LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಎಲೆಮರೆಕಾಯಿಯಂತಿರುವ ಪ್ರತಿಭೆಗಳಿಗೆ ಬೆಳಕು ಸಂಸ್ಥೆ ವೇದಿಕೆ: ಬಿ.ಪಿ.ಕೃಷ್ಣೇಗೌಡ

ಬೆಳಕು ಸಂಸ್ಥೆಯ ಚಿಗುರು ಸಮ್ಮೇಳನ ಯಶಸ್ವಿ 


ಬೆಂಗಳೂರು: ಎಲೆಮರೆಕಾಯಿಯಂತಿರುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸುವ ಬೆಳಕು ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಾಸನ ಜಿಲ್ಲಾಧ್ಯಕ್ಷ ಹಾಗೂ ಬೆಳಕು ಸಂಸ್ಥೆಯ 126ನೇ ಕಾರ್ಯಕ್ರಮವಾದ ಚಿಗುರು ಸಮ್ಮೇಳನದ ಅಧ್ಯಕ್ಷ ಬಿ.ಪಿ. ಕೃಷ್ಣೇಗೌಡ ಹೇಳಿದರು.ಚಾಮರಾಜಪೇಟೆಯ ಅಕ್ಕಮಹಾದೇವಿ ಸಭಾಂಗಣದಲ್ಲಿ ಬೆಳಕು ಸಾಹಿತ್ಯ, ಶೈಕ್ಷಣಿಕ ಮತ್ತು ಸಾಂಸ್ಕöÈತಿಕ ಟ್ರಸ್ಟ್ ವತಿಯಿಂದ ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಅಣ್ಣಪ್ಪ ಮೇಟಿಗೌಡ ಅವರ ನೇತೃತ್ವದಲ್ಲಿ ಆಯೋಜಿಸಿದ್ದ 126ನೇ ಕಾರ್ಯಕ್ರಮ ಚಿಗುರು ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬೆಳಕು ಸಂಸ್ಥೆ ಈಗಾಗಲೇ 125 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದ್ದು, 126ನೇ ಕಾರ್ಯಕ್ರಮಕ್ಕೆ ತಮ್ಮನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ತಮ್ಮಂತೆಯೇ ರಾಜ್ಯದ ವಿವಿಧ ಭಾಗಗಳಲ್ಲಿ ಎಲೆಮರೆಕಾಯಿಯಂತಿರುವ ಅನೇಕ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಅಣ್ಣಪ್ಪ ಮೇಟಿಗೌಡ ಹಾಗೂ ಅವರ ತಂಡ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಲ್ಲಿಯೂ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಹಿತ್ಯ, ಸಾಂಸ್ಕöÈತಿಕ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಸಂಸ್ಥೆ ನೀಡುತ್ತಿರುವ ಕೊಡುಗೆ ಮುಂದುವರಿಯಲಿ ಎಂದು ಆಶಿಸಿದರು.ಚಿಗುರು ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ. ಜಿ.ವೈ. ಪದ್ಮನಾಗರಾಜು, ಸಾಹಿತ್ಯ, ಸಾಂಸ್ಕöÈತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡ ನಾಡು-ನುಡಿಯ ಸಂರಕ್ಷಣೆಗೆ ಬೆಳಕು ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ತಮ್ಮನ್ನು ಸಮ್ಮೇಳನದ ಉದ್ಘಾಟಕರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಸಂಸ್ಥೆಯ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಇಂತಹ ಕಾರ್ಯಕ್ರಮಗಳು ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಲ್ಲಿಯೂ ಮತ್ತಷ್ಟು ನಡೆಯಲಿ ಎಂದು ಆಶಿಸಿದರು.ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಅಂತರರಾಷ್ಟಿçÃಯ ಹಾಗೂ ರಾಷ್ಟçಮಟ್ಟದ ಪ್ರಶಸ್ತಿಗಳೊಂದಿಗೆ ಆದರ್ಶ ಮಹಿಳೆ ದಿವಂಗತ ಕೌಶಲ್ಯ ವೈ. ಕೋರಮಂಗಲ ಅವರ ದತ್ತಿ ಪ್ರಶಸ್ತಿ ಹಾಗೂ ಸಾಹಿತಿ ದಿವಂಗತ ಮಹಾಂತಪ್ಪ ಮೇಟಿಗೌಡ ಅವರ ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.ಪ್ರಶಸ್ತಿ ಪ್ರದಾನ ನೆರವೇರಿಸಿದ ಹಿರಿಯ ನಿವೃತ್ತ ಅಧಿಕಾರಿ ಹಾಗೂ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಮಾತನಾಡಿ, ಬೆಳಕು ಸಂಸ್ಥೆಯ ಹಲವು ಕಾರ್ಯಕ್ರಮಗಳಲ್ಲಿ ತಾವು ಭಾಗವಹಿಸಿದ್ದಾಗಿ ತಿಳಿಸಿದರು. ರಾಜ್ಯದಲ್ಲಿಯೇ ವಿಭಿನ್ನ ರೀತಿಯಲ್ಲಿ ಸಾಹಿತ್ಯ, ಸಾಂಸ್ಕöÈತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಅಣ್ಣಪ್ಪ ಮೇಟಿಗೌಡ ಅವರ ನೇತೃತ್ವದಲ್ಲಿ ನಡೆಯುವ ಸಮ್ಮೇಳನಗಳು ಯಶಸ್ವಿಯಾಗುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಪ್ರತಿಭಾನ್ವಿತರು ಇದ್ದು, ಅಂತಹವರನ್ನು ಗುರುತಿಸಿ ವೇದಿಕೆ ಕಲ್ಪಿಸುವ ಕಾರ್ಯವನ್ನು ಬೆಳಕು ಸಂಸ್ಥೆ ಮಾಡುತ್ತಿರುವುದು ಮಹತ್ವದ ಸಂಗತಿಯಾಗಿದೆ ಎಂದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಖಜಾಂಚಿ ಶಿವರುದ್ರಯ್ಯ ವಿ.ವಿ. ಮಾತನಾಡಿ, ಸಾಹಿತ್ಯ, ಸಾಂಸ್ಕöÈತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳು, ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಲೋಕಾರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ವಿಭಿನ್ನ ರೀತಿಯಲ್ಲಿ ಆಯೋಜಿಸುತ್ತಿರುವ ಬೆಳಕು ಸಂಸ್ಥೆಯ ಕಾರ್ಯ ಮೆಚ್ಚುವಂತದ್ದು. ಸಂಸ್ಥೆಯ ಮುಂದಿನ ಕಾರ್ಯಕ್ರಮಗಳಿಗೂ ತಮ್ಮ ಸಹಕಾರ ಇರಲಿದೆ ಎಂದು ತಿಳಿಸಿದರು.
ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷ ಹಾಗೂ ಕನ್ನಡಪರ ಚಿಂತಕ ಪಾಲನೇತ್ರ ಮಾತನಾಡಿ, ಕನ್ನಡ ಭಾಷೆ ಹಾಗೂ ಕನ್ನಡಿಗರ ಹಿತಾಸಕ್ತಿಗಾಗಿ ಬೆಳಕು ಸಂಸ್ಥೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಸಾಂಸ್ಕöÈತಿಕ ಕ್ಷೇತ್ರದ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಮೂಲಕ ಸಂಸ್ಥೆ ತನ್ನದೇ ಆದ ಛಾಪು ಮೂಡಿಸಿದೆ. ಇಂತಹ ಕಾರ್ಯಕ್ರಮಗಳು ಇನ್ನಷ್ಟು ಜಿಲ್ಲೆಗಳಲ್ಲಿ ನಡೆಯಲಿ ಎಂದು ಆಶಿಸಿದರು.ಕಾರ್ಯಕ್ರಮದಲ್ಲಿ ಬಾ.ನಂ. ಲೋಕೇಶ್ ಹಾಸನ ಸ್ವಾಗತಿಸಿದರು. ಚಂದನಾ ಆರ್. ಹಿರೇಮಠ ಜಾನೇಕಲ್ ಹಾಗೂ ನಾಗರತ್ನ ಪ್ರಾರ್ಥಿಸಿದರು. ಖ್ಯಾತ ನಿರೂಪಕಿ ಹಾಗೂ ಶಿಕ್ಷಕಿ ಡಿ.ಸಿ. ಉಮಾ ನಿರೂಪಿಸಿದರು. ಅಂಬು ಪಾಟೀಲ್ ಶಂಭುಕೇರಿ ಹಾಗೂ ರಾಘವೇಂದ್ರ ಅಕ್ಕರಕಿ ವೇದಿಕೆ ನಿರ್ವಹಿಸಿದರು.ಸಮ್ಮೇಳನದಲ್ಲಿ ಸಂಸ್ಥಾಪಕರಾದ ಅಣ್ಣಪ್ಪ ಮೇಟಿಗೌಡ,ಕೆ ಸಿ ಸುಜಾತ, ಚಿತ್ರನಟ ಅಭಿಜಿತ್, ಬೆಂಗಳೂರಿನ ಶೈಕ್ಷಣಿಕ ಸಾಧಕಿ ಹಾಗೂ ಸಮಾಜಸೇವಕಿ ಡಾ. ರೂಪಾ ದೇವರಾಜ್, ಡೆಪುö್ಯಟಿ ತಹಸೀಲ್ದಾರ್ ಚೈತ್ರ, ಚಲನಚಿತ್ರ ನಟ ಅಂಕುಶ್ ಏಕಲವ್ಯ, ನಟಿಯರಾದ ಮೀರಾ ಹಾಗೂ ಸೌಭಾಗ್ಯ, ಡಾ. ಮಲ್ಲಿಕಾ ಎಂ., ಸಹಾಯಕ ಅಂಚೆ ಅಧೀಕ್ಷಕ ಬಿ. ಜಯಕುಮಾರ್, ಕವಿ ಎ.ಎಸ್.ಕೆ. ಸ್ವಾಮಿ, ಖ್ಯಾತ ವಾಗ್ಮಿಗಳಾದ ನರಸಿಂಹಮೂರ್ತಿ ಮಾಗಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST