LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ತಮ್ಮ ಸ್ಥಾನ ಗಟ್ಟಿ ಮಾಡಿಕೊಳ್ಳಲಿ

ವಿಜಯೇಂದ್ರ ವಿರುದ್ದ ಪ್ರಿಯಾಂಕ್ ಖರ್ಗೆ ವಾಗ್ದಾಳಿ


ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಂದಿನ ತಿಂಗಳಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗಲಿವೆ ಎಂದು ಅವರ ಪಕ್ಷದ ನಾಯಕರೇ ಮಾತನಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಇನ್ನು ಒಂದು ತಿಂಗಳ ನಂತರ ತಮ್ಮ ಸ್ಥಾನವೇ ಗ್ಯಾರಂಟಿ ಇಲ್ಲ. ನಮ್ಮ ಬಗ್ಗೆ ಮಾತನಾಡುವ ಮುನ್ನ ವಿಜಯೇಂದ್ರ ಅವರು ಮೊದಲು ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಳ್ಳಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಮುಂದಿನ 2028ರ ವಿಧಾನಸಭಾ ಚುನಾವಣೆ ಯಲ್ಲೂ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜಂಟಿ ನಾಯಕತ್ವದಲ್ಲಿ ನಾವು ಮುಂದಿನ ಚುನಾವಣೆಯನ್ನು ಎದುರಿಸಲಿದ್ದೇವೆ. ರಾಜ್ಯದ ಜನತೆ ಸೌಜನ್ಯಯುತವಾಗಿ ನಮಗೆ ಆಶೀರ್ವಾದ ಮಾಡಿದ್ದು, ಅವರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಡಲು ನಮ್ಮ ಸರ್ಕಾರ ಪ್ರಮಾಣಿಕ ಪ್ರಯತ್ನ ಮಾಡುತ್ತಿದೆ. ನಮ್ಮ ಕಾಂಗ್ರೆಸ್‌ನ ಯಾವ ನಾಯಕರೂ ಅಹಂಕಾರ ಅಥವಾ ದಿಮಾಕಿನಿಂದ ಮಾತನಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST