LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

"ನಮ್ಮ ಧ್ವನಿ ಕೇಂದ್ರದ ಕಿವಿಗೆ ಬೀಳಲಿ"

ದೆಹಲಿ:``ನಮ್ಮ ಕೂಗು ಕೇಂದ್ರ ಸರ್ಕಾರದ ಕಿವಿಗೆ ಬೀಳಲಿ ಎಂದು ದೆಹಲಿಗೆ ಬಂದು ನಾವು ಧ್ವನಿ ಎತ್ತಿದ್ದೇವೆ'' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಈ ಹೋರಾಟದಿಂದ ಸಮಸ್ಯೆ ಬಗೆಹರಿಯುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ``ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವಾಗಿದೆ. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಹೇಳಿದ್ದರೂ ಇವರು ಕಿವಿಗೆ ಹಾಕಿಕೊಂಡಿಲ್ಲ. ಹೀಗಾಗಿ ನಾವು ಇಲ್ಲಿಗೆ ಬಂದು ಹೋರಾಟ ಮಾಡುತ್ತಿದ್ದೇವೆ.'' ಎಂದರು.

ರಾಜ್ಯ ಸರ್ಕಾರದ ಹೋರಾಟ ರಾಜಕೀಯ ಸ್ಟಂಟ್ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ``ಬಿಜೆಪಿಯವರು ನಮ್ಮ ಹೋರಾಟದ ಬಗ್ಗೆ ಏನಾದರೂ ಹೇಳಲಿ. ನಮ್ಮಲ್ಲಿ ಯಾರೂ ಸಿನಿಮಾ ನಿರ್ದೇಶಕರು, ನಿರ್ಮಾಪಕರು ಇಲ್ಲ. ಅವರ ಪಕ್ಷದಲ್ಲೇ ನಿರ್ದೇಶಕರು, ನಿರ್ಮಾಪಕರು ಇದ್ದಾರೆ. ನಾವು ನೋಡುತ್ತಿದ್ದೇವೆ.

ಅವರು ಭಾವನೆ ಮೇಲೆ ದೇಶ ತೆಗೆದುಕೊಂಡು ಹೋದರೆ, ನಾವು ಜನರ ಬದುಕಿನ ಬಗ್ಗೆ ಗಮನ ಹರಿಸುತ್ತಿದ್ದೇವೆ. ನಮ್ಮ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದವರು ಬೇರೆ ರಾಜ್ಯಗಳಲ್ಲಿ ಅವರೇ ಗ್ಯಾರಂಟಿ ಘೋಷಣೆ ಮಾಡಿದ್ದು ಯಾಕೆ?'' ಎಂದು ಪ್ರಶ್ನೆ ಮಾಡಿದರು.ಗ್ಯಾರಂಟಿ ಯೋಜನೆಯಿಂದ ಹಣ ಖಾಲಿ ಮಾಡಿಕೊಂಡು ದೆಹಲಿಗೆ ಬಂದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ,``ನಮ್ಮ ಹಣ ಖಾಲಿಯಾಗಿಲ್ಲ. ಸರ್ಕಾರ ನಡೆಸುವ ಸಾಮಥ್ರ್ಯ ನಮಗಿದೆ. ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಪಾಲಿನ ಹಣ ನೀಡಲಿ ಸಾಕು'' ಎಂದು ತಿಳಿಸಿದರು.

ಕೇರಳದ ಪ್ರತಿಭಟನೆ ಬಗ್ಗೆ ಕೇಳಿದಾಗ, ``ನಾನು ಬೇರೆ ರಾಜ್ಯಗಳ ವಿಚಾರವಾಗಿ ಮಾತನಾಡುವುದಿಲ್ಲ. ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ನಮ್ಮ ಪಾಲಿನ ಹಣ ನಾವು ಕೇಳುತ್ತಿದ್ದೇವೆ. ಬೇರೆ ರಾಜ್ಯಗಳು ಲಾಭ ಪಡೆಯಲಿ. ನಮಗೆ ಅದರ ಬಗ್ಗೆ ಆಕ್ಷೇಪವಿಲ್ಲ. ಕೇಂದ್ರ ಸರ್ಕಾರ ಗುಜರಾತಿಗೆ ಗಿಫ್ಟ್ ಸಿಟಿ ಯೋಜನೆ ನೀಡಿದೆ. ನಮ್ಮ ರಾಜ್ಯಕ್ಕೂ ಒಂದು ಗಿಫ್ಟ್ ಸಿಟಿ ನೀಡಲಿ.

ಎಲ್ಲಾ ರಾಜ್ಯಗಳಿಗೂ ಇಂತಹ ಯೋಜನೆ ನೀಡಲಿ. ಭಾರತ ಒಕ್ಕೂಟ ರಾಷ್ಟ್ರ. ನಮಗೂ ಯೋಜನೆ ನೀಡಿ ಎಂದು ನಾವು ಆಗ್ರಹಿಸುತ್ತಿದ್ದೇವೆ. ನಮಗೆ ಅವಕಾಶ ನೀಡಿದರೆ ನಾವು ಅವರಿಗಿಂತ ಹೆಚ್ಚು ಉತ್ತಮವಾಗಿ ಕೆಲಸ ಮಾಡಿ ತೋರಿಸುತ್ತೇವೆ. ನಮ್ಮ ರಾಜ್ಯದ ತೆರಿಗೆ, ಜನಸಂಖ್ಯೆಗೆ ಅನುಗುಣವಾಗಿ ನಮ್ಮ ಪಾಲಿನ ಅನುದಾನ ನೀಡಲಿ'' ಎಂದು ತಿಳಿಸಿದರು.

ಕೇರಳ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೀರಾ ಎಂದು ಕೇಳಿದಾಗ, ``ಕೇರಳ ಸರ್ಕಾರ ನಮ್ಮ ಮುಖ್ಯಮಂತ್ರಿಗಳಿಗೆ ಈ ವಿಚಾರವಾಗಿ ಪತ್ರ ಬರೆದಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಅವರು ನಮ್ಮ ನೆರೆ ರಾಜ್ಯ. ಅವರನ್ನು ನಾವು ಗೌರವಿಸುತ್ತೇವೆ. ಅವರು ದೇಶದ ಆರ್ಥಿಕತೆಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ಎಲ್ಲರೂ ಒಂದೇ, ಯಾರಿಗೆಲ್ಲಾ ಅನ್ಯಾಯವಾಗಿದೆ ಅವರು ಧ್ವನಿ ಎತ್ತಲಿ'' ಎಂದು ತಿಳಿಸಿದರು.

ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರಿಗೆ ಮನವಿ ಮಾಡುತ್ತೀರಾ ಎಂದು ಕೇಳಿದಾಗ, ``ಖಂಡಿತವಾಗಿಯೂ ಮಾಡುತ್ತೇವೆ. ನಮ್ಮ ಇಲಾಖೆ ವಿಚಾರವಾಗಿ ಮಾತನಾಡಲು ಪ್ರಧಾನಮಂತ್ರಿಗಳ ಬಳಿ ಸಮಯ ಕೇಳಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು