LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

‘ಸೂಪರ್’ ಹಣಾಹಣಿಗೆ ಲಖನೌ ಸಜ್ಜು

ಲಖನೌ: ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಆತಿಥೇಯ ಲಖನೌ ಸೂಪರ್ ಜೈಂಟ್ಸ್ ತಂಡದ ಸ್ಫೋಟಕ ಶೈಲಿಯ ಬ್ಯಾಟರ್‍ಗಳು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಬೌಲರ್‍ಗಳ ನಡುವಣ ಹಣಾಹಣಿಯಾಗುವ ನಿರೀಕ್ಷೆ ಇದೆ.

ಏಕನಾ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆದ್ದು ಸೋಲಿನ ಸರಪಳಿ ಕಳಚಿಕೊಳ್ಳುವ ತವಕದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ತಂಡವಿದೆ. ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಋತುರಾಜ್ ಗಾಯಕವಾಡ ಅವರ ಚೆನ್ನೈ ತಂಡವು ಗೆಲುವಿನ ಓಟವನ್ನು ಮುಂದುವರಿಸುವತ್ತ ಚಿತ್ತ ನೆಟ್ಟಿದೆ.

ಲಖನೌ ತಂಡವು ಐದನೇ ಸ್ಥಾನದಲ್ಲಿದೆ. ತನ್ನ ಕಳೆದ ಎರಡೂ ಪಂದ್ಯಗಳಲ್ಲಿ ಸೋತಿದೆ. ಅದೇ ಚೆನ್ನೈ ಸತತ ಎಡಡು ಪಂದ್ಯಗಳನ್ನು ಜಯಿಸಿದೆ. ಅದರಲ್ಲಿ ಚೆನ್ನೈ ಬೌಲರ್‍ಗಳು ಮಿಂಚಿದ್ದರು. ಮಥೀಷ ಪಥಿರಾಣ ಯಾರ್ಕರ್‍ಗಳು, ಮುಸ್ತಫಿಜುರ್ ರೆಹಮಾನ್ ಅವರ ಕಟರ್ಸ್ ಮತ್ತು ಸ್ವಿಂಗ್ ಎಸೆತಗಳಿಗೆ ಬ್ಯಾಟರ್‍ಗಳು ಶರಣಾಗಿದ್ದರು. ಇನ್ನೊಂದೆಡೆ ರವೀಂದ್ರ ಜಡೇಜ ಸ್ಪಿನ್ ಮೋಡಿಯೂ ನಡೆಯುತ್ತಿದೆ. ಲಖನೌ ಕ್ರೀಡಾಂಗಣದ ಪಿಚ್ ಸ್ಪಿನ್ನರ್‍ಗಳಿಗೆ ಹೆಚ್ಚು ನೆರವು ನೀಡುವ ಸಾಧ್ಯತೆ ಇದ್ದು, ಜಡೇಜ ಪರಿಣಾಮ ಬೀರುವ ಸಾಧ್ಯತೆ ಇದೆ.

ಲಖನೌ ತಂಡದ ಪ್ರಮುಖ ಬ್ಯಾಟರ್‍ಗಳಾದ ಕ್ವಿಂಟನ್ ಡಿಕಾಕ್, ರಾಹುಲ್, ನಿಕೊಲಸ್ ಪೂರನ್ ಅವರನ್ನು ಕಟ್ಟಿಹಾಕುವುದು ಬೌಲರ್‍ಗಳ ಮುಂದಿರುವ ಪ್ರಮುಖ ಸವಾಲು. ಮಾರ್ಕಸ್ ಸ್ಟೊಯಿನಿಸ್, ದೇವದತ್ತ ಪಡಿಕ್ಕಲ್ ಹಾಗೂ ಕೃಣಾಲ್ ಪಾಂಡ್ಯ ತಮ್ಮ ನೈಜ ಲಯಕ್ಕೆ ಮರಳಿದರೆ ಲಖನೌ ತಂಡವು ಹೆಚ್ಚು ರನ್ ಕಲೆ ಹಾಕಬಹುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು