LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಚಿತ್ರೀಕರಣ ಮುಗಿಸಿಕೊಂಡ `ಲವ್ ಸೀಸನ್ಸ್'!

ಎಲ್ಲರ ಬದುಕಿಗೆ ಹತ್ತಿರಾದ ಕಥಾನಕವನ್ನು ನವಿರು ಪ್ರೇಮದ ಪರಿಧಿಯಲ್ಲಿ ಕಟ್ಟಿಕೊಟ್ಟಿರುವ `ಲವ್ ಸೀಸನ್ಸ್' ಚಿತ್ರ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿಕೊಂಡಿದೆ. ರಂಗಭೂಮಿ ಹಿನ್ನೆಲೆಯ ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ `ಲವ್ ಸೀಸನ್ಸ್' ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳತ್ತ ಹೊರಳಿಕೊಂಡಿದೆ. ಸಾಮಾನ್ಯವಾಗಿ ಕೆಲ ಸಿನಿಮಾಗಳನ್ನು ನೆಲಮೂಲದ ಕಥೆಯ ಮೂಲಕ ವಿಶೇಷವಾಗಿ ಗುರುತಿಸಲಾಗುತ್ತೆ. ಆದರೆ, `ಲವ್ ಸೀಸನ್ಸ್' ನಮ್ಮ ಕಣ್ಣಿಗೆ ಕಂಡೂ ಕಾಣದಂತಿರುವ ಗಲ್ಲಿ ಗಲ್ಲಿಯ ಕಥೆಯೆಂಬುದು ನಿರ್ದೇಶಕರ ಮಾತು.
ರಂಗಭೂಮಿ ಮತ್ತು ಸಿನಿಮಾ ಜಗತ್ತಿನಲ್ಲಿ ಕಳೆದ ಹತ್ತು ವರ್ಷದಿಂದೀಚೆಗೆ ಕಾರ್ಯ ನಿರ್ವಹಿಸುತ್ತಿರುವವರು ಕೃತ್ವಿಕ್. ಅವರು `ಲವ್ ಸೀಸನ್ಸ್' ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ವಿಶೇಷವೆಂದರೆ, ರಂಗಭೂಮಿ ಹಿನ್ನೆಲೆಯ ಹೊಸಬರಿಂದಲೇ ಈ ಚಿತ್ರ ಕಳೆಗಟ್ಟಿಕೊಂಡಿದೆ. ಮಂಡ್ಯ ರಮೇಶ್ ಸಾರಥ್ಯದ ನಟನಾ ಸಂಸ್ಥೆಯಲ್ಲಿ ಪಳಗಿಕೊಂಡಿರುವ ಮುಕುಂದ ರಾಮಸ್ವಾಮಿ ನಾಯಕನಾಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನ ಗೌಡ ಮತ್ತು ಶ್ವೇತಾ ಕೊಗ್ಲೂರ್ ನಾಯಕಿಯರಾಗಿ ಜೊತೆಯಾಗಿದ್ದಾರೆ. ಗಟ್ಟಿ ಕಥೆ ಮತ್ತು ಈಗಿನ ಕಾಲಕ್ಕೆ ಅಗತ್ಯವಾಗಿರುವ ಸಂದೇಶ ಹೊಂದಿರುವ ಕಥೆಯೊಂದಿಗೆ ನಿರ್ದೇಶಕರು ಈ ಚಿತ್ರವನ್ನು ರೂಪಿಸಿದ್ದಾರಂತೆ.
ಎನ್.ಆರ್ ಸ್ಟುಡಿಯೋಸ್ ಬ್ಯಾನರ್‌ನಡಿಯಲ್ಲಿ ಎನ್.ಆರ್ ಮಂಜುನಾಥ (ನೀಲೇರಿ) ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಯಾರು ಯಾರನ್ನೂ ನಂಬಲು ಕಷ್ಟವಾಗುವಂಥಾ ಕಾಲಮಾನ. ನಂಬಿಕೆಯೆAಬ ಚುಂಬಕ ಶಕ್ತಿಯ ಸುತ್ತ ಹೊಸೆಯಲ್ಪಟ್ಟಿರುವ, ಪ್ರೇಮದ ಪರಾಗ ಮೆತ್ತಿಕೊಂಡಿರುವ ಕಥೆ `ಲವ್ ಸೀಸನ್ಸ್'ನಲ್ಲಿದೆ. ಬೆಂಗಳೂರಿನ ನಾನಾ ಏರಿಯಾಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಚಿತ್ರದ ಟೀಸರ್ ಬಿಡುಗಡೆಗೊಳಿಸಲು ಚಿತ್ರತಂಡ ತಯಾರಾಗುತ್ತಿದೆ.
ವೀರ್ ಸಮರ್ಥ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿವೆ. ಕೆ.ಕಲ್ಯಾಣ್, ಪ್ರಮೋದ್ ಮರವಂತೆ ಮುಂತಾದವರು ಸಾಹಿತ್ಯ ಬರೆದಿದ್ದಾರೆ. ಅವಿನಾಶ ಶಾಸ್ತಿç ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಭಜರಂಗಿ ಲೋಕಿ ನೃತ್ಯ ಸಂಯೋಜನೆಯಿರುವ ಈ ಚಿತ್ರದಲ್ಲಿ ಮಂಡ್ಯ ರಮೇಶ್, ರಾಜೇಶ್ ನಟರಂಗ, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ, ಹುಲಿ ಕಾರ್ತಿಕ್, ಬೇಬಿ ರಿತು ಸಿಂಗ್ ಮುಂತಾದವರ ತಾರಾಗಣವಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು