LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಇಪ್ಪತ್ತೈದು ನಿಮಿಷಗಳಲ್ಲೊಂದು ಪ್ರೇಮ ಕಥಾನಕ "ಲವ್ ರೀಸೆಟ್"

ಹಿರಿತೆರೆಯಲ್ಲಿ ಮೊದಲ ಚಿತ್ರ ನಿರ್ದೇಶಿಸುವವರು ಮೊದಲು ಕಿರುಚಿತ್ರದ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸುತ್ತಾರೆ. ಎಷ್ಟೋ ಕಿರುಚಿತ್ರಗಳು ಜನರ ಮನಸ್ಸಿಗೆ ಹತ್ತಿರವಾಗಿರುವುದು ಹೌದು. ಅಂತಹ ವಿಭಿನ್ನ ಕಿರುಚಿತ್ರ " ಲವ್ ರೀಸೆಟ್" ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀಗಣೇಶ್ ನಿರ್ದೇಶಿಸಿ,

"ಪುಟ್ಟಕ್ಕನ ಮಕ್ಕಳು" ಖ್ಯಾತಿಯ ಪವನ್ ಕುಮಾರ್ ಹಾಗೂ ಸಂಜನಾ ಬುರ್ಲಿ ನಾಯಕ, ನಾಯಕಿಯಾಗಿ ನಟಿಸಿರುವ ಈ ಕಿರುಚಿತ್ರದ ಪ್ರೀಮಿಯರ್ ಹಾಗೂ ಪತ್ರಿಕಾಗೋಷ್ಠಿ ಇತ್ತೀಚಿಗೆ ನಡೆಯಿತು. "ಪುಟ್ಟಕ್ಕನ ಮಕ್ಕಳು" ಧಾರಾವಾಹಿ ತಂಡದವರು, ಬಿಗ್ ಬಾಸ್ ಖ್ಯಾತಿಯ ಸ್ನೇಹಿತ್, ಭೂಮಿ ಶೆಟ್ಟಿ, ರಮೇಶ್ ಪಂಡಿತ್, ಕಲಾಗಂಗೋತ್ರಿ ಮಂಜು, ಪದ್ಮಕಲಾ ಸೇರಿದಂತೆ ಅನೇಕ ಗಣ್ಯರು ಪ್ರೀಮಿಯರ್ ಗೆ ಆಗಮಿಸಿ ತಂಡಕ್ಕೆ ಶುಭ ಕೋರಿದರು.

ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ಶ್ರೀಗಣೇಶ್, ನಾನು ಮೂಲತಃ ಐಟಿ ಉದ್ಯೋಗಿ. ಸಿನಿಮಾ ಮಾಡಬೇಕೆಂಬ ಆಸೆಯಿದೆ. ಅದರ ಪೂರ್ವಭಾವಿಯಾಗಿ ಈ ಕಿರುಚಿತ್ರ ಮಾಡಿದ್ದೇನೆ. ಇದೊಂದು ಪ್ರೇಮ ಕಥಾನಕ. ಈಗಿನ ಪ್ರೇಮಿಗಳ ಮನಸ್ಥಿತಿಯನ್ನು 25 ನಿಮಿಷಗಳಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇನೆ. ಈ ಕಿರುಚಿತ್ರದಲ್ಲಿ ವಿ. ನಾಗೇಂದ್ರ ಪ್ರಸಾದ್ ಬರೆದಿರುವ "ಅನುರಾಗದ ನೆನಪೀಗ ಕೊನೆಯಾಗಲಿ' ಎಂಬ ಸುಂದರವಾದ ಹಾಡೊಂದಿದೆ.

ಸರಿಗಮಪ ಖ್ಯಾತಿಯ ಸುನೀಲ್, ಅನನ್ಯ ಪ್ರಕಾಶ್ ದನಿಯಾಗಿರುವ ಈ ಹಾಡಿಗೆ ಜೋಯಲ್ ಹಾಗೂ ಅಭಿಲಾಶ್ ಸಂಗೀತ ನೀಡಿದ್ದಾರೆ. ಈ ಹಾಡನ್ನುA2 music ಮೂಲಕ ಮೊದಲೆ ಬಿಡುಗಡೆಯಾಗಿತ್ತು. 7 ಶೇಡ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಕಿರುಚಿತ್ರ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.

"ಪುಟ್ಟಕ್ಕನ ಮಕ್ಕಳು " ಧಾರಾವಾಹಿ ಮುರಳಿ ಪಾತ್ರವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲೂ ನಟಿಸುವ ಆಸಯಿದೆ. ಈ ಕಿರುಚಿತ್ರದಲ್ಲಿ "ಅಮರ್" ನನ್ನ ಪಾತ್ರದ ಹೆಸರು. ಪ್ರೀತಿ ಹಾಗೂ ಕೆರಿಯರ್ ವಿಷಯ ಬಂದಾಗ ಹುಡುಗ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾನೆ ಎಂಬುದನ್ನು ನಿರ್ದೇಶಕರು ಇದರಲ್ಲಿ ತೋರಿಸಿದ್ದಾರೆ ಎಂದು ನಾಯಕ ಪವನ್ ಕುಮಾರ್ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು