LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಲೋಕಸಭಾ ಚುನಾವಣೆ: ಯದುವೀರ್ ಸ್ಪರ್ಧೆ?

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.ಇಂದು ರಾತ್ರಿ ಅಥವಾ ನಾಳೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಸರು ಬಿಜೆಪಿಯಿಂದ ಘೋಷಣೆಯಾಗುವ ಸಾಧ್ಯತೆಇದೆ ಎಂದು ಬಿಜೆಪಿ ಉನ್ನತ ಮೂಲಗಳಿಂದಲೇ ಮಾಹಿತಿ ಲಭ್ಯವಾಗಿದೆ.

ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವದೆಡೆಗೆ ಹೆಜ್ಜೆಯಿಟ್ಟ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್.ಆರ್‍ಎಸ್‍ಎಸ್‍ನ ಪ್ರಮುಖರಾದ ಹರೀಶ್ ಪೈ ನೇತೃತ್ವದಲ್ಲಿ ಬಿಜೆಪಿಗೆ ಆಗಮಿಸುವಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‍ಗೆ ಬೇಡಿಕೆಯಿಟ್ಟು, ಇವರ ಬೇಡಿಕೆಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ.

ಇದೇ ವಿಚಾರಕ್ಕೆ ರಾಣಿ ತ್ರಿಷಿಕಾ ಸಿಂಗ್ ಒಡೆಯರ್ ಹಾಗೂ ರಾಜಮಾತೆ ಪ್ರಮೋದಾದೇವಿ ಒಡೆಯರ್ ಸಹಮತ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.ರಾಜಮನೆತನ ರಾಜಕಾರಣಕ್ಕೆ ಬರುವುದರಿಂದ, ಮನೆತನಕ್ಕೂ ಸಮಾಜಕ್ಕೂ ಒಳ್ಳೆಯದಾಗಲಿದೆ ಎಂದು ಮಾತುಕತೆ ಮೂಲಕ ಒಪ್ಪಿಸಿದ ಹರೀಶ್ ಪೈ. ಇಂದು ದೆಹಲಿಯಲ್ಲಿ ನಡೆಯಲಿರುವ ಸಿಇಸಿ ಸಭೆಯ ಬಳಿಕ ಬಿಡುಗಡೆಯಾಗಲಿರುವ ಪಟ್ಟಿಯಲ್ಲಿಯೇ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಸರು ಅಂತಿಮವಾಗುವ ಸಾಧ್ಯತೆಯಿದೆ.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಯುವ ಹಾಗೂ ಹೊಸಮುಖದ ಅಭ್ಯರ್ಥಿಯಾಗಿದ್ದು, ರಾಜಕಾರಣಕ್ಕೆ ಆಗಮಿಸುವ ಮುನ್ನವೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕುಟುಂಬಸ್ಥರು. ಒಂದು ರಾಜಮನೆತನದವರಿಗೆ ಟಿಕೆಟ್ ಕೊಟ್ಟಿದ್ದೇವೆ ಎಂದು ಬಿಜೆಪಿ ಪಕ್ಷಕ್ಕೂ ಹೆಗ್ಗಳಿಕೆ. ಇಲ್ಲಿಯವರೆಗೂ ಬಿಜೆಪಿ ರಾಜ್ಯದಲ್ಲಿ ಇಂತಹ ಪ್ರಯೋಗ ಮಾಡದೇ ಇದ್ದು, ಇದೊಂದು ಹೊಸ ಪ್ರಯತ್ನ.

ಇತ್ತ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಕಾರಣಕ್ಕೆ ಬಂದಿದ್ದೇ ಆದ್ರೆ, ಅವರ ಆಗಮನದ ಪ್ರಭಾವ ಹಳೆಯ ಮೈಸೂರು ಭಾಗದ ಕನಿಷ್ಠ ಆರೇಳು ಜಿಲ್ಲೆಗಳಲ್ಲಿನ ಕ್ಷೇತ್ರಗಳ ಮೇಲೆ ಬೀರಲಿರುವುದು. ಹೀಗೆ ಸಾಲು ಸಾಲು ಕಾರಣಗಳನ್ನಿಟ್ಟುಕೊಂಡು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‍ಗೆ ಆಫರ್ ಕೊಟ್ಟಿರುವ ಬಿಜೆಪಿ. ಆರ್‍ಎಸ್‍ಎಸ್‍ನ ಪ್ರಮುಖರಾದ ಹರೀಶ್ ಪೈ ನೇತೃತ್ವದಲ್ಲಿ ಮಾತುಕತೆ ನಡೆಸಿ, ಬಿಜೆಪಿ ಸಹಮತ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು