ಬೆಂಗಳೂರು: ನಗರದ ಬನಶಂಕರಿಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಇದಕ್ಕೂ ಮುನ್ನ ಜುಲೈ ತಿಂಗಳಲ್ಲಿ ಇದೇ ಏರಿಯಾದಲ್ಲಿ ಚಿರತೆ ಕಾಣಿಸಿಕೊಂಡಿತ್ತು.ಬನಶಂಕರಿ 5ನೇ ಹಂತದ 2ನೇ ಬ್ಲಾಕ್‌ನಲ್ಲಿ ಚಿರತೆ ಮತ್ತೆ ಪ್ರತ್ಯಕ್ಷಗೊಂಡಿದೆ. ಸೆ.9ರ ಬೆಳಗಿನ ಜಾವ 4 ಗಂಟೆಗೆ ಮನೆಯೊಂದರ ಮುಂದೆ ಚಿರತೆ ಓಡಾಟ ನಡೆಸಿದ್ದು, ಈ ವೇಳೆ ಅಲ್ಲಿದ್ದ ನಾಯಿಗಳ ಮೇಲೆ ದಾಳಿಗೆ ಯತ್ನಿಸಿದೆ. ಚಿರತೆ ಓಡಾಟದ ಎಲ್ಲಾ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ. ಈ ಹಿಂದೆ ಪಟಾಕಿ ಸಿಡಿಸಿ ಚಿರತೆಯನ್ನು ಕಾಡಿಗೆ ಅಟ್ಟಲಾಗಿತ್ತು. ಆದರೆ ಈಗ ಮತ್ತೆ ವಾಪಸ್ ಬಂದಿದೆ. ಇದರಿಂದ ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.