್ನು ಬಿಡಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು