LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮಾರ್ಚ್ 22 ರಿಂದ ನೆಚ್ಚಿನ ಚಿತ್ರಮಂದಿರಗಳಿಗೆ "ಲೈನ್ ಮ್ಯಾನ್" ಆಗಮನ

ಪರ್ಪಲ್ ರಾಕ್ ಸಂಸ್ಥೆ ನಿರ್ಮಾಣದ ಈ ಚಿತ್ರಕ್ಕೆ ರಘು ಶಾಸ್ತ್ರಿ ನಿರ್ದೇಶನ.ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಚಿತ್ರಗಳನ್ನು ನೀಡುತ್ತಾ ಬಂದಿರುವ ಪರ್ಪಲ್ ರಾಕ್ ಸಂಸ್ಥೆಯಿಂದ ನಿರ್ಮಾಣವಾಗಿರುವ "ಲೈನ್ ಮ್ಯಾನ್" ಚಿತ್ರ ಮಾರ್ಚ್ 22ರಂದು ಬಿಡುಗಡೆಯಾಗಲಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ನಿರ್ಮಾಣವಾಗಿದ್ದು, ಎರಡು ಭಾಷೆಗಳಲ್ಲೂ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಚಿತ್ರತಂಡದ ಸದಸ್ಯರು "ಲೈನ್ ಮ್ಯಾನ್" ಕುರಿತು ಮಾತನಾಡಿದರು.

ಇದು ಲಾಕ್ ಡೌನ್ ಸಮಯದಲ್ಲಿ ಹುಟ್ಟಿದ ಕಥೆ. ತುಂಬಾ ಜನರಿಗೆ ಲಾಕ್ ಡೌನ್ ಸಾಕಷ್ಟು ಅನುಭವ ನೀಡಿದೆ. ನಾವು ಬೇಕಾಗಿರುವುದಕ್ಕಿಂತ ಬೇಡದಿರುವುದಕ್ಕೆ ಹೆಚ್ಚು ತಲೆ ಕೆಡಿಸಿಕೊಂಡಿದ್ದೇವೆ ಎಂದು ಲಾಕ್ ಡೌನ್ ನಲ್ಲಿ ನನಗನಿಸಿದ್ದು. ಕರೆಂಟ್ ಹೋದಾಗ ಕೆ.ಇ.ಬಿ ಅವರಿಗೆ ಫೋನ್ ಮಾಡುತ್ತೇವೆ ಹೊರತು, ಮನೆಯಲ್ಲಿ ಅಜ್ಜಿ ಇದ್ದರೆ ಕಥೆ ಕೇಳುವ ಮನಸ್ಸು ಮಾಡಲ್ಲ. ಭಾವನೆಗಳಿಗೆ ಸ್ಪಂದಿಸುವುದು ಇತ್ತೀಚಿಗೆ ಬಹಳ ಕಡಿಮೆಯಾಗಿದೆ.

ಇಂತಹ ಸಾಕಷ್ಟು ಅಂಶಗಳನ್ನಿಟ್ಟುಕೊಂಡು "ಲೈನ್ ಮ್ಯಾನ್" ಕಥೆ ಹೆಣಿದಿದ್ದೇನೆ. ಆ ಕಥೆ ನಿರ್ಮಾಪಕರಿಗೆ ಇಷ್ಟವಾಯಿತು. ಪರ್ಪಲ್ ರಾಕ್ ಸಂಸ್ಥೆಯವರು ಚಿತ್ರ ನಿರ್ಮಾಣಕ್ಕೆ ಮುಂದಾದರು. ನನ್ನ ಊರಾದ ಚಾಮರಾಜನಗರದ ಚಂದಕವಾಡಿಯಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಚಿತ್ರೀಕರಣ ಸರಾಗವಾಗಿ ಸಾಗಲು ಸಹಕಾರ ನೀಡಿದ ನನ್ನ ಊರಿನವರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ತಿಳಿಸುತ್ತೇನೆ.

ಚಿತ್ರ ಇತ್ತೀಚೆಗೆ ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದುಕೊಂಡಿದೆ. ಇದೇ ಮಾರ್ಚ್ 22, ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ರಘು ಶಾಸ್ತ್ರಿ ತಿಳಿಸಿದರು.
ನಮ್ಮ ಪರ್ಪಲ್ ರಾಕ್ ಸಂಸ್ಥೆಯಿಂದ ನಿರ್ಮಾಣವಾಗಿರುವ ಮೂರನೇ ಚಿತ್ರವಿದು. ಯತೀಶ್ ವೆಂಕಟೇಶ್, ಶ್ರೀನಿವಾಸ್ ಬಿಂಡಿಗನವಿಲೆ, ಅಜಯ್ ಅಪರೂಪ್ ಹಾಗೂ ನಾನು ಈ ಚಿತ್ರದ ನಿರ್ಮಾಪಕರು.

ತೆಲುಗಿನಲ್ಲಿ ಜನಪ್ರಿಯರಾಗಿರುವ ತ್ರಿಗುಣ್ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಉಳಿದಂತೆ ಕಾಜಲ್ ಕುಂದರ್, ಬಿ.ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಕಮಲ, ಹಾಗೂ "ತರ್ಲೆನನ್ಮಗ" ಖ್ಯಾತಿಯ ಅಂಜಲಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ ಎಂದು ನಿರ್ಮಾಪಕರಲ್ಲೊಬ್ಬರಾದ ಗಣೇಶ್ ಪಾಪಣ್ಣ ತಿಳಿಸಿದ್ದಾರೆ.ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೂರು ಹಾಡುಗಳಿದ್ದು, ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಪ್ರಚುರ ಪಿ ಪಿ , ಜ್ಯೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಈ ಚಿತ್ರದ ಸಹ ನಿರ್ಮಾಪಕರು ಹೌದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು