LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಲೈನ್ ಮ್ಯಾನ್" ಈ ವಾರ ತೆರೆಗೆ

ಒಂದು ಹಳ್ಳಿಯಲ್ಲಿ ಯಾರಿಂದಲೂ ಮಾಡಲಾಗದಂಥ ಬದಲಾವಣೆ ತಂದ ಲೈನ್ ಮ್ಯಾನ್ ಒಬ್ಬನ ಕಥಾಹಂದರ ಹೊಂದಿರುವ "ಲೈನ್ ಮ್ಯಾನ್" ಚಿತ್ರ ಈ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ.ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಚಿತ್ರಗಳನ್ನು ನೀಡುತ್ತಾ ಬಂದಿರುವ ಪರ್ಪಲ್ ರಾಕ್ ಸಂಸ್ಥೆಯಿಂದ ನಿರ್ಮಾಣವಾಗಿರುವ "ಲೈನ್ ಮ್ಯಾನ್" ಚಿತ್ರವು ಕನ್ನಡ ಹಾಗೂ ತೆಲುಗಿನಲ್ಲಿ ನಿರ್ಮಾಣವಾಗಿದ್ದು, ಎರಡು ಭಾಷೆಗಳಲ್ಲೂ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಟ್ಸಾಪ್ ಅಂತ ಅದರಲ್ಲೇ ಮುಳುಗಿರುವ ಜನ ಒಟ್ಟಾಗಿ ಕೂತು ಮಾತಾಡುವುದು, ಖುಷಿಯಾಗಿರುವುದನ್ನೇ ಮರೆತುಬಿಟ್ಟಿದ್ದಾರೆ. ಭಾವನೆಗಳಿಗೆ ಸ್ಪಂದಿಸುವುದು ಇತ್ತೀಚಿಗೆ ಬಹಳ ಕಡಿಮೆಯಾಗಿದೆ. ಇಂಥ ಸುಂದರ ಕ್ಷಣಗಳನ್ನು "ಲೈನ್ ಮ್ಯಾನ್" ಚಿತ್ರ ನೆನಪಿಸುತ್ತದೆ. ಚಾಮರಾಜನಗರದ ಚಂದಕವಾಡಿಯಲ್ಲಿ ಇಡೀ ಚಿತ್ರವನ್ನು ಚಿತ್ರೀಕರಿಸಲಾಗಿದೆ. ಇತ್ತೀಚೆಗೆ ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದುಕೊಂಡಿದೆ.

ಪರ್ಪಲ್ ರಾಕ್ ಸಂಸ್ಥೆಯಿಂದ ನಿರ್ಮಾಣವಾಗಿರುವ ಮೂರನೇ ಚಿತ್ರವಿದು. ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ, ಅಜಯ್ ಅಪರೂಪ್ ಈ ಚಿತ್ರದ ನಿರ್ಮಾಪಕರು.ತೆಲುಗಿನ ಜನಪ್ರಿಯ ನಟ ತ್ರಿಗುಣ್ ಈ ಚಿತ್ರದ ನಾಯಕನಾಗಿದ್ದು, ಕಾಜಲ್ ಕುಂದರ್, ಬಿ.ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಕಮಲ, ಹಾಗೂ "ತರ್ಲೆನನ್ಮಗ" ಖ್ಯಾತಿಯ ಅಂಜಲಿ ಈ ಚಿತ್ರದ ಪ್ರಮುಖ ತಾರಾಬಳಗದಲ್ಲಿದ್ದಾರೆ.
ಶಾಂತಿ ಸಾಗರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಪ್ರಚುರ ಪಿ ಪಿ , ಜ್ಯೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಈ ಚಿತ್ರದ ಸಹ ನಿರ್ಮಾಪಕರೂ ಹೌದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು