LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

"ಚೀಟಿ ವ್ಯವಹಾರದಲ್ಲಿ ನಷ್ಟ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ"

ಬೆಂಗಳೂರು: ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಅವರಿಗೂ ಆಪ್ತನಾಗಿದ್ದರು. ನಿನ್ನೆ ಸಂಜೆ ವೈಯಾಲಿಕಾವಲ್‌ನಲ್ಲಿರುವ ತಮ್ಮ ಟೂರ್ಸ್ ಅಂಡ್ ಟ್ರಾವೆಲ್ಸ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸದ್ಯ ಮೃತದೇಹವನ್ನ ಬೌರಿಂಗ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇಂದು ಮಧ್ಯಾಹ್ನ ಅಶ್ವಥ್ ನಾರಾಯಣ್ ಅವರು ದರ್ಶನ ಮಾಡಲಿದ್ದಾರೆ. ಮತ್ತೊಂದು ಕಡೆ ವೆಂಕಟೇಶ್ ಕಳೆದ ೨ ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಶವ ಪತ್ತೆಯಾಗಿದೆ ಅಂತ ಹೇಳಲಾಗುತ್ತಿದೆ. ಹಣಕಾಸು ನಷ್ಟದಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆಪ್ತ ಮೂಲಗಳು ಪೊಲೀಸರಿಗೆ ತಿಳಿಸಿವೆ.

ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಚೀಟಿ ನಡೆಸುತ್ತಿದ್ದರು.ಆದರೆ ೭ ಜನ ಚೀಟಿ ಹಣ ಕಟ್ಟದೇ ಮೋಸ ಮಾಡಿದ್ದರು.ಇದೇ ಸಮಯದಲ್ಲಿ ಚೀಟಿ ಕಟ್ಟಿದ್ದ ಇನ್ನುಳಿದ ನಾಲ್ವರು ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರಂತೆ.ಇದರಿAದ ಮಾನಸಿಕ ಹಿಂಸೆ ಅನುಭವಿಸುತ್ತಿದ್ದ ವೆಂಕಟೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಯುವ ಮುನ್ನ ವಿಡಿಯೋ ಮಾಡಿಟ್ಟು, ಹಣಕಾಸು ನಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ.ಜೊತೆಗೆ ಜೀವನದಲ್ಲಿ ಏನಾದರೂ ಆಗಿ ಚೀಟಿ ಏಜೆಂಟ್ ಆಗಬೇಡಿ ಅಂತಲೂ ಅಲವತ್ತುಕೊಂಡಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು